ODI World Cup: ರೋಚಕ ಸೆಮಿಫೈನಲ್ ಹಂತಕ್ಕೆ ವಿಶ್ವಕಪ್: ತಂಡಗಳು, ಪಂದ್ಯಗಳು, ದಿನಾಂಕ ವಿವರ
ಏಕದಿನ ವಿಶ್ವಕಪ್ 2023ರ ಪಂದ್ಯವಾಳಿಯ ಲೀಗ್ ಹಂತದ ಕೊನೆಯ ಪಂದ್ಯ ಇಂದು (ಭಾನುವಾರ) ನಡೆಯಲಿದೆ. ಭಾರತ ನೆದರ್ಲ್ಯಾಂಡ್ಸ್ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿವೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಲೀಗ್ ಹಂತದಲ್ಲೇ ಹೊರಬಿದ್ದು ಆಘಾತ ಅನುಭವಿಸಿದೆ.

ಭಾರತ ತಂಡ ಈ ಬಾರಿ ವಿಶ್ವಕಪ್‌ನಲ್ಲಿ ಅಜೇಯವಾಗಿ ಉಳಿದರೆ, ಆಸ್ಟ್ರೇಲಿಯಾ ಮೊದಲ ಎರಡು ಪಂದ್ಯಗಳನ್ನು ಸೋತ ಬಳಿಕ ಅದ್ಭುತವಾಗಿ ವಾಪಸಾತಿ ಮಾಡುವ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.
ಇನ್ನು ದಕ್ಷಿಣ ಆಫ್ರಿಕಾ ಆರಂಭದಿಂದಲೂ ಅಮೋಘ ಪ್ರದರ್ಶನ ನೀಡುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ನ್ಯೂಜಿಲೆಂಡ್ ಆರಂಭದಲ್ಲಿ ಉತ್ತಮವಾಗಿ ಆಡಿದರೂ, ಭಾರತದ ವಿರುದ್ಧದ ಸೋಲಿನ ನಂತರ ಗೆಲುವಿನ ಲಯವನ್ನು ಕಳೆದುಕೊಂಡಿತು, ಆದರೂ ಕೊನೆ ಹಂತದಲ್ಲಿ ನಾಲ್ಕನೇ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿದೆ.
ಭಾರತಕ್ಕೆ ನ್ಯೂಜಿಲೆಂಡ್ ಎದುರಾಳಿ
ಐಸಿಸಿ ಪಂದ್ಯಾವಳಿಯಲ್ಲಿ ಭಾರತಕ್ಕೆ ನ್ಯೂಜಿಲೆಂಡ್ ಎಂದಿಗೂ ತಲೆನೋವಾಗಿದೆ. 2019ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ಸೋಲು ಇನ್ನೂ ಮರೆಲಾಗಿಲ್ಲ, ನಾಯಕ ಧೋನಿ ಅವರ ರನೌಟ್ ಇನ್ನೂ ಭಾರತ ತಂಡದ ಅಭಿಮಾನಿಗಳನ್ನು ಕಾಡುತ್ತಿದೆ.
ಈ ಬಾರಿ ವಿಶ್ವಕಪ್‌ನಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಲೀಗ್ ಹಂತದಲ್ಲಿ ಸೋಲಿಸಿದೆ. ಈಗ ಕಳೆದ ವಿಶ್ವಕಪ್‌ನ ಸೋಲಿಗೆ ಸೇಡು ತೀರಿಸಿಕೊಂಡು ಫೈನಲ್ ಪ್ರವೇಶಿಸುವ ವಿಶ್ವಾಸದಲ್ಲಿದೆ. ನವೆಂಬರ್ 15ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯ ನಡೆಯಲಿದೆ.
ದಕ್ಷಿಣ ಆಫ್ರಿಕಾ- ಆಸ್ಟ್ರೇಲಿಯಾ
ಎರಡನೇ ಸೆಮಿಫೈನಲ್ ಪಂದ್ಯ ನವೆಂಬರ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಅಂಗಳದಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಈ ಪಂದ್ಯದಲ್ಲಿ ಸೆಣೆಸಲಿವೆ.
ದಕ್ಷಿಣ ಆಫ್ರಿಕಾ ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದೆ. ಬ್ಯಾಟಿಂಗ್ ಪಡೆಯಂತೂ ಬಲಿಷ್ಠವಾಗಿದೆ. ಆಸ್ಟ್ರೇಲಿಯಾ ಕೂಡ ಆರಂಭದಲ್ಲಿ ಸೋಲು ಕಂಡರೂ ನಂತರ ಬ್ಯಾಟಿಂಗ್ ಬೌಲಿಂಗ್‌ನಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ. ಎಲ್ಲಾ ಆಟಗಾರರು ಫಾರ್ಮ್‌ಗೆ ಮರಳಿರುವುದು ತಂಡದ ವಿಶ್ವಾಸ ಹೆಚ್ಚಿಸಿದೆ.
ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಕನಸು ಹೊತ್ತಿದ್ದರೆ, 5 ಬಾರಿ ಚಾಂಪಿಯನ್‌ಗಳಾಗಿರುವ ಆಸ್ಟ್ರೇಲಿಯಾ 6 ಪ್ರಶಸ್ತಿ ಗೆಲ್ಲುವ ಕನಸು ಕಾಣುತ್ತಿದೆ.
ಸೆಮಿಫೈನಲ್ ತಂಡಗಳ ವಿವರ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕೆಎಲ್ ರಾಹುಲ್, ಇಶಾನ್ ಕಿಶನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಪ್ರಸಿದ್ಧ ಕೃಷ್ಣ,
ನ್ಯೂಜಿಲೆಂಡ್ : ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕ್ ಫರ್ಗುಸನ್, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.
ದಕ್ಷಿಣ ಆಫ್ರಿಕಾ : ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ, ಗೆರಾಲ್ಡ್ ಕೊಯೆಟ್ಜೆ, ಲಿಜಾದ್ ವಿಲಿಯಮ್ಸ್.
ಆಸ್ಟ್ರೇಲಿಯಾ : ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.












Click it and Unblock the Notifications