IND vs ENG Test: ಕನ್ನಡಿಗ ರಾಹುಲ್, ಯಶಸ್ವಿ ಓಪನರ್ಸ್: ಯಾರಿಗೆ 3, 4ನೇ ಕ್ರಮಾಕಂದಲ್ಲಿ ಅವಕಾಶ?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ವೇಳೆ ಟೀಮ್ ಇಂಡಿಯಾ ಯುವ ಪಡೆಯೊಂದಿಗೆ ಕಣಕ್ಕೆ ಇಳಿಯಲಿದೆ. ಈ ವೇಳೆ ಟೀಮ್ ಇಂಡಿಯಾದ ಬ್ಯಾಟಿಂಗ್ ಸಂಯೋಜನೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಯಾವೆಲ್ಲಾ ಆಟಗಾರರಿಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸುತ್ತದೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಜೂನ್ 20 ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯಕ್ಕೆ ಬ್ಯಾಟಿಂಂಗ್ ಕ್ರಮಾಂಕದ ಬಗ್ಗೆ ಮಾಹಿತಿ ಇಲ್ಲಿದೆ.
ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗವನ್ನು ಹಲವು ವರ್ಷಗಳ ಕಾಲ ತನ್ನ ಹೆಗಲ ಮೇಲೆ ಹೊತ್ತುಕೊಂಡು ನಡೆಸಿದ್ದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಿಂದ ತೆರವಾದ ಸ್ಥಾನವನ್ನು ಯಾರು ತುಂಬುತ್ತಾರೆ ಎಂಬ ಪ್ರಶ್ನೆಗಳು ಎದ್ದಿವೆ. ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಟೆಸ್ಟ್‌ನಲ್ಲಿ ಇನಿಂಗ್ಸ್ ಆರಂಭಿಸಿದರೆ, ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದರು. ಇವರ ಸ್ಥಾನವನ್ನು ತುಂಬುವುದು ಯಾರು ಎಂಬ ಪ್ರಶ್ನೆಗಳು ಎದ್ದಿವೆ.

ರೋಹಿತ್ ಶರ್ಮಾ ಅವರಿಂದ ತೆರವಾದ ನಾಯಕತ್ವದ ಸ್ಥಾನವನ್ನು, ಯುವ ಆಟಗಾರ ಶುಭಮನ್ ಗಿಲ್ ತುಂಬಿದ್ದಾರೆ. ಇವರಿಂದ ತೆರವಾದ ಆರಂಭಿಕರ ಸ್ಥಾನವನ್ನು ಕರ್ನಾಟಕದ ಭರವಸೆಯ ಆಟಗಾರ ಕೆಎಲ್ ರಾಹುಲ್ ತುಂಬ ಬಹುದು ಎಂಬುದು ಫಿಕ್ಸ್ ಆದಂತೆ ಕಾಣುತ್ತಿದೆ. ಇನ್ನು ಇವರು ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಕಣಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ. ಇವರಿಗೆ ಬೌನ್ಸಿ ಪಿಚ್‌ಗಳಲ್ಲಿ ಆಡಿದ ಅನುಭ ಹೆಚ್ಚಾಗಿದ್ದು, ಬಾರ್ಡರ್ ಗವಾಸ್ಕರ್ ಸರಣಿಯಲ್ಲೂ ಇವರು ಆರಂಭಿಕರಾಗಿ ಯಶಸ್ಸು ಕಂಡಿದ್ದಾರೆ.
