Team India: ಭಾರತ ತಂಡಕ್ಕೆ ಎಂಟ್ರಿ ಕೊಡಲು ಸಜ್ಜಾದ ರವಿಚಂದ್ರನ್ ಅಶ್ವಿನ್ ರೀತಿಯ ಬೌಲರ್

ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಸಜ್ಜಾಗುತ್ತಿದೆ. ಇನ್ನೂ ಭಾರತ ತಂಡವನ್ನು ಆಯ್ಕೆ ಮಾಡಿಲ್ಲವಾದರೂ ದುಲೀಪ್ ಟ್ರೋಫಿಯಲ್ಲಿ ಆಡುತ್ತಿರುವ ಆಟಗಾರರಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಇದೀಗ ರವಿಚಂದ್ರನ್ ಅಶ್ವಿನ್ ಅವರಂತೆಯೇ ಬೌಲಿಂಗ್ ಶೈಲಿಯನ್ನು ಹೊಂದಿರುವ ಹಿಮಾಂಶು ಶರ್ಮಾ ಅವರನ್ನು ಭಾರತ ತಂಡದ ಶಿಬಿರಕ್ಕೆ ಕರೆಯಲಾಗಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಮುನ್ನ, ಬಿಸಿಸಿಐ ಸೆಪ್ಟೆಂಬರ್ 13-18 ರವರೆಗೆ ಚೆನ್ನೈನಲ್ಲಿ ಭಾರತೀಯ ಕ್ರಿಕೆಟ್ ತಂಡ ಅಭ್ಯಾಸವನ್ನು ನಡೆಸಲಿದೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಮುಂಬೈನ ಯುವ ಸ್ಪಿನ್ನರ್ ಹಿಮಾಂಶು ಸಿಂಗ್ ಅವರನ್ನು ಈ ಅಭ್ಯಾಸ ಶಿಬಿರಕ್ಕೆ ಆಹ್ವಾನ ನೀಡಲಾಗಿದೆ. ಬಾಂಗ್ಲಾದೇಶದ ಸ್ಪಿನ್ನರ್ ಗಳನ್ನು ಎದುರಿಸಲು ಸಜ್ಜಾಗಲು ಭಾರತದ ಬ್ಯಾಟರ್ ಗಳಿಗೆ ಸಹಾಯ ಮಾಡಲಿದ್ದಾರೆ.

Himanshu Singh Joins Team India Camp Ahead of Bangladesh Test Series

ಶಿಬಿರಕ್ಕೆ ಆಯ್ಕೆಯಾದ ಎಲ್ಲಾ ಆಟಗಾರರನ್ನು ಸೆಪ್ಟೆಂಬರ್ 12 ರಂದು ಚೆನ್ನೈಗೆ ಬರುವಂತೆ ಸೂಚನೆ ನೀಡಲಾಗಿದೆ. ದುಲೀಪ್ ಟ್ರೋಫಿಯಲ್ಲಿ ಆಡುತ್ತಿರುವವರು ಮೊದಲ ಪಂದ್ಯದ ಬಳಿಕ ಚೆನ್ನೈಗೆ ತೆರಳಲಿದ್ದಾರೆ.

ಅಶ್ವಿನ್ ರೀತಿಯ ಬೌಲರ್

ಹಿಮಾಂಶು ಶರ್ಮಾ ಅವರ ಬೌಲಿಂಗ್ ಶೈಲಿ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಅವರ ಸಹ-ಆಯ್ಕೆಗಾರರ ಗಮನ ಸೆಳೆದಿದೆ. ಆತನ ಪ್ರದರ್ಶನವನ್ನು ಗಮನಿಸುತ್ತಿದ್ದು 6 ಅಡಿ 4 ಇಂಚು ಎತ್ತರ ಇರುವ ಹಿಮಾಂಶು ರವಿಚಂದ್ರನ್ ಅಶ್ವಿನ್ ರೀತಿ ಬೌಲಿಂಗ್ ಮಾಡುವುದು ವಿಶೇಷವಾಗಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಮತ್ತು ಏಕದಿನ ಸರಣಿಯ ಮೊದಲು, ಭಾರತದ ಸ್ಟಾರ್ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಬಾಂಗ್ಲಾದೇಶದ ಆಟವನ್ನು ಶ್ಲಾಘಿಸಿದ್ದಾರೆ. ಜಿಯೋ ಸಿನಿಮಾ ಜೊತೆ ಮಾತನಾಡಿದ ಯಶಸ್ವಿ ಜೈಸ್ವಾಲ್, ಬಾಂಗ್ಲಾದೇಶದ ವಿರುದ್ಧ ಭಾರತ ಟೆಸ್ಟ್ ಸರಣಿ ಆಡುವುದು ಖುಷಿಯಾಗುತ್ತದೆ. ಟೆಸ್ಟ್ ಪಂದ್ಯಗಳನ್ನು ಆಡಲು ಎದುರುನೋಡುತ್ತಿದ್ದೇನೆ ಎಂದರು.

ಉತ್ತಮ ಫಾರ್ಮ್‌ನಲ್ಲಿರುವ ಬಾಂಗ್ಲಾದೇಶ

ಬಾಂಗ್ಲಾದೇಶ ಟೆಸ್ಟ್ ತಂಡ ಸದ್ಯ ಉತ್ತಮ ಫಾರ್ಮ್‌ನಲ್ಲಿದೆ. ಪಾಕಿಸ್ತಾನದ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿದೆ. ಮೊದಲ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶ 10 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇ 6 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು.

ಸೆಪ್ಟೆಂಬರ್ 19ರಿಂದ ಮೊದಲ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದೆ. ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದ್ದು, ಕಾನ್ಪುರದ ಗ್ರೀನ್‌ಪಾರ್ಕ್‌ನಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+