T20 World Cup: ಹಾರ್ದಿಕ್‌ ಆಯ್ಕೆಯಾಗಿದ್ದು ಹೇಗೆ? ರಿಂಕು ಸಿಂಗ್‌ ಔಟ್‌ಗಲು, ಸಂಜು ತಂಡ ಸೇರಲು ಕಾರಣವೇನು?

ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೆಸ್ಟ್‌ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆಯಲಿರುವ ಈ ಮೇಗಾ ಟೂರ್ನಿಗೆ ಮೇ 1ರೊಳಗಡೆ ತಂಡವನ್ನು ಪ್ರಕಟಿಸಬೇಕಿತ್ತು. ಈ ಹಿನ್ನೆಲೆ ಮಂಗಳವಾರ ಭಾರತ ಕ್ರಿಕೆಟ್‌ ನಿಯಂತ್ರಣಾ ಮಂಡಳಿ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದೆ. ಆದರೆ ಈ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಹಾಗಿದ್ದರೆ, ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡದೇ ಇರುವು ಆಟಗಾರರನ್ನು ತಂಡದಲ್ಲಿ ಸ್ಥಾನ ನೀಡಿದ್ದು ಏಕೆ ಎಂಬ ಪ್ರಶ್ನೆಗಳು ಎದ್ದಿವೆ.

ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ಟಿ20 ವಿಶ್ವಕಪ್‌ ನಡೆಯಲಿದ್ದು, ಈ ವೇಳೆ ಭಾರತ ತಂಡಕ್ಕೆ ಆಲ್‌ರೌಂಡರ್‌ಗಳ ಅವಶ್ಯಕತೆಯನ್ನು ಮನಗೊಂಡಿರುವ ಆಯ್ಕೆ ಸಮಿತಿ ಹಾರ್ದಿಕ್ ಪಾಂಡ್ಯ ಅವರಿಗೆ ಮಣೆ ಹಾಕಿದೆ. ಪ್ರಸ್ತುತ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರು ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ಉಪನಾಯಕರಾಗಿದ್ದಾರೆ. ಆದರೆ ಅವನ ಬ್ಯಾಟ್ ಮೌನಕ್ಕೆ ಶರಣಾಗಿದೆ. ಬೌಲಿಂಗ್‌ನಿಂದಲೂ ವಿಕೆಟ್‌ ಪಡೆಯುವಲ್ಲಿ ಹಿಂದೆ ಬಿದ್ದಿದ್ದಾರೆ. ಇವರ ನಾಯಕತ್ವದ ಬಗ್ಗೆಯೂ ಪ್ರಶ್ನೆಗಳು ಏಳುತ್ತಿವೆ.

How did Hardik get selected What is the reason for Rinku Singh getting out Sanju joining the team

ಹಾರ್ದಿಕ್ ಮುಂದಿರುವ ಸವಾಲುಗಳು

ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಸೇರಿಕೊಂಡಿರುವ ಹಾರ್ದಿಕ್ ಪಾಂಡ್ಯ ಮುಂದೆ ದೊಡ್ಡ ಸವಾಲುಗಳ ರಾಶಿ ಇದೆ. ಅವರು ತಂಡದಲ್ಲಿ ಸ್ಥಾನವನ್ನು ಪಡೆದಲ್ಲಿ ಅವರು ಬೌಲಿಂಗ್‌ನಲ್ಲೂ ತಂಡಕ್ಕೆ ಕಾಣಿಕೆ ನೀಡಬೇಕಾಗುತ್ತದೆ ಎಂದು ಆಯ್ಕೆ ಸಮಿತಿ ಈಗಾಗಲೇ ಸೂಚನೆ ನೀಡಿರಬಹುದು. ಅಲ್ಲದೆ ಅವರನ್ನು ಒಬ್ಬ ನುರಿತ ಆಲ್‌ರೌಂಡರ್‌ ರೂಪದಲ್ಲಿ ಆಯ್ಕೆ ಮಾಡಿದ್ದರಿಂದ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬೇಕಿದೆ.

