Ind vs Aus: ಸೂರ್ಯ, ಇಶಾನ್, ರಿಂಕು ಸಿಂಗ್ ಅಬ್ಬರ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಭಾರತದ ಯುವ ಪಡೆ 2 ವಿಕೆಟ್‌ಗಳ ಗೆಲುವು ಸಾಧಿಸಿದೆ. ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್, ರಿಂಕು ಸಿಂಗ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 209 ರನ್‌ಗಳ ಗುರಿಯನ್ನು ಬೆನ್ನತ್ತಿದ ಭಾರತ ಗೆಲುವು ಸಾಧಿಸಿತು. ಇದು ಟಿ20 ಕ್ರಿಕೆಟ್‌ನಲ್ಲಿ ಭಾರತದ ಜಂಟಿ ಅತ್ಯಧಿಕ ರನ್ ಚೇಸಿಂಗ್ ಆಗಿದೆ.

ಸೂರ್ಯಕುಮಾರ್ ಯಾದವ್ ನಾಯಕನಾಗಿ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದರು. ಏಕದಿನ ಮಾದರಿಯಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ನೀಡದ ಸೂರ್ಯ, ಟಿ20 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದರು.

Ind vs Aus: Indias Impressive Chase: 209 Overpowered Against Australia in T20 Opener

ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆಸ್ಟ್ರೇಲಿಯಾ ಮ್ಯಾಥ್ಯೂ ಶಾರ್ಟ್ ಅವರ ವಿಕೆಟ್ ಅನ್ನು ಬೇಗನೆ ಕಳೆದುಕೊಂಡಿತು. ಶಾರ್ಟ್ 13 ರನ್ ಗಳಿಸಿ ಔಟಾದರು.

ನಂತರ ಸ್ಟೀವ್ ಸ್ಮಿತ್ ಮತ್ತು ಜೋಶ್ ಇಂಗ್ಲಿಸ್ ಅತ್ಯುತ್ತಮ ಜೊತೆಯಾಟ ಆಡಿದರು. ಎರಡನೇ ವಿಕೆಟ್‌ಗೆ ಈ ಜೋಡಿ 130 ರನ್‌ಗಳನ್ನು ಕಲೆಹಾಕಿತು. ಸ್ಟೀವ್ ಸ್ಮಿತ್ 41 ಎಸೆತಗಳಲ್ಲಿ 8 ಬೌಂಡರಿ ಸಹಿತ 52 ರನ್ ಗಳಿಸಿದರೆ, ಜೋಶ್ ಇಂಗ್ಲಿಸ್ ತಮ್ಮ ಚೊಚ್ಚಲ ಟಿ20 ಶತಕ ಸಿಡಿಸಿ ಮಿಂಚಿದರು.

50 ಎಸೆತಗಳಲ್ಲಿ 11 ಬೌಂಡರಿ 8 ಸಿಕ್ಸರ್ ಸಹಿತ 110 ರನ್ ಗಳಿಸಿದ ಅವರು ಆಸ್ಟ್ರೇಲಿಯಾ ಬೃಹತ್ ಮೊತ್ತ ಗಳಿಸಲು ಕಾರಣವಾದರು. ನಂತರ ಬಂದ ಮಾರ್ಕಸ್ ಸ್ಟೊಯಿನ್ಸ್ 6 ಎಸೆತಗಳಲ್ಲಿ ಅಜೇಯ 7 ರನ್ ಗಳಿಸಿದರೆ, ಟಿಮ್ ಡೇವಿಡ್ 13 ಎಸೆತಗಳಲ್ಲಿ 19 ರನ್ ಗಳಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 208 ರನ್ ಗಳಿಸಿತು. ಭಾರತದ ಪರವಾಗಿ ಪ್ರಸಿದ್ಧ್ ಕೃಷ್ಣ ಮತ್ತು ರವಿ ಬಿಷ್ಣೋಯ್ ಮಾತ್ರ ತಲಾ ಒಂದು ವಿಕೆಟ್ ಪಡೆದರು.

ಇಶಾನ್, ಸೂರ್ಯ ಅಮೋಘ ಆಟ

ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಭಾರತಕ್ಕೆ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ನೀಡಿದರು. ಆದರೆ ರುತುರಾಜ್ ಗಾಯಕ್ವಾಡ್ ಒಂದೂ ಎಸೆತ ಎದುರಿಸದೆ ರನೌಟ್ ಆಗುವ ಮೂಲಕ ಭಾರತ ಆರಂಭದಲ್ಲಿ ಆಘಾತ ಅನುಭವಿಸಿತು. ನಂತರ ಬಂದ ಇಶಾನ್ ಕಿಶನ್ ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದರು. ಯಶಸ್ವಿ ಜೈಸ್ವಾಲ್ 8 ಎಸೆತಗಳಲ್ಲಿ 2 ಬೌಂಡರಿ 2 ಸಿಕ್ಸರ್ ಸಹಿತ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇಶಾನ್ ಕಿಶನ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಉತ್ತಮ ಜೊತೆಯಾಟ ಆಡಿದರು. ಮೂರನೇ ವಿಕೆಟ್‌ಗೆ ಇವರಿಬ್ಬರೂ 112 ರನ್ ಕಲೆಹಾಕಿದರು. ಇಶಾನ್ ಕಿಶನ್ 39 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ಸಹಿತ 58 ರನ್ ಗಳಿಸಿ ಔಟಾದರು. ತಿಲಕ್ ವರ್ಮಾ 12 ರನ್ ಗಳಿಸಿ ಔಟಾದರು.

ನಾಯಕನ ಆಟವಾಡಿದ ಸೂರ್ಯಕುಮಾರ್ ಯಾದವ್ 42 ಎಸೆತಗಳಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್ ಸಹಿತ 80 ರನ್ ಗಳಿಸಿದರು. ಕೊನೆಯಲ್ಲಿ ವಿಕೆಟ್‌ಗಳು ಬಿದ್ದರೂ, ರಿಂಕು ಸಿಂಗ್ 14 ಎಸೆತಗಳಲ್ಲಿ 22 ರನ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+