WTC Final: ಈ ಟೆಸ್ಟ್ ಸೋತರೂ, ಡ್ರಾ ಆದರೂ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಹೋಗುತ್ತಾ?

ಬಾಕ್ಸಿಂಗ್ ಡೇ ಟೆಸ್ಟ್‌ ರೋಚಕ ಘಟ್ಟ ತಲುಪಿದ್ದು ಎರಡನೇ ದಿನ ಹಿನ್ನಡೆ ಅನುಭವಿಸಿದ್ದ ಭಾರತ ಮೂರನೇ ದಿನ ದಿಟ್ಟ ಹೋರಾಟ ನೀಡಿದೆ. ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ ತಾಳ್ಮೆಯ ಬ್ಯಾಟಿಂಗ್ ನೆರವಿನಿಂದ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 358 ರನ್ ಕಲೆಹಾಕಿದೆ. ವಾಷಿಂಗ್ಟನ್ ಸುಂದರ್ 50 ರನ್ ಗಳಿಸಿದರೆ, ನಿತೀಶ್ ಕುಮಾರ್ ರೆಡ್ಡಿ ಅಜೇಯ 105 ರನ್ ಗಳಿಸಿದ್ದು ನಾಲ್ಕನೇ ದಿನ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಮೆಲ್ಬೋರ್ನ್ ಅಂಗಳದಲ್ಲಿ ನಿತೀಶ್ ಕುಮಾರ್ ರೆಡ್ಡಿ ದಾಖಲೆಯ ಇನ್ನಿಂಗ್ಸ್ ಮೂಲಕ ಭಾರತಕ್ಕೆ ಆಸರೆಯಾಗಿದ್ದಾರೆ. 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಬಂದರೂ ಇಡೀ ದಿನ ತಾಳ್ಮೆಯಿಂದ ಬ್ಯಾಟಿಂಗ್ ಮಾಡಿದರು. ಭಾರತ ಇನ್ನೂ 116 ರನ್‌ಗಳ ಹಿನ್ನಡೆ ಅನುಭವಿಸಿದ್ದು ನಾಳೆ ನಿತೀಶ್ ಕುಮಾರ್ ರೆಡ್ಡಿ ಮತ್ತು ಮೊಹಮ್ಮದ್ ಸಿರಾಜ್ ಒಂದಷ್ಟು ರನ್ ಕಲೆಹಾಕಿದರೆ ಹಿನ್ನಡೆ ಅಂತರ ಮತ್ತಷ್ಟು ಕಡಿಮೆ ಮಾಡಬಹುದು.

how india can qualify world test championship final

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲು ಭಾರತ ಮುಂದಿನ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಗೆಲುವ ಸಾಧಿಸಬೇಕಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮೆಲ್ಬೋರ್ನ್ ಟೆಸ್ಟ್‌ ಡ್ರಾನಲ್ಲಿ ಅಂತ್ಯವಾಗುವ ಸಾಧ್ಯತೆ ಹೆಚ್ಚಾಗಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಬ್ಯಾಟಿಂಗ್ ಕೈಕೊಟ್ಟರೂ ಭಾರತಕ್ಕೆ ಸೋಲಿನ ಆಘಾತ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ಏನಾದರೂ ಸೋತರೆ ಅಥವಾ ಡ್ರಾನಲ್ಲಿ ಅಂತ್ಯವಾದರೆ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ತಲುಪುವುದು ಮತ್ತಷ್ಟು ಕಷ್ಟವಾಗಲಿದೆ. ಆದರೂ ಭಾರತಕ್ಕೆ ಫೈನಲ್ ತಲುಪುವ ಅವಕಾಶ ಇನ್ನೂ ಇರಲಿದೆ.

ಭಾರತಕ್ಕಿದೆಯಾ ಅವಕಾಶ?

ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದೆ. ಅಡಿಲೇಡ್ ಟೆಸ್ಟ್‌ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಭಾರತ ಸದ್ಯ ಮೂರನೇ ಸ್ಥಾನದಲ್ಲಿದೆ. ಈ ಟೆಸ್ಟ್‌ನಲ್ಲಿ ಸೋತರೂ ಭಾರತ ಫೈನಲ್‌ಗೆ ಅರ್ಹತೆ ಪಡೆಯಬಹುದು, ಆದರೆ ಪಾಕಿಸ್ತಾನ ದಕ್ಷಿಣ ಆಫ್ರಿಕಾ ನಡುವಿನ ಸರಣಿ ಮತ್ತು ಶ್ರೀಲಂಕಾ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಫಲಿತಾಂಶಗಳು ಭಾರತ ಫೈನಲ್ ಸ್ಥಾನವನ್ನು ನಿರ್ಧರಿಸಲಿವೆ.

ಪಾಕಿಸ್ತಾನ ಏನಾದರೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ, ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧದ ನಡೆಯಿರುವ ಎರಡೂ ಟೆಸ್ಟ್ ಪಂದ್ಯಗಳನ್ನು ಸೋತರೆ ಮಾತ್ರ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಬಹುದು.

ಒಂದು ವೇಳೆ ದಿಟ್ಟ ಹೋರಾಟ ನಿಡಿ ಮೆಲ್ಬೋರ್ನ್ ಟೆಸ್ಟ್ ಗೆದ್ದು, ಸಿಡ್ನಿ ಟೆಸ್ಟ್ ಕೂಡ ಗೆದ್ದರೆ ಭಾರತ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಮೆಲ್ಬೋರ್ನ್‌ ಟೆಸ್ಟ್ ಡ್ರಾ ಮಾಡಿಕೊಂಡರೂ, ಕೊನೆಯ ಟೆಸ್ಟ್‌ನಲ್ಲಿ ಭಾರತ ಗೆಲುವು ಸಾಧಿಸಲೇಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+