Ind vs Aus T20: ಬಲಿಷ್ಠ ಆಸ್ಟ್ರೇಲಿಯಾಕ್ಕೆ ಭಾರತದ ಯುವ ಪಡೆ ಸವಾಲು: ಪಿಚ್ ವರದಿ, ಪಂದ್ಯದ ಸಮಯ

ಏಕದಿನ ವಿಶ್ವಕಪ್ ಸೋಲಿನ ನಂತರ ಭಾರತದ ಯುವ ಪಡೆ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸವಾಲಾಕಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಭಾರತ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲಿದ್ದು, ನವೆಂಬರ್ 23ರಂದು ಮೊದಲ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ.

2024ರ ಜೂನ್‌ನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು ಇದಕ್ಕಾಗಿ ಭಾರತ ತಂಡ ಸಿದ್ಧತೆ ಆರಂಭಿಸಿದೆ. ಏಕದಿನ ವಿಶ್ವಕಪ್‌ನಲ್ಲಿ ಆಡಿದ ಬಹುತೇಕ ಆಟಗಾರರಿಗೆ ಈ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದ್ದು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ.

Ind Vs Aus T20: Team India Playing XI, Pitch, Weather Report

ಟಿ20 ವಿಶ್ವಕಪ್‌ಗೆ ಮುನ್ನ ಭಾರತ ಮೂರು ಟಿ20 ಸರಣಿಗಳನ್ನು ಆಡಲಿದ್ದು, ಐಪಿಎಲ್‌ ಕೂಡ ನಡೆಯಲಿದ್ದು, ಟಿ20 ವಿಶ್ವಕಪ್‌ಗೆ ಸಿದ್ಧತೆ ಮಾಡಿಕೊಳ್ಳಲಿದೆ. ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದು ಸೂರ್ಯಕುಮಾರ್ ಯಾದವ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

ಟಿ20 ತಂಡದಲ್ಲಿ ಸ್ಥಾನ ಪಡೆದುಕೊಳ್ಳಲು ಯುವ ಆಟಗಾರರು ತುದಿಗಾಲಲ್ಲಿ ನಿಂತಿದ್ದಾರೆ. ಟಿ20 ವಿಶ್ವಕಪ್‌ ಅಭಿಯಾನದಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವುದು ಮುಖ್ಯವಾಗುತ್ತದೆ.

ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಆರಂಭಿಕರ ಸ್ಥಾನಕ್ಕೆ ಪೈಪೋಟಿ ಎದುರಿಸುತ್ತಿದ್ದಾರೆ. ಶುಭಮನ್ ಗಿಲ್ ಆರಂಭಿಕರಾಗಿ ಈಗಾಗಲೇ ತಂಡದಲ್ಲಿ ಸ್ಥಾನ ಖಚಿತಪಡಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ತಂಡಕ್ಕೆ ವಾಪಸ್ ಬರುತ್ತಾರ ಎನ್ನುವುದು ಪ್ರಶ್ನೆಯಾಗಿ ಉಳಿದಿದೆ. ಇಶಾನ್ ಕಿಶನ್ ಕೂಡ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

ವಿಶಾಖಪಟ್ಟಣ ಪಿಚ್ ವರದಿ

ವಿಶಾಖಪಟ್ಟಣದ ಡಾ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂ ಪಿಚ್ ಆರಂಭದಲ್ಲಿ ಬ್ಯಾಟರ್‌ಗಳಿಗೆ ನೆರವು ಸಿಗಲಿದೆ ನಂತರ ಇದು ಸ್ಪಿನ್ನರ್‌ಗಳಿಗೆ ಸಹಾಯ ಮಾಡಲಿದೆ ಎಂದು ಹೇಳಲಾಗಿದೆ.

ಇಲ್ಲಿ ನಡೆದಿರುವ ಮೂರು ಟಿ20 ಪಂದ್ಯಗಳಲ್ಲಿ ಎರಡು ಬಾರಿ ಚೇಸಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. 179 ರನ್ ಇಲ್ಲಿ ದಾಖಲಾದ ಅತಿ ಹೆಚ್ಚು ಮೊತ್ತವಾಗಿದೆ. ಶ್ರೀಲಂಕಾ ತಂಡ ಇಲ್ಲಿ 82 ರನ್‌ಗಳಿಗೆ ಆಲೌಟ್ ಆಗಿದ್ದು ಕಡಿಮೆ ಮೊತ್ತವಾಗಿದೆ.

ಭಾರತ ಆಸ್ಟ್ರೇಲಿಯಾ ಇದುವರೆಗೂ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 15 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದ್ದು, 10 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಯಾಗಿದೆ.

ಭಾರತದ ಸಂಭಾವ್ಯ ಆಡುವ ಬಳಗ

ರುತುರಾಜ್ ಗಾಯಕವಾಡ, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ ಸಂಭಾವ್ಯ ಆಡುವ ಬಳಗ

ಮ್ಯಾಥ್ಯೂ ವೇಡ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಆರನ್ ಹಾರ್ಡಿ, ನಾಥನ್ ಎಲ್ಲಿಸ್, ಕೇನ್ ರಿಚರ್ಡ್‌ಸನ್ / ಸೀನ್ ಅಬಾಟ್, ಜೇಸನ್ ಬೆಹ್ರೆನ್‌ಡಾರ್ಫ್, ಆಡಮ್ ಝಂಪಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+