Ind vs Aus : ಮೂರನೇ ಏಕದಿನ ಪಂದ್ಯಕ್ಕೆ ಮುನ್ನ ಭಾರತ ತಂಡಕ್ಕೆ ಹೊಸ ಸಮಸ್ಯೆ!
ಏಕದಿನ ವಿಶ್ವಕಕ್‌ಗೆ ಮುನ್ನ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಪ್ರಮುಖ ಆಟಗಾರರ ಅಲಭ್ಯತೆ ಹೊರತಾಗಿ ಕೂಡ ಭಾರತ ಅತ್ಯುತ್ತಮ ಪ್ರದರ್ಶನ ನೀಡಿದೆ. ಸರಣಿಯ ಕೊನೆಯ ಪಂದ್ಯ ಬುಧವಾರ ರಾಜ್‌ಕೋಟ್‌ನಲ್ಲಿ ನಡೆಯಲಿದೆ.
ಮೂರನೇ ಏಕದಿನ ಪಂದ್ಯಕ್ಕೆ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಬುಮ್ರಾ, ಮೊಹಮ್ಮದ್ ಸಿರಾಜ್ ತಂಡಕ್ಕೆ ಮರಳಿದ್ದಾರೆ. ಶುಭಮನ್ ಗಿಲ್ ಮತ್ತು ಶಾರ್ದೂಲ್ ಠಾಕೂರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ರಾಜ್‌ಕೋಟ್‌ನಲ್ಲಿ ಕೇವಲ 13 ಸದಸ್ಯರ ತಂಡ ಮಾತ್ರ ಇದೆ. ಪಂದ್ಯದ ಸಮಯದಲ್ಲಿ ಆಟಗಾರರಿಗೆ ವಿಶ್ರಾಂತಿ ಬೇಕಾದರೆ ಸ್ಥಳೀಯ ಆಟಗಾರರನ್ನು ಬದಲಿ ಫೀಲ್ಡರ್‌ಗಳಾಗಿ ಕರೆಯಬೇಕಾಗಬಹುದು. ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ವಿಶ್ರಾಂತಿ ಪಡೆದ ಬಳಿಕ ಮರಳುತ್ತಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಂಡವನ್ನು ಆಯ್ಕೆ ಮಾಡಲು 13 ಆಟಗಾರರನ್ನು ಮಾತ್ರ ಹೊಂದಿದ್ದಾರೆ ಎಂದು ಖಚಿತಪಡಿಸಿದ್ದಾರೆ.
ನೆಟ್ ಬೌಲರ್ ಗಳು ಇಲ್ಲ
ಇನ್ನೂ ವಿಶೇಷ ಎಂದರೆ ಭಾರತ ತಂಡದ ಬ್ಯಾಟರ್ ಗಳು ಅಭ್ಯಾಸ ಮಾಡಲು ನೆಟ್ ಬೌಲರ್ ಗಳು ಕೂಡ ಲಭ್ಯವಿಲ್ಲ. ಹಲವು ಆಟಗಾರರು ಅನಾರೋಗ್ಯದ ಕಾರಣದಿಂದ ವಿಶ್ರಾಂತಿ ಪಡೆಯುತ್ತಿದ್ದು, ಇನ್ನೂ ಕೆಲವು ಆಟಗಾರರು ಮನೆಗೆ ತೆರಳಿದ್ದಾರೆ, ಹೀಗಾಗಿ 13 ಆಟಗಾರರು ಲಭ್ಯರಿದ್ದಾರೆ ಎಂದು ರೋಹಿತ್ ಶರ್ಮಾ ಮಂಗಳವಾರ ಹೇಳಿದರು.
ಕುಲದೀಪ್ ಯಾದವ್ ಜೊತೆಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡಕ್ಕೆ ವಾಪಸಾಗಿದ್ದು, ಹಾರ್ದಿಕ್ ಪಾಂಡ್ಯ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಇದಲ್ಲದೆ ಮೊಹಮ್ಮದ್ ಶಮಿಗೂ ಬ್ರೇಕ್ ನೀಡಲಾಗಿದೆ. ವಾಷಿಂಗ್ಟನ್ ಸುಂದರ್ ಅವರನ್ನು ಹೊರತುಪಡಿಸಿ ಏಷ್ಯನ್ ಗೇಮ್ಸ್‌ಗೆ ತೆರಳುವ ಆಟಗಾರರನ್ನು ಬಿಡುಗಡೆ ಮಾಡಲಾಗಿದೆ. ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್ ನಾಳಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಮೂಲಗಳ ಪ್ರಕಾರ ಟೀಮ್ ಇಂಡಿಯಾ ನೆಟ್ ಬೌಲರ್‌ಗಳು ಅಲಭ್ಯರಾಗಿದ್ದಾರೆ. ಇದರಿಂದ ತಂಡದ ಪ್ರಮುಖ ಬೌಲರ್ ಗಳನ್ನು ಅಥವಾ ಸ್ಥಳೀಯ ಬೌಲರ್ ಗಳನ್ನು ಅವಲಂಬಿಸಬೇಕಾಗಿದೆ. ಇಬ್ಬರಿಗಿಂತ ಹೆಚ್ಚು ಆಟಗಾರರು ಫೀಲ್ಡಿಂಗ್ ಮಾಡುವಾಗ ಹೊರಗುಳಿಯುವ ಸಂದರ್ಭ ಬಂದರೆ ಸ್ಥಳೀಯ ಆಟಗಾರರನ್ನು ಬದಲೀ ಫೀಲ್ಡರ್ ಗಳನ್ನಾಗಿ ಆಡಿಸುವ ಅನಿವಾರ್ಯತೆ ಬರಲಿದೆ.
ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications