Ind vs Aus: ಮೊದಲ ಪಂದ್ಯದಲ್ಲೇ ಅಪರೂಪದ ಘಟನೆ: ಮರುಕಳಿಸುತ್ತಾ 1983 ವಿಶ್ವಕಪ್‌ ಇತಿಹಾಸ?

ಚೆನ್ನೈನ ಚೆಪಾಕ್‌ನಲ್ಲಿ ನಡೆದ ವಿಶ್ವಕಪ್ 2023 ರ ಆರಂಭಿಕ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದೆ. ಭಾರತದ ಸ್ಪಿನ್ ದಾಳಿಗೆ ಸಿಕ್ಕ ಆಸ್ಟ್ರೇಲಿಯಾ ಕೇವಲ 199 ರನ್‌ಗಳಿಗೆ ಆಲೌಟ್ ಆಯಿತು. ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಭಾರತ ಆರಂಭದಲ್ಲೇ ಭಾರಿ ಆಘಾತ ಅನುಭವಿಸಿತು.

ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ಸ್ಥಾನ ಪಡೆದ ಇಶಾನ್ ಕಿಶನ್ ಎದುರಿಸಿದ ಮೊದಲ ಎಸೆತದಲ್ಲೇ ಔಟ್ ಆದರು. ನಾಯಕ ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಕೂಡ ಡಕೌಟ್ ಆಗುವ ಮೂಲಕ ಕೆಟ್ಟ ದಾಖಲೆ ಬರೆದರು. 5 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು, ಕಳೆದ ಬಾರಿ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕೂಡ ಭಾರತ 5 ರನ್‌ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತ್ತು.

 Ind vs Aus : Indian Opening Pair: Ducks in 1983, 2023 Will India Win World Cup

ಇದೇ ಮೊದಲ ಬಾರಿ ಭಾರತದ ಅಗ್ರ ಮೂವರು ಬ್ಯಾಟರ್ ಗಳು ಸೊನ್ನೆಗೆ ಔಟಾಗುವ ಮೂಲಕ ಕೆಟ್ಟ ದಾಖಲೆಯೊಂದನ್ನು ಬರೆದರು. ಮಿಚೆಲ್ ಸ್ಟಾರ್ಕ್ 1 ವಿಕೆಟ್ ಪಡೆದರೆ, ಜೋಶ್ ಹೇಜಲ್‌ವುಡ್ 2 ವಿಕೆಟ್ ಪಡೆದು ಭಾರತಕ್ಕೆ ಆಘಾತ ನೀಡಿದರು.

ಅಪರೂಪದ ಘಟನೆ!

ಇದೊಂದು ಕೆಟ್ಟ ದಾಖಲೆ ಅಂದುಕೊಂಡರು, ಅಚ್ಚರಿ ಪಡುವಂತಹ ಮತ್ತೊಂದು ಸಂಗತಿ ಇದೆ. 1983ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಭಾರತದ ಇಬ್ಬರೂ ಆರಂಭಿಕರು ಸೊನ್ನೆಗೆ ಔಟಾಗಿದ್ದರು. ಆ ವರ್ಷ ಭಾರತ ವಿಶ್ವಕಪ್ ಗೆಲ್ಲುವ ಮೂಲಕ ಕ್ರಿಕೆಟ್ ಜಗತ್ತನ್ನೇ ಅಚ್ಚರಿಗೊಳಿಸಿತ್ತು.

1983ರಲ್ಲಿ ಜಿಂಬಾಬ್ವೆ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕರಾಗಿದ್ದ ಸುನಿಲ್ ಗವಾಸ್ಕರ್ ಮತ್ತು ಕೆ. ಶ್ರೀಕಾಂತ್ ಸೊನ್ನೆಗೆ ಔಟಾಗಿದ್ದರು. ಈ ಮೂಲಕ ಡಕ್‌ಗೆ ಔಟಾದ ಮೊದಲ ಭಾರತೀಯ ಆರಂಭಿಕರು ಎನ್ನುವ ದಾಖಲೆ ಬರೆದಿದ್ದರು.

ಈಗ ಕೂಡ ನಾಯಕ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಇಬ್ಬರೂ ಶೂನ್ಯಕ್ಕೆ ಔಟಾಗುವ ಮೂಲಕ 1983ರ ಗವಾಸ್ಕರ್ - ಶ್ರೀಕಾಂತ್ ಜೋಡಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಆ ಬಾರಿ ಭಾರತ ವಿಶ್ವಕಪ್ ಗೆದ್ದಿತ್ತು, ಈಗ ಕೂಡ ಅದೇ ರೀತಿ ಇತಿಹಾಸ ಮರುಕಳಿಸುತ್ತಾ ಎನ್ನುವ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳನ್ನು ಕಾಡುತ್ತಿದೆ.

ಭಾರತ ತಂಡ ಫೇವರಿಟ್

2011ರಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆದಿದ್ದಾಗ ಧೋನಿ ನಾಯಕತ್ವದ ಭಾರತ ತಂಡ ಚಾಂಪಿಯನ್ ಆಗಿತ್ತು. ಈ ಬಾರಿ ಕೂಡ ಭಾರತದಲ್ಲಿ ವಿಶ್ವಕಪ್ ಪಂದ್ಯಾವಳಿ ನಡೆಯುತ್ತಿದೆ, ಮುಖ್ಯವಾಗಿ ತಂಡದಲ್ಲಿ ಅದ್ಭುತ ಆಟಗಾರರು ಇದ್ದಾರೆ. ಕೊಹ್ಲಿ, ರಾಹುಲ್, ರೋಹಿತ್, ಗಿಲ್, ಜಡೇಜಾ, ಅಶ್ವಿನ್, ಬುಮ್ರಾ, ಸಿರಾಜ್ ಪಂದ್ಯವನ್ನು ಗೆಲ್ಲಿಸಿಕೊಡುವ ಸಾಮರ್ಥ್ಯ ಹೊಂದಿದ್ದಾರೆ ತವರಿನ ಪರಿಸ್ಥಿತಿಯ ಲಾಭ ಪಡೆದರೆ ಭಾರತ ವಿಶ್ವಕಪ್ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.

ಮಾಲಿಂಗ ದಾಖಲೆ ಮುರಿದ ಸ್ಟಾರ್ಕ್

ಭಾರತ - ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಾರಕ ವೇಗಿ ಮಿಚೆಲ್ ಸ್ಟಾರ್ಕ್ ಲಸಿತ್ ಮಾಲಿಂಗ ಅವರ ದಾಖಲೆ ಮುರಿದರು. ಏಕದಿನ ವಿಶ್ವಕಪ್‌ನಲ್ಲಿ ಸ್ಟಾರ್ಕ್ ಈಗ ವೇಗವಾಗಿ 50 ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮಾಲಿಂಗ 25 ಇನ್ನಿಂಗ್ಸ್‌ಗಳಲ್ಲಿ 50 ವಿಕೆಟ್ ಪಡೆದರೆ, ಸ್ಟಾರ್ಕ್ 19 ಇನ್ನಿಂಗ್ಸ್‌ಗಳಲ್ಲಿ 50 ವಿಕೆಟ್ ಪಡೆದು ಮಾಲಿಂಗ ದಾಖಲೆ ಮುರಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+