Ind vs Aus: ಬೆಂಗಳೂರು ಪಂದ್ಯಕ್ಕೆ ಮಳೆ ಅಡ್ಡಿ? ಪಿಚ್ ವರದಿ, ಪ್ಲೇಯಿಂಗ್ 11
ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳನ್ನು ಗೆದ್ದಿರುವ ಭಾರತ ಈಗಾಗಲೇ ಸರಣಿಯನ್ನು ಗೆದ್ದಿದೆ. ಬೆಂಗಳೂರಿನಲ್ಲಿ ಇಂದು (ಭಾನುವಾರ) ಸರಣಿಯ ಕೊನೆಯ ಪಂದ್ಯ ನಡೆಯಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ಸರಣಿಯ ಕೊನೆಯ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಸರಣಿ ಗೆದ್ದ ಖುಷಿಯಲ್ಲಿರುವ ಭಾರತ ಕೊನೆಯ ಪಂದ್ಯವನ್ನು ಗೆದ್ದು ಖುಷಿಯಿಂದ ಟ್ರೋಫಿ ಎತ್ತಿಹಿಡಿಯುವ ಉತ್ಸಾಹದಲ್ಲಿದೆ. ಆಸ್ಟ್ರೇಲಿಯಾ ಕೊನೆಯ ಪಂದ್ಯವನ್ನು ಗೆದ್ದು ಸೋಲಿನ ಅಂತರ ಕಡಿಮೆ ಮಾಡಿಕೊಳ್ಳಲು ನೋಡುತ್ತಿದೆ.

3ನೇ ಟಿ20 ಪಂದ್ಯದಲ್ಲಿ ಸೋತ ಬಳಿಕ ನಾಲ್ಕನೇ ಟಿ20 ಪಂದ್ಯದಲ್ಲಿ ತಪ್ಪುಗಳನ್ನು ತಿದ್ದಿಕೊಂಡ ಭಾರತ 20 ರನ್‌ಗಳ ಗೆಲುವು ಸಾಧಿಸಿತ್ತು. ರಿಂಕು ಸಿಂಗ್ ಅವರ 46 ಮತ್ತು ಯಶಸ್ವಿ ಜೈಸ್ವಾಲ್ 37 ರನ್‌ಗಳ ನೆರವಿನಿಂದ ಭಾರತ 174 ರನ್ ಕಲೆಹಾಕಿದ ಬಳಿಕ ಆಸ್ಟ್ರೇಲಿಯಾವನ್ನು 154 ರನ್‌ಗಳಿಗೆ ಕಟ್ಟಿ ಹಾಕುವ ಮೂಲಕ ಗೆದ್ದು ಬೀಗಿತ್ತು. ನಾಲ್ಕು ಓವರ್‌ಗಳಲ್ಲಿ 16 ರನ್ ನೀಡಿ ಮೂರು ವಿಕೆಟ್ ಪಡೆದ ಅಕ್ಷರ್ ಪಟೇಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರಿನಲ್ಲಿ ಹೈಸ್ಕೋರಿಂಗ್ ಪಂದ್ಯ?
ಈ ಸರಣಿಯಲ್ಲಿ 4ನೇ ಟಿ20 ಪಂದ್ಯದಲ್ಲಿ ಮಾತ್ರ 200ಕ್ಕಿಂತ ಕಡಿಮೆ ರನ್ ಬಂದಿದೆ, ಮೊದಲ ಮೂರು ಪಂದ್ಯಗಳಲ್ಲಿ 200ಕ್ಕಿಂತ ಅಧಿಕ ರನ್‌ಗಳನ್ನು ಕಲೆ ಹಾಕಲಾಗಿತ್ತು. ಬೆಂಗಳೂರು ಕೂಡ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಮತ್ತೊಂದು ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದು.
ಚಿನ್ನಸ್ವಾಮಿ ಪಿಚ್ ವರದಿ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟಿಂಗ್ ಸ್ವರ್ಗವಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್‌ನಲ್ಲಿ, ಹೆಚ್ಚಿನ ತಂಡಗಳು 300 ಕ್ಕಿಂತ ಹೆಚ್ಚು ರನ್ ಗಳಿಸಿದವು. ಚಿನ್ನಸ್ವಾಮಿಯಲ್ಲಿ ಆಡಿದ 8 ಟಿ20 ಪಂದ್ಯಗಳಲ್ಲಿ, ಎರಡನೇ ಬ್ಯಾಟಿಂಗ್ ಮಾಡಿದ ತಂಡಗಳು 5 ಪಂದ್ಯಗಳಲ್ಲಿ ಗೆದ್ದರೆ, ಮೊದಲು ಬ್ಯಾಟ್ ಮಾಡಿದ ತಂಡ ಎರಡು ಬಾರಿ ಗೆದ್ದಿದೆ. ಟಾಸ್ ಗೆಲ್ಲುವ ತಂಡ ಮೊದಲು ಬೌಲಿಂಗ್ ಮಾಡುವ ಸಾಧ್ಯತೆ ಇದೆ.
ಮಳೆ ಅಡ್ಡಿಯಾಗುತ್ತಾ?
ಶನಿವಾರ ರಾತ್ರಿ ನಗರದ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಭಾನುವಾರ ಕೂಡ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಮಳೆ ಪಂದ್ಯಕ್ಕೆ ಅಡ್ಡಿಯಾಗುವುದಿಲ್ಲ ಎಂದು ಹೇಳಲಾಗಿದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ: ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಶಿವಂ ದುಬೆ/ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅವೇಶ್ ಖಾನ್, ದೀಪಕ್ ಚಾಹರ್, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ: ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ), ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ.












Click it and Unblock the Notifications