IND VS NZ: ಚಾಂಪಿಯನ್ಸ್ ಟ್ರೋಫಿ 2025 ಫೈನಲ್; ಗೋಲ್ಡನ್ ಬ್ಯಾಟ್, ಬಾಲ್ ಗೆಲ್ಲುವ ರೇಸ್‌ನಲ್ಲಿರುವವರ ವಿವರ
Champions Trophy 2025 Final: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಫೈನಲ್ ಪಂದ್ಯದಲ್ಲಿ ನಾಳೆ (ಮಾರ್ಚ್ 09) ಭಾರತ ಮತ್ತು ನ್ಯೂಜಿಲೆಂಡ್ ಸೆಣಸಲು ಸಜ್ಜಾಗಿವೆ. ಈ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನೂ ಇದುವರೆಗೂ ನಡೆದ ಮ್ಯಾಚ್‌ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದವರಿಗೆ ಚಿನ್ನದ ಬ್ಯಾಟ್, ಹೆಚ್ಚು ವಿಕೆಟ್ ಪಡೆದ ಆಟಗಾರರಿಗೆ ಚಿನ್ನದ ಬಾಲ್ ಅನ್ನು ನೀಡಲಾಗುತ್ತದೆ. ಹಾಗಾದ್ರೆ ಇವುಗಳು ಯಾರ ಪಾಲಾಗಲಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಟೀಂ ಇಂಡಿಯಾ ಭರ್ಜರಿಯಾಗಿ ಫೈನಲ್ ಪ್ರವೇಶಿಸಿದೆ. ಜೊತೆಗೆ ಭಾರತಕ್ಕೆ ಮತ್ತೊಂದು ಸಹಿಸುದ್ದಿ ಇದೆ. ನಾಳೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದ್ದು, ಈ ವೇಳೆ ಗೋಲ್ಡನ್ ಬ್ಯಾಟ್ ಮತ್ತು ಬಾಲ್ ಗೆಲ್ಲುವ ರೇಸ್‌ನಲ್ಲಿ ಟೀಂ ಇಂಡಿಯಾದ ಮೂವರು ಇದ್ದಾರೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಯಾರು ಅತೀ ಹೆಚ್ಚು ರನ್‌ಗಳನ್ನು ಸಿಡಿಸುತ್ತಾರೆಯೋ ಅವರಿಗೆ ಚಿನ್ನದ ಬ್ಯಾಟ್, ಹೆಚ್ಚು ವಿಕೆಟ್ ಗಳಿಸಿದವರಿಗೆ ಗೋಲ್ಡನ್ ಬಾಲ್ ನೀಡಲಾಗುತ್ತದೆ. ಇದೀಗ ಇಂಗ್ಲೆಂಡ್‌ನ ಬೆನ್ ಡಕೆಟ್ ಗೋಲ್ಡನ್ ಬ್ಯಾಟ್ ಗೆಲ್ಲುವ ಓಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ ಇದೀಗ ಇಂಗ್ಲೆಂಟ್ ಟೂರ್ನಿಯಿಂದ ಹೊರಬಿದ್ದಿರುವ ಹಿನ್ನೆಲೆ, ಈ ರನ್‌ಗಳ ಗುರಿಯನ್ನು ಟೀಂ ಇಂಡಿಯಾ ತಂಡದ ಶ್ರೇಷ್ಠ ಆಟಗಾರನೊಬ್ಬ ತಲುಪುವ ಸನಿಹದಲ್ಲಿದ್ದಾರೆ.
