Impact Players IPL 2023: ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆಗಳು

ಶನಿವಾರ, ಏಪ್ರಿಲ್ 1ರಂದು ಲಕ್ನೋದಲ್ಲಿ ನಡೆಯುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೂರನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಮ್ಮ ಮೊದಲ ಗೆಲುವಿಗಾಗಿ ಸೆಣಸಾಡಲಿವೆ. ಕಳೆದ ಬಾರಿ ಪ್ಲೇಆಫ್ ಪ್ರವೇಶಿಸಿದ್ದ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಆರ್‌ಸಿಬಿ ವಿರುದ್ಧ ಸೋತು ಹೊರಬಿದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಪ್ರವೇಶಿಸಲು ವಿಫಲವಾಗಿತ್ತು.

ಗಾಯಾಳು ರಿಷಭ್ ಪಂತ್ 2023ರ ಐಪಿಎಲ್ ಪಂದ್ಯಾವಳಿಯಿಂದ ಹೊರಗುಳಿದಿದ್ದು, ಇದು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಹಾಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ಡೇವಿಡ್ ವಾರ್ನರ್ ವಹಿಸಿಕೊಂಡಿದ್ದು, 15 ವರ್ಷಗಳಿಂದ ಒಂದೂ ಬಾರಿಯೂ ಪ್ರಶಸ್ತಿ ಗೆಲ್ಲದ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಪ್ರಶಸ್ತಿ ಎತ್ತಿ ಹಿಡಿಯಲು ಎದುರು ನೋಡುತ್ತಿದೆ.

LSG vs DC IPL 2023

ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮೊಹ್ಸಿನ್ ಖಾನ್ ಅವರು ಗಾಯಕ್ಕೆ ತುತ್ತಾಗಿದ್ದು, ಬೌಲಿಂಗ್ ವಿಭಾಗದಲ್ಲಿ ನಷ್ಟ ಅನುಭವಿಸಿದೆ. ಇನ್ನು ಕೆಲವು ವಿದೇಶಿ ಆಟಗಾರರು ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಅನುಪಸ್ಥಿತಿಯಲ್ಲಿ ಆಡಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಸ್ತಫಿಜುರ್ ರೆಹಮಾನ್, ಅನ್ರಿಚ್ ನಾರ್ಟ್ಜೆ ಮತ್ತು ಲುಂಗಿ ಎನ್‌ಗಿಡಿ ಅವರನ್ನು ಮಿಸ್ ಮಾಡಿಕೊಳ್ಳಲಿದೆ.

ಇನ್ನು ಈ ಬಾರಿಯ ಐಪಿಎಲ್ ಪಂದ್ಯಾವಳಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಜಾರಿಗೆ ಬಂದಿದ್ದು, ಪಂದ್ಯದ ಯಾವುದೇ ಸಮಯದಲ್ಲಿ ಪ್ರತಿ ತಂಡ ಒಬ್ಬ ಆಟಗಾರನನ್ನು ಬದಲಿಸಬಹುದಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇಂಪ್ಯಾಕ್ಟ್ ಪ್ಲೇಯರ್ ಬಳಸಿಕೊಂಡವು. ಗುಜರಾತ್ ಟೈಟನ್ಸ್ ತಂಡದಲ್ಲಿ ಕೇನ್ ವಿಲಿಯಮ್ಸನ್ ಬದಲಿಗೆ ಸಾಯಿ ಸುದರ್ಶನ್ ಆಡಿದರೆ, ಸಿಎಸ್‌ಕೆ ತಂಡದಲ್ಲಿ ಅಂಬಟಿ ರಾಯುಡು ಬದಲಿಗೆ ತುಷಾರ್ ದೇಶಪಾಂಡೆ ಆಡಿದರು.

LSG vs DC IPL 2023

ಶನಿವಾರ ನಡೆಯುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆಗಳಲ್ಲಿ ಯಾವ ಆಟಗಾರರು ಇರಲಿದ್ದಾರೆ ಎಂಬುದನ್ನು ಗಮನಿಸಿ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆಗಳು
* ರವಿ ಬಿಷ್ಣೋಯ್
* ಕೃನಾಲ್ ಪಾಂಡ್ಯ
* ಕೃಷ್ಣಪ್ಪ ಗೌತಮ್
* ಮನನ್ ವೋಹ್ರಾ
* ಆಯುಷ್ ಬದೋನಿ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆಗಳು
* ಕುಲದೀಪ್ ಯಾದವ್
* ಲಲಿತ್ ಯಾದವ್
* ಯಶ್ ದುಲ್
* ಮುಖೇಶ್ ಕುಮಾರ್
* ರಿಲೀ ರೋಸೌವ್

LSG vs DC IPL 2023

ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಶನಿವಾರ, ಏಪ್ರಿಲ್ 1ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30 ಆರಂಭವಾಗಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್: ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಗಳಲ್ಲಿ ನೇರಪ್ರಸಾರ ಮಾಡಲಿದ್ದರೆ, Jio Cinema ಅಪ್ಲಿಕೇಶನ್‌ನಲ್ಲಿ ಡಿಜಿಟಲ್ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+