Ind Vs Aus T20I: ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ, ಸ್ಥಳ, ನೇರಪ್ರಸಾರ ಮಾಹಿತಿ
ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಸೋಲಿನ ಶಾಕ್‌ನಿಂದ ಚೇತರಿಸಿಕೊಳ್ಳುವ ಮೊದಲೇ ಭಾರತ ತಂಡ ಟಿ20 ಸರಣಿಗೆ ಸಜ್ಜಾಗಬೇಕಿದೆ. ಭಾರತ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದ್ದು, ನವೆಂಬರ್ 23ರಂದು ವೈಜಾಗ್‌ನಲ್ಲಿ ಮೊದಲ ಪಂದ್ಯ ನಡೆಯಲಿದೆ.
ಏಕದಿನ ವಿಶ್ವಕಪ್‌ನಲ್ಲಿ ಆಡಿದ ಪ್ರಮುಖ ಆಟಗಾರರಿಗೆ ಈ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಯುವ ಆಟಗಾರರು ಅವಕಾಶ ಪಡೆಯಲಿದ್ದಾರೆ. . ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಸ್ಟಾರ್ ಆಟಗಾರರು ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

5 ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲು ಮ್ಯಾಥ್ಯೂ ವೇಡ್ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ಭಾರತದ ಆಯ್ಕೆಗಾರರು ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ಮಾಡುವ ಸಾಧ್ಯತೆ ಇದೆ.
ಯಾರಿಗೆಲ್ಲಾ ಅವಕಾಶ?
ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ, ಸೂರ್ಯಕುಮಾರ್ ಯಾದವ್ ಅವರಿಗೆ ನಾಯಕತ್ವ ನೀಡುವ ಸಾಧ್ಯತೆ ಇದೆ. ಇನ್ನು ಯುವ ಆಟಗಾರರಾದ ಪ್ರಸಿದ್ಧ ಕೃಷ್ಣ, ತಿಲಕ್ ವರ್ಮಾ, ಯಶಸ್ವಿ ಜೈಸ್ವಾಲ್, ಮುಖೇಶ್ ಕುಮಾರ್ ಸೇರಿದಂತೆ ಹಲವು ಹೊಸ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಬಿಸಿಸಿಐ ಶೀಘ್ರದಲ್ಲೇ ತಂಡವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ
ಮ್ಯಾಥ್ಯೂ ವೇಡ್ (ನಾಯಕ), ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೋನಿಸ್ ಆಡಮ್ ಝಂಪಾ, ಡೇವಿಡ್ ವಾರ್ನರ್.
ಸರಣಿ ವೇಳಾಪಟ್ಟಿ
ಟಿ20 ಸರಣಿಯ ಮೊದಲ ಪಂದ್ಯ ನವೆಂಬರ್ 23ರಂದು ವೈಜಾಗ್‌ನಲ್ಲಿ ನಡೆಯಲಿದೆ.
ಎರಡನೇ ಪಂದ್ಯ ನವೆಂಬರ್ 26 ರಂದು, ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮೂರನೇ ಪಂದ್ಯ ನವೆಂಬರ್ 28ರಂದು ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯಲಿದೆ.
ನಾಲ್ಕನೇ ಪಂದ್ಯ ಡಿಸೆಂಬರ್ 1ರಂದು ನಾಗ್ಪುರದ ವಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸರಣಿಯ ಕೊನೆಯ ಪಂದ್ಯ ಡಿಸೆಂಬರ್ 3ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಭಾರತ vs ಆಸ್ಟ್ರೇಲಿಯಾ ಟಿ20 ಸರಣಿಯನ್ನು ಜಿಯೋ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್‌ಸ್ಟ್ರೀಮ್ ಮಾಡಲಾಗುತ್ತದೆ. ಅಭಿಮಾನಿಗಳು ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದು.












Click it and Unblock the Notifications