Ind vs Aus: ಟಾಸ್ ಗೆದ್ರೆ ಬ್ಯಾಟಿಂಗ್ ಮಾಡ್ಬೇಕಾ? ಬೌಲಿಂಗ್ ಮಾಡ್ಬೇಕಾ? ಪಿಚ್ ವರದಿ ಏನು, ಏಕದಿನ ಪಂದ್ಯಗಳ ಅಂಕಿ ಅಂಶ
ಏಕದಿನ ವಿಶ್ವಕಪ್ 2023ರ ಮೆಗಾಫೈನಲ್‌ಗೆ ಕ್ಷಣಗಣನೆ ಆರಂಭವಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ಈ ಬಾರಿ ವಿಶ್ವಕಪ್‌ಗಾಗಿ ಸೆಣೆಸಾಡಲಿವೆ. ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ರೋಚಕ ಪಂದ್ಯವನ್ನು ನಿರೀಕ್ಷೆ ಮಾಡಲಾಗಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನ್ನುವ ಖ್ಯಾತಿ ಪಡೆದಿರುವ ಈ ಅಂಗಳದಲ್ಲಿ, 1 ಲಕ್ಷ 30 ಸಾವಿರ ಪ್ರೇಕ್ಷಕರು ಪಂದ್ಯವನ್ನು ವೀಕ್ಷಿಸಲಿದ್ದಾರೆ.

ಹಾಗಾದ್ರೆ ಫೈನಲ್ ಪಂದ್ಯದಲ್ಲಿ ಟಾಸ್ ಪ್ರಮುಖ ಪಾತ್ರ ವಹಿಸುತ್ತಾ, ಪಿಚ್ ಬ್ಯಾಟಿಂಗ್‌ಗೆ ನೆರವಾಗುತ್ತಾ ಅಥವಾ ಬೌಲರ್ ಗಳಿಗೆ ವರವಾಗುತ್ತಾ?, ಈ ಮೊದಲು ಇಲ್ಲಿ ನಡೆದಿರುವ ಏಕದಿನ ಪಂದ್ಯಗಳ ಫಲಿತಾಂಶ ಹೇಳೋದೇನು? ಇಲ್ಲಿದೆ ವರದಿ.
ಏಕದಿನ ಪಂದ್ಯಗಳ ಅಂಕಿ ಅಂಶ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈವರೆಗೂ ಒಟ್ಟು 32 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ 17 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಗೆದ್ದಿದ್ದರೆ, 15 ಬಾರಿ ಮೊದಲು ಬೌಲಿಂಗ್ ಮಾಡಿದ ತಂಡಗಳು ಗೆಲುವು ಸಾಧಿಸಿವೆ.
ಮೊದಲು ಬ್ಯಾಟಿಂಗ್ ಮಾಡುವಾಗ ಸರಾಸರಿ ಸ್ಕೋರ್ 237 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 208 ಆಗಿದೆ. ಇಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 365 ರನ್ ಗಳಿಸಿದ್ದು ಅತ್ಯಧಿಕ ಮೊತ್ತವಾಗಿದೆ. ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ 85 ರನ್‌ಗಳಿಗೆ ಆಲೌಟ್ ಆಗಿದ್ದು ಕಡಿಮೆ ಮೊತ್ತವಾಗಿದೆ.
ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ವರದಿ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದೆ ಮತ್ತು ಇಲ್ಲಿನ ಪಿಚ್‌ಗಳು ಕೆಲವು ಬಾರಿ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಪಂದ್ಯದ ಆರಂಭಿಕ ಓವರ್‌ಗಳು ಬೌಲರ್ ಗಳಿಗೆ ಸಹಕಾರಿಯಾಗಿದ್ದು ಬ್ಯಾಟರ್ ಗಳು ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ವಿಕೆಟ್ ಬೀಳದಂತೆ ಕಾಪಾಡಿಕೊಂಡರೆ ನಂತರ ಸುಲಭವಾಗಿ ರನ್ ಗಳಿಸಬಹುದು. ಆರಂಭದಲ್ಲಿ ಪಿಚ್ ವೇಗದ ಬೌಲರ್‌ಗಳಿಗೆ ಸಹಾಯ ಮಾಡುತ್ತದೆ. ನಂತರ, ಸ್ಪಿನ್ನರ್‌ಗಳು ಸಹಾಯವನ್ನು ಪಡೆಯುವ ಸಾಧ್ಯತೆಯಿದೆ.
ಮಳೆ ಅಡೆತಡೆಗಳಿಲ್ಲದೆ ಪಂದ್ಯವು ಸುಗಮವಾಗಿ ನಡೆಯುವ ನಿರೀಕ್ಷೆಯಿದೆ. ಸ್ಥಳದಲ್ಲಿ ತಾಪಮಾನವು ಸುಮಾರು 31 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆಯಿದೆ, ಗಾಳಿಯು ಗಂಟೆಗೆ 8 ಕಿಮೀ ವೇಗದಲ್ಲಿ ಇರುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.












Click it and Unblock the Notifications