Ind vs Aus: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ : ಸೂರ್ಯ ಕುಮಾರ್ ನಾಯಕ, ಯಾರಿಗೆಲ್ಲಾ ಸಿಕ್ತು ಅವಕಾಶ?
ಏಕದಿನ ವಿಶ್ವಕಪ್ ಮುಗಿದ ಬಳಿಕ ಭಾರತ ಟಿ20 ವಿಶ್ವಕಪ್ ಪಂದ್ಯಾವಳಿಗೆ ತಯಾರಿ ಆರಂಭಿಸಲಿದೆ. ನವೆಂಬರ್ 23ರಿಂದ ಭಾರತ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದು, ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿದೆ.
ವಿಶ್ವಕಪ್‌ಗಾಗಿ ಸುದೀರ್ಘವಾಗಿ ಪಂದ್ಯಗಳನ್ನು ಆಡಿದ್ದ ಪ್ರಮುಖ ಆಟಗಾರರಿಗೆ ಟಿ20 ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣವಾಗಿ ಗುಣಮುಖರಾದ ಕಾರಣ, ಸೂರ್ಯಕುಮಾರ್ ಯಾದವ್ ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿದೆ.

ಏಕದಿನ ವಿಶ್ವಕಪ್‌ನಲ್ಲಿ ಆಡಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಸಿರಾಜ್, ಜಡೇಜಾ, ಕೆಎಲ್ ರಾಹುಲ್, ಶುಭಮನ್ ಗಿಲ್, ಕುಲದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವಕಪ್ ತಂಡದಲ್ಲಿದ್ದ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ ಕೃಷ್ಣ ಮಾತ್ರ ಟಿ20 ಸರಣಿಯಲ್ಲಿ ಆಡುವ ಅವಕಾಶ ಪಡೆದುಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಮೊದಲ ಮೂರು ಪಂದ್ಯಗಳಿಗೆ ವಿಶ್ರಾಂತಿ ಪಡೆದುಕೊಂಡಿದ್ದು, 4 ಮತ್ತು 5ನೇ ಟಿ20 ಪಂದ್ಯದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದು, ಉಪನಾಯಕನಾಗಲಿದ್ದಾರೆ.
2024ರಲ್ಲಿ ಟಿ20 ವಿಶ್ವಕಪ್‌ಗೆ ತಯಾರಿ
2024ರಲ್ಲಿ ಟಿ20 ವಿಶ್ವಕಪ್ ಇರುವ ಕಾರಣ ಯುವ ತಂಡವನ್ನು ತಯಾರು ಮಾಡಲು ಬಿಸಿಸಿಐ ಆಸಕ್ತಿ ಹೊಂದಿದೆ. ಅದಕ್ಕಾಗಿ ಹಲವು ಯುವ ಆಟಗಾರರಿಗೆ ಅವಕಾಶ ನೀಡುವ ಮೂಲಕ ಅವರನ್ನು ಮೆಗಾ ಟೂರ್ನಿಗೆ ತಯಾರು ಮಾಡುತ್ತಿದೆ.
ಆಸ್ಟ್ರೇಲಿಯಾ ತಂಡದಲ್ಲಿ ಕೂಡ ಪ್ರಮುಖ ಆಟಗಾರರು ವಿಶ್ರಾಂತಿ ಪಡೆದುಕೊಂಡಿದ್ದು, ಪಾಕಿಸ್ತಾನದ ವಿರುದ್ದದ ಟೆಸ್ಟ್ ಸರಣಿಗೆ ತಯಾರಿ ಮಾಡಿಕೊಳ್ಳಲಿದ್ದಾರೆ. ಮ್ಯಾಥ್ಯೂ ವೇಡ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
ಆಸ್ಟ್ರೇಲಿಯಾ ತಂಡ
ಮ್ಯಾಥ್ಯೂ ವೇಡ್ (ನಾಯಕ), ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೋನಿಸ್ ಆಡಮ್ ಝಂಪಾ, ಡೇವಿಡ್ ವಾರ್ನರ್.
ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶಾನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ವರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್, ಮುಖೇಶ್ ಕುಮಾರ್.
ಪಂದ್ಯಗಳ ದಿನಾಂಕ, ಸ್ಥಳ
ಟಿ20 ಸರಣಿಯ ಮೊದಲ ಪಂದ್ಯ ನವೆಂಬರ್ 23 ರಂದು ನಡೆಯಲಿದೆ, ವೈಜಾಗ್‌ನಲ್ಲಿ ಪಂದ್ಯ ನಡೆಯಲಿದ್ದು, ನಂತರ ಕ್ರಮವಾಗಿ ನ.26ರಂದು ತಿರುವನಂತಪುರಂ, ನ. 28ರಂದು ಗುವಾಹಟಿ, ಡಿಸೆಂಬರ್ 1ರಂದು ನಾಗ್ಪುರ ಮತ್ತು ಡಿ. 3ರಂದು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಈ ಮೊದಲು ಸರಣಿಯ 5ನೇ ಪಂದ್ಯ ಹೈದರಾಬಾದ್‌ನಲ್ಲಿ ಆಯೋಜನೆ ಮಾಡಿತ್ತಾದರೂ ಈಗ ಆ ಪಂದ್ಯವನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.
ಈ ಪಂದ್ಯಗಳನ್ನು ಜಿಯೋ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ನೇರಪ್ರಸಾರ ನೋಡಬಹುದು. ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದು.












Click it and Unblock the Notifications