Team India Head Coach: ಟೀಮ್ ಇಂಡಿಯಾ ಕೋಚ್ ಆಗಲು ಆಸಕ್ತಿ ಹೊಂದಿರುವ ಆಸೀಸ್ ಪ್ಲೇಯರ್
ಭಾರತದ ತಂಡದ ಮುಖ್ಯ ಕೋಚ್ ಸ್ಥಾನದ ಅವಧಿ ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯಲಿದೆ. ಇದಕ್ಕಾಗಿ ಬಿಸಿಸಿಐ ಅರ್ಜಿಗಳನ್ನು ಕೆಯುವುದಾಗಿಯೂ ಘೋಷಿಸಿದೆ. ಈ ಬೆನ್ನಲ್ಲೆ ಈ ಹುದ್ದೆಯ ಮೇಲೆ ಹಲವು ಆಟಗಾರರು ಕಣ್ಣು ನೆಟ್ಟಿದ್ದಾರೆ. ಈ ಸಾಲಿಗೆ ಈಗ ವಿದೇಶಿ ಪ್ಲೇಯರ್ ಒಬ್ಬರು ಸೇರಿದ್ದಾರೆ.
ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಭಾಗವಹಿಸುತ್ತಿದೆ. ರಾಹುಲ್ ದ್ರಾವಿಡ್ ಗರಡಿಯಲ್ಲಿ ಬ್ಲ್ಯೂ ಬಾಯ್ಸ್ ಮತ್ತೊಂದು ಬಾರಿ ಟಿ20 ವಿಶ್ವಕಪ್ ಎತ್ತುವ ಆಸೆಯನ್ನು ಹೊಂದಿದ್ದಾರೆ. ಈ ಟೂರ್ನಿಯೇ ಟೀಮ್ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಕೊನೆಯ ಅಸೈನ್ ಮೆಂಟ್ ಆಗಿದೆ. ಇದಾದ ಬಳಿಕ ರಾಹುಲ್ ದ್ರಾವಿಡ್ ಕೋಚ್ ಸ್ಥಾನದಿಂದ ಕೆಳಗೆ ಇಳಿಯಲಿದ್ದಾರೆ.

ರಾಹುಲ್ ದ್ರಾವಿಡ್ ಅವರಿಂದ ತೆರವಾಗುವ ಸ್ಥಾನಕ್ಕೆ ಬಿಸಿಸಿಐ ಇನ್ನೇನು ಕೆಲವೇ ದಿನಗಳಲ್ಲಿ ಅರ್ಜಿಯನ್ನು ಆಹ್ವಾನಿಸಲಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಹ ಹೇಳಿದ್ದಾರೆ. ಈ ಬೆನ್ನಲ್ಲೆ ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಹಾಗೂ ಸದ್ಯ ಲಖ್ನೋ ಸೂಪರ್ ಜೈಂಟ್ಸ್ ತಂಡದ ಕೋಚ್ ಜಸ್ಟಿನ್ ಲ್ಯಾಂಗರ್ ಸಹ ಕಣ್ಣು ನೆಟ್ಟಿದ್ದಾರೆ.
ಲ್ಯಾಂಗರ್ ಮುಖ್ಯ ಕೋಚ್ ಆಗಬಹುದು
ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿರುವ ಜಸ್ಟಿನ್ ಲ್ಯಾಂಗರ್ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಈ ವೇಳೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗುವ ಬಗ್ಗೆ ಜಸ್ಟಿನ್ ಲ್ಯಾಂಗರ್ ಅವರನ್ನು ಕೇಳಿದಾಗ, ನಾನು ತುಂಬಾ ಉತ್ಸುಕನಾಗಿದ್ದೇನೆ ಎಂದು ಹೇಳಿದರು. ಆದರೆ ನಾನು ಆ ಬಗ್ಗೆ ಯೋಚಿಸಲೇ ಇಲ್ಲ. ನಾನು ಒತ್ತಡದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ, ಹಾಗಾಗಿ ಯಾವುದೇ ಅಂತಾರಾಷ್ಟ್ರೀಯ ಕೋಚ್ ಬಗ್ಗೆ ನನಗೆ ಗೌರವವಿದೆ. ಟೀಂ ಇಂಡಿಯಾದ ಕೋಚಿಂಗ್‌ನ ಮಟ್ಟಿಗೆ ಹೇಳುವುದಾದರೆ, ಇದೊಂದು ಅಸಾಧಾರಣವಾದ ಜವಾಬ್ದಾರಿ. ಟೀಮ್ ಇಂಡಿಯಾದಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರು ಇದ್ದಾರೆ. ಈ ತಂಡದ ಕೋಚ್ ಆಗುವುದು ಅಟ್ರ್ಯಾಕ್ಟಿವ್ ಆಗಿರಲಿದೆ ಎಂದು ತಿಳಿಸಿದ್ದಾರೆ.

ಅಧಿಕಾರ ಅವಧಿ ಮುಕ್ತಾಯ
ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ 2023ರ ವರೆಗೆ ಮಾತ್ರ ಇತ್ತು. ಆದರೆ T20 ವಿಶ್ವಕಪ್ 2024 ಹತ್ತಿರವಾಗುತ್ತಿದ್ದಂತೆ ದ್ರಾವಿಡ್ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಯಿತು. ದ್ರಾವಿಡ್ ಇದೇ ಹುದ್ದೇಯಲ್ಲಿ ಇರಲು ಅವರು ಬಯಸಿದ್ದಲ್ಲಿ ಮತ್ತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ದ್ರಾವಿಡ್ ಮತ್ತೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ. ದ್ರಾವಿಡ್ ಅವರ ಕೋಚಿಂಗ್‌ನಲ್ಲಿ ಟೀಮ್ ಇಂಡಿಯಾ ಇದುವರೆಗೆ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ.












Click it and Unblock the Notifications