ಬೆನ್ ಡಕೆಟ್ ಅವರು ಚಾಂಪಿಯನ್ಸ್ ಟ್ರೋಫಿಯ 3 ಪಂದ್ಯಗಳಲ್ಲಿ 227 ರನ್‌ಗಳನ್ನು ಬಾರಿಸಿದ್ದಾರೆ. ಆದರೆ, ಈಗಾಗಲೇ ಇಂಗ್ಲೆಂಡ್ ಟೂರ್ನಿಯಿಂದ ಹೊರಬಿದ್ದಿದೆ. ಆದ್ದರಿಂದ, ಇದೀಗ ಭಾರತ ಮತ್ತು ನ್ಯೂಜಿಲೆಂಡ್ ಆಟಗಾರರಿಗೆ ಗೋಲ್ಡನ್ ಬ್ಯಾಟ್ ಪಡೆಯುವ ಅವಕಾಶ ಸಿಗುವ ಸಾಧ್ಯತೆಯಿದೆ. ಅದರಲ್ಲೂ ನ್ಯೂಜಿಲೆಂಡ್‌ನ ರಚಿನ್ ರವೀಂದ್ರ ಅವರು ಪಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಯಾಕಂದ್ರೆ ಬೆನ್ ಡಕೆಟ್ ಚಚ್ಚಿದ ರನ್‌ಗಳ ಗುರಿ ಮುಟ್ಟಲು ತುಂಬಾ ಸನಿದಲ್ಲಿರುವವರು ಇವರು ಬಿಟ್ಟರೆ ನಂತರ ದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ.
ನ್ಯೂಜಿಲೆಂಡ್ ತಂಡದ ರಚಿನ್ ರವೀಂದ್ರ ಅವರು ಡಕೆಟ್‌ಗಿಂತ ಕೇವಲ ಒಂದು ರನ್ ಹಿಂದಿದ್ದಾರೆ. ಅವರು ಮೂರು ಪಂದ್ಯಗಳಲ್ಲಿ 226 ರನ್ ಗಳಿಸಿದ್ದಾರೆ. ಮತ್ತೊಂದೆಡೆ ಟೀಂ ಇಂಡಿಯಾದ ವಿರಾಟ್ ಕೊಹ್ಲಿ 4 ಪಂದ್ಯಗಳಲ್ಲಿ 217 ರಸ್ ಗಳಿಸಿ ಈ ರೇಸ್‌ನಲ್ಲಿದ್ದಾರೆ. ಅಲ್ಲದೆ, ಅಯ್ಯರ್ ಕೂಡ ಈ ರನ್‌ಗಳ ಗಳಿಕೆಯಲ್ಲಿ ಮೊದಲ ಸ್ಥಾನ ಪಡೆಯುವ ಅವಕಾಶ ಇದ್ದು, ಅವರು 4 ಪಂದ್ಯಗಳಲ್ಲಿ 195 ರನ್ ಚಚ್ಚಿದ್ದಾರೆ. ಬಳಿಕ ಕೇನ್ ವಿಲಿಯಮ್ಸನ್ ಮತ್ತು ಟಾಮ್ ಲ್ಯಾಥಮ್ ಅವಕಾಶವಿದೆ. ಇವರಿಬ್ಬರು ಕ್ರಮವಾಗಿ 191 ಮತ್ತು 189 ರನ್ ಕಲೆಹಾಕಿದ್ದಾರೆ.
ನ್ಯೂಜಿಲೆಂಡ್ ತಂಡ ವೇಗಿ ಮ್ಯಾಟ್ ಹೆನ್ರಿ ರೇಸ್‌ನಲ್ಲಿ ಗೋಲ್ಡನ್ ಬಾಲ್ ಪಡೆಯುವ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ. ಹೆನ್ರಿ 4 ಪಂದ್ಯಗಳಲ್ಲಿ 10 ವಿಕೆಟ್ ಪಡೆದಿದರೆ, ಮೊಹಮ್ಮದ್ ಶಮಿ 4 ಪಂದ್ಯಗಳಲ್ಲಿ 8 ವಿಕೆಟ್ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೇವಲ 2 ಪಂದ್ಯಗಳಲ್ಲಿ 7 ವಿಕೆಟ್ ಕಬಳಿಸಿ ಮೂರನೇ ಸ್ಥಾನ, ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ 4 ಪದ್ಯದಲ್ಲಿ 7 ವಿಕೆಟ್ ಪಡೆದು ಗೋಲ್ಡನ್ ಬಾಸ್ ಪಡೆಯುವ ಸಾಲಿನಲ್ಲಿ 4ನೇ ಸ್ಥಾನದಲ್ಲಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications