Champions Trophy India vs Bangladesh: ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ: ರೋಹಿತ್ ಶರ್ಮಾ ಹೇಳಿದ್ದೇನು?

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಎರಡನೇ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು ಎದುರಿಸಲು ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ಕೆ‌ ಮಾಡಿಕೊಂಡಿದೆ.

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಭಾರತ ಆತ್ಮವಿಶ್ವಾಸದಿಂದಲೇ ಮೊದಲನೇ‌ ಪಂದ್ಯವನ್ನಾಡಲು ಸಜ್ಜಾಗಿದೆ. ಲೀಗ್ ಹಂತದಲ್ಲಿ ಕೇವಲ ಮೂರು ಪಂದ್ಯಗಳು ಮಾತ್ರ ಇರುವುದರಿಂದ ಪ್ರತಿ ಪಂದ್ಯ ಗೆಲ್ಲುವುದು ಕೂಡ ಮಹತ್ವವಾಗಿದೆ. ಆದ್ದರಿಂದಲೇ ಎರಡೂ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆಲುವಿನ ಖಾತೆ ತೆರೆಯಲು ಕಾತರದಿಂದ ಕಾಯುತ್ತಿವೆ.

icc champions trophy 2025 bangladesh win toss against india playing xi

ಟಾಸ್ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, ನಾನು ಟಾಸ್ ಗೆದ್ದಿದ್ದರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೆ. ಹಲವು ವರ್ಷಗಳಿಂದ ಈ ಅಂಗಳದಲ್ಲಿ ಆಡಿದ್ದೇನೆ, ಸಂಜೆ ಲೈಟ್ ಬೆಳಕಿನಲ್ಲಿ ಚೆಂಡು ಬ್ಯಾಟ್‌ಗೆ ಉತ್ತಮವಾಗಿ ಬರುತ್ತದೆ. ಎಲ್ಲರೂ ಫಿಟ್ ಆಗಿದ್ದಾರೆ, ಆಡಲು ಸಜ್ಜಾಗಿದ್ದಾರೆ. ಪಂದ್ಯಾವಳಿಯಲ್ಲಿ ಪ್ರತಿಯೊಂದು ಪಂದ್ಯವೂ ಮುಖ್ಯವಾಗುತ್ತದೆ, ವರುಣ್ ಚಕ್ರವರ್ತಿ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಹೇಳಿದರು.

ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ನಜ್ಮುಲ್ ಹೊಸೈನ್ ಶಾಂಟೊ, ವಿಕೆಟ್ ಉತ್ತಮವಾಗಿ ಕಾಣುತ್ತಿದೆ. ಮೊದಲು ಉತ್ತಮ ಮೊತ್ತ ಕಲೆಹಾಕುವ ವಿಶ್ವಾಸವಿದೆ. ಉತ್ತಮವಾದ ಕ್ರಿಕೆಟ್ ಆಡಲು ಹುಡುಗರು ಸಜ್ಜಾಗಿದ್ದಾರೆ ಎಂದು ಹೇಳಿದರು.

ಉಭಯ ತಂಡಗಳ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.

ಬಾಂಗ್ಲಾದೇಶ: ತಂಝಿದ್ ಹಸನ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ಮೆಹಿದಿ ಹಸನ್ ಮಿರಾಜ್, ಮುಶ್ಫಿಕರ್ ರಹೀಮ್, ಜೇಕರ್ ಅಲಿ, ತೌಹಿದ್ ಹೃದಯೋಯ್, ರಿಷಾದ್ ಹೊಸೈನ್, ತಂಜೀಮ್ ಹಸನ್ ಶಕೀಬ್, ಟಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹ್ಮಾನ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+