Ind vs Afg T20: ನಾಯಕನಾಗಿ ರೋಹಿತ್ ವಾಪಸ್, ಕೊಹ್ಲಿ ಮಿಸ್! ಪಿಚ್ ವರದಿ, ಆಡುವ ಬಳಗ

2024ರ ಟಿ20 ವಿಶ್ವಕಪ್ ಸಿದ್ಧತೆಯ ಭಾಗವಾಗಿ ಭಾರತ ಅಫ್ಘಾನಿಸ್ತಾನದ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಸರಣಿಯ ಮೊದಲನೇ ಪಂದ್ಯ ಇಂದು (ಗುರುವಾರ) ಮೊಹಾಲಿಯಲ್ಲಿ ನಡೆಯಲಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಆಡಿದ ಬಳಿಕ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಆಡಿರಲಿಲ್ಲ. ಅಫ್ಘಾನಿಸ್ತಾನದ ವಿರುದ್ಧದ ಸರಣಿಗೆ ಇಬ್ಬರೂ ಕೂಡ ವಾಪಸಾಗಿದ್ದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

Ind Vs Afg: Rohit Returns as Captain, Kohli Set to Miss 1st T20; Playing XI and Pitch Report

ಮೊದಲ‌ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುವುದಿಲ್ಲ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸುವುದು ಖಚಿತವಾಗಿದೆ.

ಟಿ20 ವಿಶ್ವಕಪ್ ದೃಷ್ಟಿಯಿಂದ ಹಲವು ಯುವ ಆಟಗಾರರಿಗೆ ಈ ಸರಣಿ ಮಹತ್ವದ್ದಾಗಿದೆ. ವಿಶ್ವಕಪ್ ಪಂದ್ಯಾವಳಿಗೆ ಮುನ್ನ ಭಾರತ ಆಡುವ ಕೊನೆಯ ಟಿ20 ಸರಣಿ ಇದಾಗಿದೆ.

ಸಂಜು ಸ್ಯಾಮ್ಸನ್ ಮೇಲೆ ನಿರೀಕ್ಷೆ

ಹಲವು ವರ್ಷಗಳಿಂದ ಭಾರತ ತಂಡದಲ್ಲಿ ಸರಿಯಾದ ಅವಕಾಶ ವಂಚಿತವಾಗಿದ್ದ ಸಂಜು ಸ್ಯಾಮ್ಸನ್ ಮತ್ತೆ ತಂಡಕ್ಕೆ ವಾಪಸಾಗಿದ್ದಾರೆ. ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಇದು ಅವರಿಗೆ ಉತ್ತಮ ಅವಕಾಶವಾಗಿದೆ. ಇಶಾನ್ ಕಿಶನ್ ಆಯ್ಕೆಗೆ ಅಲಭ್ಯರಾದ ಕಾರಣ ಸಂಜು ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇನ್ನು ಅಫ್ಘಾನಿಸ್ತಾನ ತಂಡಕ್ಕೆ ಕೂಡ ಹಿನ್ನಡೆಯಾಗಿದ್ದು, ಮೊದಲನೇ ಪಂದ್ಯದಲ್ಲಿ ರಶೀದ್ ಖಾನ್ ಕಣಕ್ಕಿಳಿಯುವುದಿಲ್ಲ ಎಂದು ಖಚಿತವಾಗಿದೆ. ಅವರ ಬದಲಾಗಿ ನೂರ್ ಅಹ್ಮದ್ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಪಿಚ್ ವರದಿ ಏನು?

ಮೊಹಾಲಿ ಬ್ಯಾಟಿಂಗ್ ಸ್ನೇಹಿ ಪಿಚ್ ಹೊಂದಿದ್ದು, ಮೈದಾನ ಚಿಕ್ಕದಾಗಿರುವ ಕಾರಣ ಇಂದು ಹೈಸ್ಕೋರ್ ಪಂದ್ಯವನ್ನು ನಿರಿಕ್ಷೆ ಮಾಡಬಹುದು. ರೋಹಿತ್, ಜೈಸ್ವಾಲ್, ಗಿಲ್, ರಿಂಕು ಸಿಂಗ್ ಸಿಡಿದರೆ ಭಾರತ ಬೃಹತ್ ಮೊತ್ತ ಗಳಿಸಬಹುದು.

ಇಬ್ಬನಿ ಬೀಳುವ ಕಾರಣ ಚೇಸಿಂಗ್ ಮಾಡುವುದು ಇಲ್ಲಿ ಸುಲಭವಾಗಿದ್ದು ಟಾಸ್ ಗೆಲ್ಲುವ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಭಾರತ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲದೀಪ್ ಯಾದವ್, ಮುಖೇಶ್ ಕುಮಾರ್.

ಅಫ್ಘಾನಿಸ್ತಾನ

ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್ (ನಾಯಕ), ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಮಾನ್, ಶರಫುದ್ದೀನ್ ಅಶ್ರಫ್, ನೂರ್ ಅಹ್ಮದ್, ನವೀನ್ ಉಲ್ ಹಕ್, ಫಜಲಕ್ ಫಾರೂಕಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+