Ind vs Eng: ಏಕದಿನ ಸರಣಿ ಯಾವಾಗ ಪ್ರಾರಂಭ; ದಿನಾಂಕ, ಸಮಯ, ತಂಡಗಳು
5 ಪಂದ್ಯಗಳ ಟಿ20 ಸರಣಿಯಲ್ಲಿ 4-1 ಅಂತರದಲ್ಲಿ ಗೆಲುವು ಸಾಧಿಸಿರುವ ಭಾರತ ತಂಡ ಇದೀಗ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಫೆಬ್ರವರಿ 6 ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಮುಂಬರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಸಜ್ಜಾಗಲು ಇದು ಉತ್ತಮ ಅವಕಾಶವಾಗಿದ್ದು, ಭಾರತ ಹಿರಿಯ ಆಟಗಾರರು ಫಾರ್ಮ್‌ಗೆ ಮರಳುವ ಉತ್ಸಾಹದಲ್ಲಿದ್ದಾರೆ.
ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಿಗೆ ಈ ಸರಣಿ ಮುಖ್ಯವಾಗಿದೆ. ಕಳೆದ ಕೆಲವು ತಿಂಗಳಿನಿಂದ ಫಾರ್ಮ್‌ಗೆ ಮರಳಲು ಹೆಣಗಾಡುತ್ತಿದ್ದು ತವರಿನಲ್ಲಿ ನಡೆಯುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ರನ್ ಗಳಿಸುವ ವಿಶ್ವಾಸದಲ್ಲಿದ್ದಾರೆ. ಇಬ್ಬರೂ ಇತ್ತೀಚೆಗೆ ರಣಜಿ ಪಂದ್ಯವನ್ನು ಆಡಿದರೂ ರನ್ ಗಳಿಸಲು ವಿಫಲವಾಗಿದ್ದು, ಇದೀಗ ಇಂಗ್ಲೆಂಡ್ ವಿರುದ್ಧ ಫಾರ್ಮ್‌ಗೆ ಮರಳಲೇಬೇಕಾಗಿದೆ.

ಕೆಎಲ್ ರಾಹುಲ್‌ಗೆ ಕೂಡ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಲು ಇದ್ದು ಒಳ್ಳೆ ಅವಕಾಶವಾಗಿದೆ. ರಣಜಿ ಪಂದ್ಯದಲ್ಲಿ ಅವರು ತಕ್ಕ ಮಟ್ಟಿಗೆ ರನ್ ಗಳಿಸಿದರೂ ದೊಡ್ಡ ಮೊತ್ತ ಗಳಿಸಲಿಲ್ಲ, ಆದರೆ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಫಾರ್ಮ್‌ಗೆ ಮರಳುವ ವಿಶ್ವಾಸದಲ್ಲಿದ್ದು ಅಭ್ಯಾಸ ಮಾಡುತ್ತಿದ್ದಾರೆ.
ಟಿ20 ಸರಣಿಯನ್ನು ಸೋತಿರುವ ಇಂಗ್ಲೆಂಡ್ ಇದೀಗ ಏಕದಿನ ಸರಣಿಯನ್ನು ಗೆದ್ದು ಭಾರತಕ್ಕೆ ತಿರುಗೇಟು ಕೊಡುವ ಯೋಜನೆಯಲ್ಲಿದೆ. ಟಿ20 ಸರಣಿಯಲ್ಲಿ ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಇಂಗ್ಲೆಂಡ್ ಏಕದಿನ ಸರಣಿಯಲ್ಲಿ ಮಾಡಿದ ತಪ್ಪು ಸರಿಪಡಿಸಿಕೊಂಡು ಜಯದ ಹಾದಿಗೆ ಮರಳುವ ವಿಶ್ವಾಸದಲ್ಲಿದೆ.
ಪಂದ್ಯಗಳ ಬಗ್ಗೆ ಮಾಹಿತಿ
ಫೆಬ್ರವರಿ 6 ರಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಸರಣಿಯ ಮೊದಲ ಪಂದ್ಯ ನಡೆಯಲಿದೆ.
ಫೆಬ್ರವರಿ 9 ರಂದು ಕಟಕ್‌ನ ಬಾರಬತಿ ಕ್ರೀಡಾಂಗಣದಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದೆ.
ಫೆಬ್ರವರಿ 12ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಮೂರು ಪಂದ್ಯಗಳು ಮಧ್ಯಾಹ್ನ 1.30 ಗಂಟೆಗೆ ಆರಂಭವಾಗಲಿದೆ.
ಏಕದಿನ ಸರಣಿಗೆ ಉಭಯ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.
ಇಂಗ್ಲೆಂಡ್: ಹ್ಯಾರಿ ಬ್ರೂಕ್, ಬೆನ್ ಡಕೆಟ್, ಜೋ ರೂಟ್, ಜೇಕಬ್ ಬೆಥೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಬ್ರೈಡನ್ ಕಾರ್ಸೆ, ಜೇಮೀ ಓವರ್ಟನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಮೀ ಸ್ಮಿತ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಮಾರ್ಕ್ ವುಡ್.












Click it and Unblock the Notifications