IND vs ENG Test: 2 ಸ್ಥಾನದ ಮೇಲೆ 4 ಆಲ್‌ರೌಂಡರ್‌ಗಳ ಕಣ್ಣು
ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಮೊದಲ ಟೆಸ್ಟ್ ಪಂದ್ಯ ಶುಕ್ರವಾರದಿಂದ ಆರಂಭವಾಗಲಿದೆ. ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ಈ ಸರಣಿಗೆ ಅನುಭವಿಗಳ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡುತ್ತಿದೆ. ಇನ್ನು ಈ ಸರಣಿಯಲ್ಲಿ ಹಲವು ಯುವ ಆಟಗಾರರು ಅಬ್ಬರಿಸಲು ಸಿದ್ಧರಾಗಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದರ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸ್ಟಾರ್ ಆಟಗಾರರು ತಂಡದಲ್ಲಿ ಇದ್ದು, ಯಾರಿಗೆ ಸ್ಥಾನ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಇನ್ನು ತಂಡದಲ್ಲಿ ಇರುವ ಆಲ್‌ರೌಂಡರ್‌ಗಳಲ್ಲಿ ಮ್ಯಾನೇಜ್ಮೆಂಟ್ ಯಾರಿಗೆ ಮಣೆ ಹಾಕುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಭಾರತ ತಂಡದಲ್ಲಿ ಯುವ ಹಾಗೂ ಅನುಭವಿ ಆಲ್‌ರೌಂಡರ್‌ಗಳು ತಂಡದಲ್ಲಿ ಇದ್ದಾರೆ. ಇರುವ ನಾಲ್ವರು ಆಲ್‌ರೌಂಡರ್‌ಗಳಿಗೆ ಯಾರಿಗೆ ಮಣೆ ಹಾಕಲಿದೆ ಎಂಬ ಬಗ್ಗೆ ಕುತೂಹಲ ಮೂಡಿಸಿದೆ.

ಮೊದಲ ಟೆಸ್ಟ್ ಪಂದ್ಯ ಹೆಡಿಂಗ್ಲಿಯಲ್ಲಿ ನಡೆಯಲಿದೆ. ಈ ಪಿಚ್ ಸ್ಪಿನ್ ಬೌಲರ್‌ಗಳಿಗೆ ಸಹಾಯ ನೀಡಲಿದೆ. ಹೀಗಾಗಿ ಟೀಮ್ ಇಂಡಿಯಾ ತಮ್ಮ ತಂಡದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರಿಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಇವರು ತಮ್ಮ ಸ್ಪಿನ್ ಬೌಲಿಂಗ್ ಮೂಲಕ ತಂಡಕ್ಕೆ ನೆರವಾಗಬಲ್ಲರು. ಅಲ್ಲದೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ರನ್ ಹೆಚ್ಚಿಸಬಲ್ಲರು.
ಸುಂದರ್‌ಗೆ ಸಿಗುತ್ತಾ ಅವಕಾಶ?
ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಸ್ಪಿನ್ ಬೌಲರ್ ಹಾಗೂ ಬ್ಯಾಟರ್ ವಾಷಿಂಗ್ಟನ್ ಸುಂದರ್ ತಂಡಕ್ಕೆ ನೆರವಾಗಬಲ್ಲ ಪ್ಲೇಯರ್. ಇವರು ಈಗಾಗಲೇ ಭಾರತದಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಇವರಿಗೆ ಆಡುವ ತಂಡದಲ್ಲಿ ಸ್ಥಾನ ಲಭಿಸುತ್ತದಾ ಎಂಬ ಪ್ರಶ್ನೆಗಳು ಎದ್ದಿವೆ. ಇವರಿಗೆ ತಂಡ ಮಣೆ ಹಾಕಿದಲ್ಲಿ ರವೀಂದ್ರ ಜಡೇಜಾ ಅವರಿಗೆ ಸ್ಥಾನ ಸಿಗುವುದು ಡೌಟ್ ಎಂಬ ಲೆಕ್ಕಾಚಾರ ಆರಂಭವಾಗಿದೆ.
ವೇಗದ ಬೌಲರ್ + ಬ್ಯಾಟರ್
ಟೀಮ್ ಇಂಡಿಯಾದಲ್ಲಿ ಈಗಾಗಲೇ ಇನ್ನು ಇಬ್ಬರೂ ಆಟಗಾರರು ಸ್ಥಾನ ಪಡೆದಿದ್ದಾರೆ. ಇದರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ನಿತೀಶ್ ಕುಮಾರ್ ರೆಡ್ಡಿ ಹಾಗೂ ಇಂಟ್ರಾ ಸ್ಕ್ವಾಡ್ ಪಂದ್ಯಗಳಲ್ಲಿ ಅಮೋಘ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿರುವ ಶಾರ್ದೂಲ್ ಠಾಕೂರ್ ಇಬ್ಬರೂ ಒಂದೇ ಸ್ಥಾನಕ್ಕಾಗಿ ಇಬ್ಬರೂ ಕಾದಾಟ ನಡೆಸಲಿದ್ದಾರೆ. ಇಬ್ಬರೂ ಅವಕಾಶಕ್ಕಾಗಿ ಫೈಟ್ ನಡೆಸಲಿದ್ದಾರೆ. ಅನುಭವದ ಆಧಾರದ ಮೇಲೆ ಮಣೆ ಹಾಕುವುದಾದರೆ ಶಾರ್ದೂಲ್ ಠಾಕೂರ್‌ಗೆ ಅವಕಾಶ ಸಿಗಬಹುದು. ಆದರೆ ಮ್ಯಾನೇಜ್ಮೆಂಟ್ ಯುವ ಆಟಗಾರರಿಗೆ ಮಣೆ ಹಾಕಿದಲ್ಲಿ ನಿತೀಶ್ ಕುಮಾರ್ ರೆಡ್ಡಿಗೆ ಸ್ಥನ ಸಿಗುವ ಸಾಧ್ಯತೆ ಇದೆ. ಟೀಮ್ ಇಂಡಿಯಾದಲ್ಲಿ ಇರುವ 2 ಆಲ್‌ರೌಂಡರ್ ಸ್ಥಾನದ ಮೇಲೆ 4 ಆಟಗಾರರು ಫೈಟ್ ನಡೆಸಲಿದ್ದಾರೆ.












Click it and Unblock the Notifications