3ನೇ ಸ್ಥಾನದ ಮೇಲೆ ಮೂವರ ಕಣ್ಣು
ಟೀಮ್ ಇಂಡಿಯಾದಲ್ಲಿ ಸದ್ಯ ಮೂರನೇ ಸ್ಥಾನದ ಮೇಲೆ ಮೂವರು ಆಟಗಾರರು ಕಣ್ಣು ನೆಟ್ಟಿದ್ದಾರೆ. ದೇಶೀಯ ಟೂರ್ನಿ ಹಾಗೂ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಆಟಗಾರರು ಮೂರನೇ ಸ್ಥಾನವನ್ನು ತಮ್ಮದಾಗಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ನಡೆಸಲಿದ್ದಾರೆ. ಈ ಪಟ್ಟಿಯಲ್ಲಿ ಮೊದಲು ಕಾಣಿಸಿಕೊಳ್ಳುವ ಹೆಸರು ಭಾರತ "ಎ" ತಂಡದ ನಾಯಕ ಅಭಿಮನ್ಯು ಈಶ್ವರನ್, ಸಾಯಿ ಸುದರ್ಶನ್, ಕರುಣ್ ನಾಯರ್ ಒಂದೇ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ಈ ಮೂವರಲ್ಲಿ ಯಾರಿಗೆ ಅವಕಾಶ ಸಿಗಬಹುದು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ವರದಿಗಳ ಪ್ರಕಾರ ಈ ಸ್ಥಾನದಲ್ಲಿ ಸಾಯಿ ಸುದರ್ಶನ್ ಬ್ಯಾಟಿಂಗ್ ಮಾಡಬಹುದು ಎಂದು ಹೇಳಲಾಗುತ್ತಿದೆ. ಇನ್ನು ಕರುಣ್ ನಾಯರ್‌ಗೆ 8 ವರ್ಷಗಳ ಬಳಿಕ ತಂಡದಲ್ಲಿ ಸಿಗಲಿದ್ದು, ಅವರು ಯಾವುದೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಲ್ಲ ಕ್ಷಮತೆ ಹೊಂದಿದ್ದಾರೆ.
ನಾಲ್ಕನೇ ಕ್ರಮಾಂಕದಲ್ಲಿ ಗಿಲ್
ವಿರಾಟ್ ಕೊಹ್ಲಿ ಅವರಿಂದ ತೆರವಾದ ನಾಲ್ಕನೇ ಕ್ರಮಾಂಕದಲ್ಲಿ ಶುಭಮನ್ ಗಿಲ್ ಬ್ಯಾಟ್ ಮಾಡಬಹುದಾಗಿದೆ. ಈ ಕ್ರಮಾಂಕದಲ್ಲಿ ತಂಡದ ನುರಿತ ಬ್ಯಾಟರ್ ಒಬ್ಬರು ಬ್ಯಾಟ್ ಮಾಡಿ ಟೆಸ್ಟ್ ಪಂದ್ಯದಲ್ಲಿ ಆಂಕರ್ ರೋಲ್ ಪ್ಲೇ ಮಾಡುತ್ತಾರೆ. ಈ ಜವಾಬ್ದಾರಿಯನ್ನು ಹೊರಲು ಗಿಲ್ ರೆಡಿಯಾಗಿದ್ದಾರೆ.
ರಿಷಭ್ ಫಸ್ಟ್ ಚಾಯ್ಸ್
ರಿಷಭ್ ಪಂತ್ ಇಂಗ್ಲೆಂಡ್ ವಿರುದ್ದದ ಸರಣಿಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಇನ್ನೊಬ್ಬ ವಿಕೆಟ್ ಕೀಪರ್ ಧ್ರುವ್ ಜುರೇಲ್ ಅಭ್ಯಾಸ ಪಂದ್ಯಗಳಲ್ಲಿ ಅಬ್ಬರದ ಪ್ರದರ್ಶನ ನೀಡಿದರೂ ಸಹ, ಮ್ಯಾನೇಜ್ಮೆಂಟ್ ರಿಷಭ್ ಪಂತ್ ಅವರ ಅನುಭವಕ್ಕೆ ಮಣೆ ಹಾಕಿ ಅವರನ್ನು ಕಣಕ್ಕೆ ಇಳಿಸಬಹುದು. ಇವರು ಇಂಗ್ಲೆಂಡ್‌ನಲ್ಲಿ ಈಗಾಗಲೇ 2 ಶತಕ ಬಾರಿಸಿದ್ದರಿಂದ ವಿಶ್ವಾಸ ಇಮ್ಮಡಿಯಾಗಿದ್ದು, ಈ ಬಾರಿಯೂ ಇದೇ ಪ್ರದರ್ಶನ ನೀಡುವ ಕನಸಿನಲ್ಲಿದ್ದಾರೆ.












Click it and Unblock the Notifications