Hindi: ಹಿಂದಿ ರಾಷ್ಟ್ರಭಾಷೆಯಲ್ಲ ಎಂದ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್
ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ರವಿಚಂದ್ರನ್ ಅಶ್ವಿನ್ 2025ರ ಐಪಿಎಲ್‌ನಲ್ಲಿ ಆಡಲು ಸಜ್ಜಾಗಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಕ್ರಿಕೆಟ್ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾ ಅಭಿಮಾನಿಗಳ ಜೊತೆ ಸಂಪರ್ಕದಲ್ಲೂ ಇರುತ್ತಾರೆ. ಇತ್ತೀಚೆಗೆ ಅವರು ಕಾಲೇಜು ಸಮಾರಂಭದಲ್ಲಿ ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದಾರೆ.
ತಮಿಳುನಾಡಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಅಶ್ವಿನ್ ಈ ಹೇಳಿಕೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಮೊದಲಿನಿಂದಲೂ ವಿರೋಧವಿದೆ. ಆಗಾಗ್ಗೆ ಹಿಂದಿ ಹೇರಿಕೆ ವಿರುದ್ಧ ತಮಿಳುನಾಡು ಸರ್ಕಾರವೇ ಆಕ್ರೋಶ ವ್ಯಕ್ತಪಡಿಸುತ್ತಿರುತ್ತದೆ.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಸಮಾರಂಭದಲ್ಲಿ ಭಾಗವಹಿಸಿದ್ದ ಕೆಲವರು ಇಂಗ್ಲಿಷ್ ಅಥವಾ ತಮಿಳು ಭಾಷೆಯಲ್ಲಿ ಮಾತನಾಡಲು ಕಷ್ಟವಾದರೆ ಹಿಂದಿಯಲ್ಲಿ ಪ್ರಶ್ನೆಗಳನ್ನು ಕೇಳಬಹುದಾ ಎಂದು ಕೇಳಿದ್ದು ಇದಕ್ಕೆ ಉತ್ತರ ನೀಡಿದ ಅಶ್ವಿನ್ "ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ, ಅಧಿಕೃತ ಭಾಷೆಗಳಲ್ಲಿ ಅದು ಒಂದು" ಎಂದು ಹೇಳಿದ್ದಾರೆ.
ಇಂಗ್ಲಿಷ್ ಗೊತ್ತಿರುವ ವಿದ್ಯಾರ್ಥಿಗಳು ಕೂಗಿ ಎಂದಾಗ ಉತ್ತರವಾಗಿ ಜೋರಾಗಿ ಚಪ್ಪಾಳೆ ತಟ್ಟಿದರು. ತಮಿಳು ಎಂದು ಕೇಳಿದಾಗ ಸಮಾರಂಭದಲ್ಲಿ ನೆರೆದಿದ್ದ ವಿದ್ಯಾರ್ಥಿಗಳು ಜೋರಾಗಿ ಕಿರುಚುವ ಮೂಲಕ ಸ್ಪಂದಿಸಿದರು. ಆದರೆ ಹಿಂದಿ ಎಷ್ಟು ಜನಕ್ಕೆ ಗೊತ್ತು ಎಂದಾಗ ಎಲ್ಲರೂ ಮೌನವಾದರು. ನಾನು ಇದನ್ನೇ ಹೇಳಬೇಕೆಂದು ಭಾವಿಸಿದೆ, ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ, ಇದು ಅಧಿಕೃತ ಭಾಷೆ ಎಂದು ತಮಿಳಿನಲ್ಲಿ ಹೇಳಿದರು.












Click it and Unblock the Notifications