Ind vs Aus T20: ಸರಣಿ ಗೆಲ್ಲುವ ವಿಶ್ವಾಸದಲ್ಲಿ ಭಾರತ; ಆಡುವ ಬಳಗ, ಪಿಚ್ ವರದಿ
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ ಟೀಂ ಇಂಡಿಯಾ. ಸರಣಿಯ ಮೂರನೇ ಪಂದ್ಯ ಇಂದು (ಮಂಗಳವಾರ) ಬರ್ಸಾಪರ ಕ್ರೀಡಾಂಹಣದಲ್ಲಿ ನಡೆಯಲಿದೆ.
ಈಗಾಗಲೇ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಭಾರತ ಮೂರನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ.

ಮತ್ತೊಂದೆಡೆ ಇಂದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಆಸ್ಟ್ರೇಲಿಯಾ ಯೋಜನೆ ಹೊಂದಿದೆ. ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದಲ್ಲಿ ಹಲವು ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.
ಭಾರತ ತಂಡದಲ್ಲಿ ಬದಲಾವಣೆ?
ಮೊದಲ ಎರಡು ಪಂದ್ಯಗಳಲ್ಲಿ ಭಾರತದ ಬ್ಯಾಟಿಂಗ್ ಅತ್ಯುತ್ತಮವಾಗಿದ್ದರು ಬೌಲಿಂಗ್ ಇನ್ನೂ ಸುಧಾರಣೆ ಕಾಣಬೇಕಿದೆ, ಇಂದಿನ ಪಂದ್ಯದಲ್ಲಿ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷೆ ಮಾಡಬಹುದಾಗಿದೆ. ಸ್ಪಿನ್ ಬೌಲಿಂಗ್ ಅತ್ಯುತ್ತಮವಾಗಿ ಪ್ರದರ್ಶನ ನೀಡಿದ್ದು, ವೇಗಿಗಳು ದುಬಾರಿಯಾಗಿದ್ದಾರೆ. ಇದರಿಂದ ನಾಯಕ ಸೂರ್ಯಕುಮಾರ್ ಯಾದವ್ ಹೆಚ್ಚುವರಿ ಬೌಲರ್ ಒಬ್ಬರಿಗೆ ಅವಕಾಶ ನೀಡುವ ಬಗ್ಗೆ ಯೋಚಿಸಬಹುದು.
ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ವಿಭಾಗದಲ್ಲಿ ಮಿಂಚಿದ್ದಾರೆ, ಇಂದು ಕೂಡ ಬರ್ಸಾಪರ ಕ್ರೀಡಾಂಗಣದಲ್ಲಿ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಲಾಗಿದೆ.
ಹವಾಮಾನ ಮತ್ತು ಪಿಚ್ ವರದಿ
ಅಕ್ಯುವೆದರ್ ಪ್ರಕಾರ, ನವೆಂಬರ್ 28 ರಂದು ಗುವಾಹಟಿಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಸಂಜೆ 7 ಗಂಟೆಗೆ ಆಟದ ಪ್ರಾರಂಭದಲ್ಲಿ ಗರಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಆಗಿರಬಹುದು, ಆದರೆ ರಾತ್ರಿ 10:30 ಗಂಟೆಗೆ ಆಟದ ಮುಕ್ತಾಯದ ಸಮಯದಲ್ಲಿ ತಾಪಮಾನವು 19 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುತ್ತದೆ.
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನ ವಿಕೆಟ್ ನಿಧಾನಗತಿಯ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದವು, ಆದರೆ ಅಕ್ಟೋಬರ್ 2022 ರಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಪಂದ್ಯದಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದ್ದರಿಂದ ಸ್ಥಳದಲ್ಲಿ ನಡೆದ ಕೊನೆಯ ಅಂತರರಾಷ್ಟ್ರೀಯ ಪಂದ್ಯವು ಬ್ಯಾಟಿಂಗ್ ಸ್ನೇಹಿ ಪಿಚ್ ಎಂದು ತೋರಿಸಿದೆ.
ಬರ್ಸಾಪರ ಸ್ಟೇಡಿಯಂನಲ್ಲಿ ಈವರೆಗೆ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿದ್ದು, ಸರಾಸರಿ ಸ್ಕೋರ್ 118 ಆಗಿದೆ ಮತ್ತು ಇಲ್ಲಿ ಮೊದಲು ಬ್ಯಾಟ್ ಮಾಡುವ ಮತ್ತು ಚೇಸಿಂಗ್ ಮಾಡುವ ತಂಡ ತಲಾ ಒಂದು ಬಾರಿ ಗೆದ್ದಿದೆ, ಇನ್ನೊಂದು ಪಂದ್ಯ ಫಲಿತಾಂಶವಿಲ್ಲದೆ ರದ್ದಾಗಿದೆ. ಇಬ್ಬನಿ ಬೀಳುವ ಸಾಧ್ಯತೆ ಇದ್ದು ಟಾಸ್ ಗೆಲ್ಲುವ ತಂಡ ಮೊದಲು ಬೌಲಿಂಗ್ ಮಾಡಬಹುದು.
ಸಂಭಾವ್ಯ ಆಡುವ ಬಳಗ
ಭಾರತ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಶಿವಂ ದುಬೆ/ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಆರನ್ ಹಾರ್ಡಿ, ನಾಥನ್ ಎಲ್ಲಿಸ್, ಕೇನ್ ರಿಚರ್ಡ್‌ಸನ್ / ಸೀನ್ ಅಬಾಟ್, ಜೇಸನ್ ಬೆಹ್ರೆಂಡಾರ್ಫ್, ಆಡಮ್ ಝಂಪಾ.












Click it and Unblock the Notifications