Devdutt Padikkal: ಮೊದಲ ಅಂತಾರಾಷ್ಟ್ರೀಯ ಟೆಸ್ಟ್‌ನಲ್ಲೇ ಮಿಂಚಿದ ಕನ್ನಡಿಗ
ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ. ಎರಡನೇ ದಿನದ ಆಟ ಮುಗಿಯುವ ಮುನ್ನವೇ ಈ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿ ಭಾರತದ ಪಾಲಿಗೆ ವಿಶೇಷ. ಬರೋಬ್ಬರಿ ಐವರು ಆಟಗಾರರು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಆಕಾಶ್ ದೀಪ್ ಮತ್ತು ದೇವದತ್ ಪಡಿಕ್ಕಲ್ ಈ ಸರಣಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದರು.

ರಜತ್ ಪಾಟಿದಾರ್ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದರು. ಧರ್ಮಶಾಲಾ ಟೆಸ್ಟ್ ನಲ್ಲಿ ಪದಾರ್ಪಣೆ ಮಾಡಿದ ಕನ್ನಡಿಗ ದೇವದತ್ ಪಡಿಕ್ಕಲ್ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಗಳಿಸುವ ಮೂಲಕ ಗಮನ ಸೆಳೆದರು.
ಉತ್ತಮ ಜೊತೆಯಾಟ
ಆರಂಭದಲ್ಲಿ ಯಶಸ್ವಿ ಜೈಸ್ವಾಲ್ ಅರ್ಧಶತಕ ಗಳಿಸಿದ ಬಳಿಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಶತಕ ಗಳಿಸಿ ಔಟಾದರು. ಬಳಿಕ ಜೊತೆಯಾದ ಸರ್ಫರಾಜ್ ಖಾನ್ ಮತ್ತು ದೇವದತ್ ಪಡಿಕ್ಕಲ್ 97 ರನ್‌ಗಳ ಅಮೂಲ್ಯ ಜೊತೆಯಾಟ ಆಡಿದರು. ಮೊದಲನೇ ಪಂದ್ಯ ಆಡುತ್ತಿದ್ದರೂ ಆತ್ಮವಿಶ್ವಾಸದಿಂದ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ ಬೌಂಡರಿ, ಸಿಕ್ಸರ್ ಮೂಲಕ ರನ್ ಗಳಿಸಿದರು. 103 ಎಸೆತಗಳಲ್ಲಿ 10 ಬೌಂಡರಿ 1 ಭರ್ಜರಿ ಸಿಕ್ಸರ್ ಸಹಿತ 65 ರನ್ ಗಳಿಸಿ ಔಟಾದರು.
23 ವರ್ಷದ ಯುವ ಬ್ಯಾಟರ ದೇವದತ್ ಪಡಿಕ್ಕಲ್ ಮೊದಲ ಪಂದ್ಯದಲ್ಲೇ ಭರವಸೆ ಮೂಡಿಸಿದ್ದಾರೆ. ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದ ಅವರು, ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ತಂಡಕ್ಕೆ ಸೇರ್ಪಡೆಯಾದರು.
ಈ ಬಾರಿ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ 4 ಪಂದ್ಯಗಳನ್ನು ಮಾತ್ರ ಆಡಿರುವ ಅವರು 6 ಇನ್ನಿಂಗ್ಸ್‌ಗಳಲ್ಲಿ 556 ರನ್ ಗಳಿಸಿ ಮಿಂಚಿದ್ದರು. 193 ರನ್ ಅವರು ಗಳಿಸಿದ ಅತ್ಯಧಿಕ ಸ್ಕೋರ್ ಆಗಿದೆ. ಅದಾದ ಬಳಿಕ ಇಂಗ್ಲೆಂಡ್ ಲಯನ್ಸ್ ವಿರುದ್ಧ ಭಾರತ ಎ ತಂಡಕ್ಕಾಗಿ ಆಡಿದ್ದ ಪಡಿಕ್ಕಲ್ ಅಲ್ಲೂ ಶತಕ ಸಿಡಿಸಿದ್ದರು.
ಕರ್ನಾಟಕ ತಂಡಕ್ಕಾಗಿ ಆಡಿ ಉತ್ತಮ ಪ್ರದರ್ಶನ ನೀಡಿದ್ದ ಅವರು, ಐಪಿಎಲ್‌ನಲ್ಲಿ ಮೊದಲ ಬಾರಿಗೆ ಆರ್ ಸಿಬಿ ತಂಡಕ್ಕಾಗಿ ಆಡಿದರು. ಬಳಿಕ ರಾಜಸ್ಥಾನ ರಾಯಲ್ಸ್ ಪಾಳಯ ಸೇರಿದ ಅವರು, 2024ರ ಐಪಿಎಲ್‌ಗೆ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಟ್ರೇಡ್ ಆಗಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications