Ranchi Test: ನಾಲ್ಕನೇ ಟೆಸ್ಟ್‌ಗೆ ಎರಡು ಬದಲಾವಣೆ ಮಾಡಿದ ಇಂಗ್ಲೆಂಡ್; ಭಾರತ ಪ್ಲೇಯಿಂಗ್ 11 ಹೇಗಿರಲಿದೆ?
ರಾಜ್‌ಕೋಟ್‌ನಲ್ಲಿ ಭಾರಿ ಅಂತರದಲ್ಲಿ ಸೋತು ಮುಖಭಂಗ ಅನುಭವಿಸಿರುವ ಇಂಗ್ಲೆಂಡ್, ಸರಣಿಯ ನಿರ್ಣಾಯಕ ನಾಲ್ಕನೇ ಟೆಸ್ಟ್‌ನಲ್ಲಿ ಎರಡು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಟೆಸ್ಟ್‌ನಲ್ಲಿ ಸೋತರೆ ಇಂಗ್ಲೆಂಡ್ ಸರಣಿ ಕಳೆದುಕೊಳ್ಳಲಿದ್ದು, ಗೆಲುವಿನ ಮೂಲಕ ಸರಣಿ ಸಮಬಲಗೊಳಿಸುವ ಲೆಕ್ಕಾಚಾರದಲ್ಲಿದೆ.
ಶುಕ್ರವಾರದಿಂದ ರಾಂಚಿಯಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಇಂಗ್ಲೆಂಡ್ ಒಂದು ದಿನ ಮೊದಲನೇ ಆಡುವ ಬಳಗವನ್ನು ಪ್ರಕಟಿಸಿದೆ. ಮಾರ್ಕ್ ವುಡ್ ಮತ್ತು ಲೆಗ್ ಸ್ಪಿನ್ನರ್ ರೆಹಾನ್ ಅಹ್ಮದ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಬದಲಿಗೆ ವೇಗದ ಬೌಲರ್ ಒಲಿ ರಾಬಿನ್ಸನ್ ಮತ್ತು ಆಫ್ ಸ್ಪಿನ್ನರ್ ಶೋಯೆಬ್ ಬಶೀರ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ವಿಶಾಖಪಟ್ಟಣದನಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಬಶೀರ್, ನಾಯಕ ರೋಹಿತ್ ಶರ್ಮಾ ಮತ್ತು ಶತಕ ಶುಭ್‌ಮನ್ ಗಿಲ್ ಸೇರಿದಂತೆ ನಾಲ್ಕು ವಿಕೆಟ್‌ಗಳನ್ನು ಪಡೆದರು, ಆದರೆ ಮೂರನೇ ಟೆಸ್ಟ್‌ಗೆ ಅವರನ್ನು ಆಡುವ ಬಳಗದಿಂದ ಕೈಬಿಡಲಾಗಿತ್ತು.
ಮೂರು ಟೆಸ್ಟ್ ಪಂದ್ಯಗಳಲ್ಲಿ ಸತತವಾಗಿ ವಿಫಲವಾಗಿದ್ದರು ಜಾನಿ ಬೈರ್‌ಸ್ಟೋವ್ ನಾಲ್ಕನೇ ಟೆಸ್ಟ್‌ನಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಡಾನ್ ಲಾರೆನ್ಸ್ ಅವಕಾಶ ಪಡೆಯಬಹುದು ವರಿಯಾಗಿದ್ದರೂ ಕೊನೆಗೆ ಬೈರ್‌ಸ್ಟೋವ್ ಮತ್ತೊಂದು ಅವಕಾಶ ಪಡೆದುಕೊಂಡಿದ್ದಾರೆ.
41 ವರ್ಷ ವಯಸ್ಸಿನ ವೇಗಿ ಜೇಮ್ಸ್ ಆಂಡರ್ಸನ್ ಅವರನ್ನು ನಾಲ್ಕನೇ ಟೆಸ್ಟ್‌ಗೂ ಉಳಿಸಿಕೊಂಡಿದೆ. ಅವರಿಗೆ ಆಟದ ವಿಶ್ರಾಂತಿ ನೀಡಲು ಕರೆಗಳು ಬಂದರೂ ಸಹ ಅವರು ರಾಂಚಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ರಾಜ್‌ಕೋಟ್ ಟೆಸ್ಟ್‌ನಲ್ಲಿನ ನಿರಾಶಾದಾಯಕ ಸೋಲಿನಿಂದ ಚೇತರಿಸಿಕೊಳ್ಳಲು ಮತ್ತು ಧರ್ಮಶಾಲಾದಲ್ಲಿ ಅಂತಿಮ ಪಂದ್ಯಕ್ಕೆ ಹೋಗುವ ಮುನ್ನ ಸರಣಿಯನ್ನು ಟೈ ಮಾಡಲು ಇಂಗ್ಲೆಂಡ್ ಬಯಸುತ್ತಿದೆ.
ಭಾರತ ತಂಡದಲ್ಲಿ ಬದಲಾವಣೆ
ಇನ್ನು ಭಾರತ ತಂಡದಲ್ಲಿ ಕೂಡ ಪ್ರಮುಖ ಬದಲಾವಣೆಗಳನ್ನು ನಿರೀಕ್ಷೆ ಮಾಡಬಹುದಾಗಿದೆ. ಬುಮ್ರಾ ಅವರಿಗೆ ವಿಶ್ರಾಂತಿ ನೀಡಿರುವ ಕಾರಣ, ಅವರ ಬದಲಾಗಿ ಆಕಾಶ್ ದೀಪ್ ಅವಕಾಶ ಪಡೆಯುವ ಸಾಧ್ಯತೆ ಇದೆ. ಇನ್ನು ಬ್ಯಾಟಿಂಗ್‌ನಲ್ಲಿ ವಿಫಲವಾಗಿರುವ ರಜತ್ ಪಾಟಿದಾರ್ ಬದಲಿಗೆ ದೇವದತ್ ಪಡಿಕ್ಕಲ್ ಕಣಕ್ಕಿಳಿಯಬಹುದು ಎಂದು ಹೇಳಲಾಗಿದೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ರೋಹಿತ್ ಶರ್ಮಾ ಉಳಿಸಿಕೊಳ್ಳಲಿದ್ದಾರೆ.
ಭಾರತ ಸಂಭಾವ್ಯ ಆಡುವ ಬಳಗ
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ರಜತ್ ಪಾಟಿದಾರ್/ದೇವದತ್ತ್ ಪಡಿಕ್ಕಲ್, ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ಧ್ರುವ ಜುರೆಲ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್/ ಆಕಾಶ್ ದೀಪ್.
ಇಂಗ್ಲೆಂಡ್ ಪ್ಲೇಯಿಂಗ್ 11
ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್, ಶೋಯೆಬ್ ಬಶೀರ್












Click it and Unblock the Notifications