WTC Points Table: 12 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿ ಸೋತ ಭಾರತ; WTC ಅಂಕಪಟ್ಟಿ ಹೇಗಿದೆ?
ಭಾರತ ತಂಡದ 12 ವರ್ಷಗಳ ಪಾರುಪತ್ಯ ಅಂತ್ಯವಾಗಿದೆ. 2012ರ ಬಳಿಕ ಭಾರತ ತವರಿನಲ್ಲಿ ಭಾರತ ಟೆಸ್ಟ್ ಸರಣಿಯನ್ನು ಸೋತಿದೆ. ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ನ್ಯೂಜಿಲೆಂಡ್ 113 ರನ್‌ಗಳಿಂದ ಗೆಲುವು ಸಾಧಿಸಿತು. ಇದು ಭಾರತದಲ್ಲಿ ನ್ಯೂಜಿಲೆಂಡ್ ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ಸಾಧನೆ ಮಾಡಿದೆ. ರೋಹಿತ್ ಶರ್ಮಾ ಪಡೆಗೆ ಈ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯ ಮೇಲೆ ಭಾರಿ ಪರಿಣಾಮ ಬೀರಿದೆ.
359 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಯಶಸ್ವಿ ಜೈಸ್ವಾಲ್ ರೋಹಿತ್ ಶರ್ಮಾ ಸ್ಫೋಟಕ ಆರಂಭ ಮಾಡಿದರೂ, ರೋಹಿತ್ ಶರ್ಮಾ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. 8 ರನ್ ಗಳಿಸಿ ಮಿಚೆಲ್ ಸ್ಯಾಂಟ್ನರ್ ಗೆ ವಿಕೆಟ್ ಒಪ್ಪಿಸಿದರು.

ಯಶಸ್ವಿ ಜೈಸ್ವಾಲ್ ಮಾತ್ರ ನ್ಯೂಜಿಲೆಂಡ್ ದಾಳಿಯನ್ನು ಸಮರ್ಥವಾಗಿ ಎದುರಿಸಿ 65 ಎಸೆತಗಳಲ್ಲಿ 77 ರನ್ ಗಳಿಸಿದರು. ರವೀಂದ್ರ ಜಡೇಜಾ 42 ರನ್ ಗಳಿಸಿದರೆ. ಉಳಿದ ಬ್ಯಾಟರ್ ಗಳಿಂದ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಪಡೆದಿದ್ದ ಮಿಚೆಲ್ ಸ್ಯಾಂಟ್ನರ್ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದು ಭಾರತದ ಸೋಲಿಗೆ ಪ್ರಮುಖ ಕಾರಣವಾದರು.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ ಹೇಗಿದೆ
ಈ ಸೋಲಿನ ಬಳಿಕ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಹಾದಿ ಕಠಿಣವಾಗಿದೆ. ಪುಣೆ ಟೆಸ್ಟ್‌ನಲ್ಲಿ ಸೋತರೂ ಭಾರತ ಇನ್ನೂ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೂ, ಫೈನಲ್ ತಲುಪಲು ಈಗ ಹೆಚ್ಚಿನ ಪಂದ್ಯಗಳಲ್ಲಿ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಸರಣಿ ಆರಂಭಕ್ಕೆ ಮುನ್ನ ಭಾರತ 74 ಪಿಸಿಟಿ ಹೊಂದಿದ್ದರೆ, ಎರಡು ಪಂದ್ಯಗಳು ಸೋತ ಬಳಿಕ ಅದು 62.82ಕ್ಕೆ ಕುಸಿದಿದೆ. ಆಸ್ಟ್ರೇಲಿಯಾ 62.50 ಪಿಸಿಟಿಯೊಂದಿಗೆ ಸದ್ಯ ಎರಡನೇ ಸ್ಥಾನದಲ್ಲಿದೆ.
2025ರಲ್ಲಿ ಲಾರ್ಡ್ಸ್ ಅಂಗಳದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು, ಭಾರತಕ್ಕೆ ಇನ್ನೂ ಅವಕಾಶ ಇದೆ. ಈ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್‌ನಲ್ಲಿ ಭಾರತ ಇನ್ನು 6 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನ್ಯೂಜಿಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಬಳಿಕ, ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ಯಾವುದೇ ತಂಡದ ಸೋಲು ಗೆಲುವಿನ ಮೇಲೆ ಅವಲಂಬನೆಯಾಗೆ ಫೈನಲ್ ತಲುಪಲು ಭಾರತ ಉಳಿದ ಆರು ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದು ಒಂದು ಪಂದ್ಯ ಡ್ರಾ ಮಾಡಿಕೊಳ್ಳಬೇಕಿದೆ. ಇನ್ನೊಂದು ಪಂದ್ಯ ಸೋತರೂ ಭಾರತ ಫೈನಲ್ ತಲುಪಲು ಬೇರೆ ತಂಡಗಳ ಫಲಿತಾಂಶಗಳ ಮೇಲೆ ಅವಂಬನೆಯಾಗಬೇಕಾಗುತ್ತದೆ.
ಐದು ಟಸ್ಟ್ ಗೆದ್ದು ಒಂದು ಟೆಸ್ಟ್ ಡ್ರಾ ಮಾಡಿಕೊಂಡರೆ ಭಾರತ 71.05 ಪಿಸಿಟಿ ಹೊಂದಬಹುದು. ಆರು ಪಂದ್ಯಗಳನ್ನು ಗೆದ್ದರೆ 74.56 ಪಿಸಿಟಿಯೊಂದಿಗೆ ಈ ಆವೃತ್ತಿಯನ್ನು ಮುಗಿಸಲಿದ್ದು ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ.
ಕನಿಷ್ಠ ಇನ್ನು ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದರೂ ಭಾರತ ಫೈನಲ್ ರೇಸ್‌ನಲ್ಲಿ ಇರಲಿದೆ. ಆದರೆ ಉಳಿದ ತಂಡಗಳ ಫಲಿತಾಂಶಗಳು ಭಾರತದ ಫೈನಲ್ ಅವಕಾಶವನ್ನು ನಿರ್ಧಾರ ಮಾಡುತ್ತವೆ.












Click it and Unblock the Notifications