Ind vs Aus: ವಿಶ್ವಕಪ್‌ ಮೆಗಾ ಫೈನಲ್: ಭಾರತ ಆಸ್ಟ್ರೇಲಿಯಾ ಹೆಡ್‌ ಟು ಹೆಡ್ ದಾಖಲೆ, ಪಿಚ್ ವರದಿ!

ಏಕದಿನ ವಿಶ್ವಕಪ್ 2023ರ ಪಂದ್ಯಾವಳಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯ ಮುಖಾಮುಖಿಯಾಗಲಿವೆ.

ಐದು ಬಾರಿ ಏಕದಿನ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ 6ನೇ ಬಾರಿ ಪ್ರಶಸ್ತಿ ಗೆಲ್ಲುವ ಉತ್ಸಾಹದಲ್ಲಿದ್ದರೆ, ಭಾರತ ಮೂರನೇ ಬಾರಿ ಕಪ್ ಗೆಲ್ಲಲು ರಣತಂತ್ರ ರೂಪಿಸಿದೆ. 2003ರ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿತ್ತು, ಈಗ ಭಾರತ ಆ ಸೋಲಿನ ಲೆಕ್ಕಾಚಾರ ತೀರಿಸಿಕೊಳ್ಳುವ ತಯಾರಿಯಲ್ಲಿದೆ.

ind-vs-aus-world-cup-final

ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಫೈನಲ್‌ಗೆ ಪ್ರವೇಶ ಪಡೆದರೆ, ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧ 3 ವಿಕೆಟ್‌ಗಳ ರೋಚಕ ಗೆಲುವು ಪಡೆಯುವ ಮೂಲಕ ವಿಶ್ವಕಪ್ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

ಭಾರತ - ಆಸ್ಟ್ರೇಲಿಯಾ ಮುಖಾಮುಖಿ

43 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಭಾರತ - ಆಸ್ಟ್ರೇಲಿಯಾ ಇದುವರೆಗೂ 150 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಆಸ್ಟ್ರೇಲಿಯಾ 83 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಭಾರತ 57 ಪಂದ್ಯಗಳಲ್ಲಿ ಗೆದ್ದಿದೆ, 10 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

ಈ ಬಾರಿ ವಿಶ್ವಕಪ್‌ ಆರಂಭಕ್ಕೆ ಮುನ್ನ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ನಡೆದಿತ್ತು, ಮೂರು ಪಂದ್ಯಗಳ ಸರಣಿಯನ್ನು ಭಾರತ 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ಅದಾದ ನಂತರ ಈ ವಿಶ್ವಕಪ್‌ನ ಭಾರತದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿತ್ತು.

ಏಕದಿನ ವಿಶ್ವಕಪ್‌ನಲ್ಲಿ ಭಾರತ ಆಸ್ಟ್ರೇಲಿಯಾ ಒಟ್ಟು 12 ಬಾರಿ ಮುಖಾಮುಖಿಯಾಗಿದ್ದು ಇದರಲ್ಲಿ ಆಸ್ಟ್ರೇಲಿಯಾ 8 ಬಾರಿ ಗೆಲುವು ಸಾಧಿಸಿದ್ದರೆ, ಭಾರತ 4 ಪಂದ್ಯಗಳನ್ನು ಗೆದ್ದಿದೆ. ವಿಶ್ವಕಪ್‌ನ ಕೊನೆಯ ಮೂರು ಏಕದಿನ ಪಂದ್ಯಗಳಲ್ಲಿ ಭಾರತ 2 ಬಾರಿ ಗೆದ್ದಿದ್ದು, ಆಸ್ಟ್ರೇಲಿಯಾ ಒಂದು ಬಾರಿ ಮಾತ್ರ ಗೆಲುವು ಸಾಧಿಸಿದೆ.

ಭಾರತದಲ್ಲಿ ಆಸ್ಟ್ರೇಲಿಯಾ 70 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 33 ಪಂದ್ಯಗಳಲ್ಲಿ ಭಾರತವನ್ನು ಸೋಲಿಸಿದೆ, ಭಾರತ 32 ಪಂದ್ಯಗಳಲ್ಲಿ ಗೆಲುವು ಕಂಡಿದ್ದು 5 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಯಾಗಿದೆ.

ಬಲಿಷ್ಠವಾಗಿದೆ ಭಾರತ ತಂಡ

ಹಳೆಯ ಕತೆ ಏನೇ ಇದ್ದರೂ ಈ ಬಾರಿ ವಿಶ್ವಕಪ್‌ನಲ್ಲಿ ಆಡುತ್ತಿರುವ ಭಾರತ ತಂಡ ಮಾತ್ರ ವಿಭಿನ್ನವಾಗಿದೆ. ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದೆ. ಒಬ್ಬರು ವಿಫಲವಾದರೂ ಮತ್ತೊಬ್ಬರು ಉತ್ತಮ ಪ್ರದರ್ಶನ ನೀಡುವ ಪಂದ್ಯವನ್ನು ಗೆಲ್ಲಿಸುತ್ತಿದ್ದಾರೆ, ತಂಡವಾಗಿ ಆಡುತ್ತಿರುವ ಭಾರತ ಎಲ್ಲಾ ರೀತಿಯಿಂದಲೂ ಆಸ್ಟ್ರೇಲಿಯಾಗಿಂತ ಬಲಿಷ್ಠವಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 1.30 ಲಕ್ಷ ಪ್ರೇಕ್ಷಕರ ಬಲ ಭಾರತಕ್ಕೆ ಸಿಗಲಿದೆ. ತವರಿನ ಪರಿಸ್ಥಿತಿಯ ಲಾಭ ಪಡೆದು ಮೂರನೇ ವಿಶ್ವಕಪ್ ಗೆಲ್ಲುವ ತವಕದಲ್ಲಿದೆ ಭಾರತ.

ಪಿಚ್ ಬಗ್ಗೆ ಹೇಳುವುದಾದರೆ ಅಹಮದಾಬಾದ್ ಸಾಮಾನ್ಯವಾಗಿ ವೇಗಿಗಳಿಗೆ ನೆರವು ನೀಡುತ್ತದೆ, ಬ್ಯಾಟರ್ ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದರೆ ನಂತರ ಸುಲಭವಾಗಿ ರನ್ ಗಳಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+