ಇನ್ನು ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಆಯ್ಕೆಯ ಬಗ್ಗೆ ಹೆಚ್ಚಿನ ಚರ್ಚೆ ನಡೆದಿಲ್ಲ, ಆದರೆ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲಿ ಇರಿಸಿಕೊಳ್ಳುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ ಎಂದು ಪಿಟಿಐ ಉಲ್ಲೇಖಿಸಿದೆ. ಇದರರ್ಥ ಹಾರ್ದಿಕ್ ಪಾಂಡ್ಯ ಬಗ್ಗೆ ಇಡೀ ಆಯ್ಕೆ ಸಮಿತಿ ಅಂದರೆ ಆಯ್ಕೆದಾರರು ಸರ್ವಾನುಮತದ ಒಪ್ಪಿಗೆ ಇರಲಿಲ್ಲ ಎಂದಾಯಿತು.

ರಿಂಕುಗೆ ಫ್ಲೈಟ್ ಮಿಸ್ ಆಗಿದ್ದು ಹೇಗೆ?

ಭಾರತದಲ್ಲಿ ನಡೆದಿದ್ದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ರಿಂಕು ಸಿಂಗ್‌, ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ರಿಂಕು ಸಿಂಗ್ ಸ್ಥಾನಕ್ಕೆ ಕುತ್ತು ಬಂದಿದೆ. ಅಸಲಿಗೆ ರಿಂಕು ಸಿಂಗ್, ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಪೈಕಿ ಇಬ್ಬರನ್ನು ಮಾತ್ರ ಆಯ್ಕೆ ಮಾಡಬೇಕಿತ್ತು. ಹಾರ್ದಿಕ್ ಹಾಗೂ ಶಿವಂ ತಂಡದಲ್ಲಿ ಸ್ಥಾನ ಪಡೆದಿದ್ದರಿಂದ ಸಹಜವಾಗಿ ರಿಂಕು ಕಾಯ್ದಿರಿಸಿದ ಪಟ್ಟಿಗೆ ಜಂಪ್ ಆಗಿದ್ದಾರೆ.

How did Hardik get selected What is the reason for Rinku Singh getting out Sanju joining the team

ರಿಷಬ್ ಪಂತ್ ಅವರನ್ನು ಉಪನಾಯಕರನ್ನಾಗಿ ಮಾಡಬಹುದು ಎಂಬ ವರದಿಗಳು ಬಂದಿದ್ದವು, ಆದರೆ ಅಂತಿಮವಾಗಿ ಹಾರ್ದಿಕ್ ಪಾಂಡ್ಯ ಉಪನಾಯಕನ ಜವಾಬ್ದಾರಿಯನ್ನು ಮತ್ತೊಮ್ಮೆ ಹಾರ್ದಿಕ್ ಪಾಂಡ್ಯಗೆ ನೀಡಲಾಗಿದೆ. ಅವರು ಹಿಂದಿನ ಪ್ರದರ್ಶನಗಳನ್ನು ಗಮನಸಿ ಈ ನಿರ್ಧಾರವನ್ನು ತೆಗೆದುಕೊಂಡಂತೆ ಕಾಣುತ್ತಿದೆ.

ಧೈರ್ಯದ ನಿರ್ಧಾರ

ರಿಂಕು ಸಿಂಗ್ ಅವರನ್ನು ಹೊರಗಿಟ್ಟು ಆಯ್ಕೆ ಸಮಿತಿ ಶಿವಂ ದುಬೆಗೆ ಅವಕಾಶ ನೀಡಿರುವುದು ಧೈರ್ಯದ ನಿರ್ಧಾರ ಎನ್ನಲಾಗುತ್ತಿದೆ. ರಿಂಕು ಸಿಂಗ್ ಅತ್ಯುತ್ತಮ ಫಾರ್ಮ್‌ನಲ್ಲಿರುವಾಗ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಇನ್ನು ರೇಸ್‌ನಲ್ಲಿದ್ದ ರವಿ ಬಷ್ಣೋಯಿಗೂ ಬೇಸರವಾಗಿದೆ. ಸ್ಪಿನ್ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಅಕ್ಷರ್ ಪಟೇಲ್ ಅವರ ಬ್ಯಾಕಪ್ ಆಗಿ ತಂಡದಲ್ಲಿದ್ದಾರೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷ್‌ದೀಪ್ ಸಿಂಗ್, ಜಸ್‌ದೀಪ್ ಸಿಂಗ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+