ICC ODI Rankings: ನಂಬರ್ 1 ಸನಿಹದಲ್ಲಿ ಶುಭಮನ್ ಗಿಲ್: ರೋಹಿತ್ ಶರ್ಮಾರನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ

ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ವಿರಾಟ್ ಕೊಹ್ಲಿ ನಿರೀಕ್ಷೆಯಂತೆ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ ಮತ್ತು ಶ್ರೇಯಾಂಕದಲ್ಲಿ ಆರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಭಾರತ ಯುವ ಬ್ಯಾಟರ್ ಶುಭಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದು ಅಲ್ಲಿ ಗಟ್ಟಿಯಾಗಿ ಕುಳಿತಿದ್ದಾರೆ. ನಂಬರ್ 1 ಸ್ಥಾನಕ್ಕೆ ತುಂಬಾ ಹತ್ತಿರದಲ್ಲಿದ್ದು, ಇನ್ನು ಎರಡು ಮೂರು ಒಳ್ಳೆ ಇನ್ನಿಂಗ್ಸ್ ಬಂದರೆ ಅವರು ನಂಬರ್ 1 ಸ್ಥಾನಕ್ಕೆ ಜಿಗಿಯಲಿದ್ದಾರೆ. ಬಾಬರ್ ಅಜಂ ಸದ್ಯ ನಂಬರ್ 1 ಸ್ಥಾನದಲ್ಲಿದ್ದಾರೆ.

 ICC ODI Batting Rankings: Virat Kohli Surpasses Rohit Sharma, Gill Near To No 1

ಭಾರತ ತಂಡದ ನಾಯಕ ರೋಹಿತ್ ಶರ್ಮಾ 8ನೇ ಶ್ರೇಯಾಂಕದಲ್ಲಿದ್ದಾರೆ, ಅವರೂ ಕೂಡ ಉತ್ತಮ ಫಾರ್ಮ್‌ನಲ್ಲಿದ್ದು ಉಪಯುಕ್ತ ರನ್ ಗಳಿಸುತ್ತಿದ್ದಾರೆ. ಏಕದಿನ ವಿಶ್ವಕಪ್ ಮುಗಿಯುವ ವೇಳೆಗೆ ಗಿಲ್ ನಂಬರ್ 1 ಸ್ಥಾನಕ್ಕೇರುವ ಸುವರ್ಣ ಅವಕಾಶವನ್ನು ಹೊಂದಿದ್ದರೆ, ರೋಹಿತ್, ವಿರಾಟ್ ಕೂಡ ಶ್ರೇಯಾಂಕವನ್ನು ಉತ್ತಮಪಡಿಸಿಕೊಳ್ಳಬಹುದಾಗಿದೆ.

ಅಗ್ರ 10ರಲ್ಲಿ ಭಾರತದ ಮೂವರು ಆಟಗಾರರು

ಏಕದಿನ ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಮೂವರು ಬ್ಯಾಟರ್ ಗಳು ಅಗ್ರ 10ರಲ್ಲಿ ಸ್ಥಾನ ಪಡೆದುಕೊಂಡಿರುವುದು ಶುಭ ಸುದ್ದಿಯಾಗಿದೆ. ಅದರಲ್ಲೂ ಏಕದಿನ ವಿಶ್ವಕಪ್‌ನಂತಹ ಪಂದ್ಯಾವಳಿಯಲ್ಲಿ ಈ ಮೂವರು ಪ್ರಮುಖ ಬ್ಯಾಟರ್ ಗಳು ಉತ್ತಮ ಪ್ರದರ್ಶನ ನೀಡುತ್ತಿರುವುದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಇನ್ನು ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು ಕೂಡ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಕ್ವಿಂಟನ್ ಡಿ ಕಾಕ್ 3ನೇ ಸ್ಥಾನಕ್ಕೆ ಏರಿಕೆ ಕಂಡಿದ್ದರೆ, ಹೆನ್ರಿಚ್ ಕ್ಲಾಸೆನ್ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 5ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ವಿಶ್ವಕಪ್ ಪಂದ್ಯಾವಳಿಯಲ್ಲಿ ಕ್ವಿಂಟನ್ ಡಿ ಕಾಕ್ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಅವರು ಪ್ರಸ್ತುತ 407 ರನ್‌ಗಳೊಂದಿಗೆ ಪಂದ್ಯಾವಳಿಯಲ್ಲಿ ಪ್ರಮುಖ ರನ್ ಸ್ಕೋರರ್ ಆಗಿದ್ದಾರೆ, ಬಾಂಗ್ಲಾದೇಶದ ವಿರುದ್ಧ 174 ರನ್‌ಗಳ ಗರಿಷ್ಠ ಸ್ಕೋರ್ ಹೊಂದಿದ್ದಾರೆ. ಕ್ವಿಂಟನ್ ಡಿ ಕಾಕ್ ನಂತರ, ಕೊಹ್ಲಿ 354 ರನ್‌ಗಳೊಂದಿಗೆ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ, ರೋಹಿತ್ 311 ರನ್ ಗಳಿಸಿದ್ದಾರೆ.

ಐರ್ಲೆಂಡ್‌ನ ಹ್ಯಾರಿ ಟೆಕ್ಟರ್ 7 ನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಒಂಬತ್ತನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನದ ಇಮಾಮ್-ಉಲ್-ಹಕ್ ಬ್ಯಾಟಿಂಗ್ ಶ್ರೇಯಾಂಕದ ಟಾಪ್ 10 ಪಟ್ಟಿಯನ್ನು ಹತ್ತನೇ ಸ್ಥಾನದಲ್ಲಿ ಪೂರ್ಣಗೊಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+