Ind vs Eng: ಗಾಯಗೊಂಡ ಭಾರತದ ಇಬ್ಬರು ಪ್ರಮುಖ ಆಟಗಾರರು; ಬದಲೀ ಆಟಗಾರರ ಆಯ್ಕೆ

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲನೇ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಭಾರತ ಎರಡನೇ ಟೆಸ್ಟ್‌ನಲ್ಲಿ ಗೆಲುವಿನ ವಿಶ್ವಾಸದಲ್ಲಿದೆ. ಆದರೆ ಎರಡನೇ ಟಿ20 ಪಂದ್ಯಕ್ಕೆ ಮುನ್ನ ಭಾರತಕ್ಕೆ ಡಬಲ್ ಶಾಕ್ ಸಿಕ್ಕಿದೆ. ಎರಡನೇ ಪಂದ್ಯಕ್ಕೆ ಮುನ್ನ ಭಾರತದ ಇಬ್ಬರು ಪ್ರಮುಖ ಆಟಗಾರರು ಗಾಯಗೊಂಡಿದ್ದಾರೆ. ಒಬ್ಬರು ಸರಣಿಯಿಂದಲೇ ಹೊರಬಿದ್ದಿದ್ದು, ಇನ್ನೊಬ್ಬರು ಮುಂದಿನ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಭಾರತದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸ್ನಾಯು ಸೆಳೆತದಿಂದ ಬಳಲುತ್ತಿದ್ದು ಸರಣಿಯಿಂದಲೇ ಹೊರಬಿದ್ದಿದ್ದಾರೆ. ರಿಂಕು ಸಿಂಗ್ ಬೆನ್ನಿನ ಕೆಳಭಾಗದ ಸೆಳೆತದಿಂದ ಬಳಲುತ್ತಿದ್ದು ಮುಂದಿನ ಎರಡು ಟಿ20 ಪಂದ್ಯಗಳಲ್ಲಿ ಕಣಕ್ಕಿಳಿಯಲ್ಲ ಎನ್ನುವುದು ಖಚಿತವಾಗಿದೆ.

Ind vs eng nitish kumar reddy out from t20 series rinku singh not available for 2 matches

ಬದಲೀ ಆಟಗಾರರ ಆಯ್ಕೆ

ರಿಂಕು ಸಿಂಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಗಾಯಗೊಂಡ ಬೆನ್ನಲ್ಲೇ ಬಿಸಿಸಿಐ ಬದಲೀ ಆಟಗಾರರನ್ನು ಆಯ್ಕೆ ಮಾಡಿದೆ. ರಿಂಕು ಸಿಂಗ್ ಬದಲಾಗಿ ರಮಣದೀಪ್ ಸಿಂಗ್‌ ತಂಡಕ್ಕೆ ಸೇರ್ಪಡೆಯಾಗಿದ್ದು, ನಿತೀಶ್ ಕುಮಾರ್ ರೆಡ್ಡಿ ಬದಲಾಗಿ ಶಿವಂ ದುಬೆ ತಂಡವನ್ನು ಸೇರಿಕೊಂಡಿದ್ದಾರೆ.

ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ, ಜನವರಿ 22 ರಂದು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ಸಂದರ್ಭದಲ್ಲಿ ರಿಂಕು ಸಿಂಗ್ ಗಾಯಗೊಂಡಿದ್ದರು. ಅವರು ವೇಗವಾಗಿ ಚೇತರಿಸಿಕೊಳ್ಳುತ್ತಿದ್ದು ವೈದ್ಯಕೀಯ ತಂಡ ಅವರ ಆರೈಕೆ ಮಾಡುತ್ತಿದೆ. 5 ಪಂದ್ಯಗಳ ಟಿ20 ಸರಣಿಯ 2 ಮತ್ತು 3ನೇ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ಜನವರಿ 24ರಂದು ಚೆನ್ನೈನಲ್ಲಿ ಅಭ್ಯಾಸ ಮಾಡುವ ಸಂದರ್ಭದಲ್ಲಿ ಆಲ್‌ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಪಕ್ಕದ ಸ್ನಾಯು ಸೆಳೆತಕ್ಕೆ ಒಳಗಾದರು. ಮುಂದಿನ ಎಲ್ಲಾ ಪಂದ್ಯಗಳಿಂದ ಅವರು ಹೊರಗುಳಿಯಲಿದ್ದಾರೆ. ಮುಂದಿನ ನಿರ್ವಹಣೆಗಾಗಿ ಅವರು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಹೋಗಲಿದ್ದಾರೆ.

ಇಂಗ್ಲೆಂಡ್ ವಿರುದ್ಧ ಸರಣಿಗೆ ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿವಂ ದುಬೆ, ರಮಣದೀಪ್ ಸಿಂಗ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+