Get Updates
Get notified of breaking news, exclusive insights, and must-see stories!

Ind Vs NZ: 2019ರ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಭಾರತ? ಆಡುವ ಬಳಗ, ಪಿಚ್ ವರದಿ, ಹೆಡ್‌ ಟು ಹೆಡ್‌ ವಿವರ

ಏಕದಿನ ವಿಶ್ವಕಪ್‌ನ ಲೀಗ್ ಹಂತದಲ್ಲಿ ಆಡಿದ 9 ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ತಲುಪಿರುವ ಭಾರತ ತಂಡಕ್ಕೆ ನಿಜವಾಗ ಅಗ್ನಿ ಪರೀಕ್ಷೆ ನಾಳೆ (ಬುಧವಾರ) ಎದುರಾಗಲಿದೆ. ಸೆಮಿಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್ ಮುಖಾಮುಖಿಯಾಗಲಿದ್ದು, ರೋಚಕ ಪಂದ್ಯ ನಡೆಯುವ ಸಾಧ್ಯತೆ ಇದೆ.

2019ರ ಸೋಲು ಭಾರತ ತಂಡವನ್ನು, ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಇನ್ನೂ ಕಾಡುತ್ತಲೇ ಇದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್ ಗಳಲ್ಲಿ 239 ರನ್ ಗಳಿಸಿತ್ತು, ಈ ಸುಲಭ ಸವಾಲನ್ನು ಬೆನ್ನತ್ತಿದ ಭಾರತ 5 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

india-and-new-zealand-playing-xi

ನಾಯಕ ಎಂಎಸ್ ಧೋನಿ 50 ರನ್ ಗಳಿಸಿದ್ದಾಗ ರನೌಟ್ ಆಗಿದ್ದು ಭಾರತಕ್ಕೆ ಆಘಾತ ತಂದಿತು, ರವೀಂದ್ರ ಜಡೇಜಾ 77 ರನ್ ಮತ್ತು ಹಾರ್ದಿಕ್ ಪಾಂಡ್ಯ 32 ರನ್ ಗಳಿಸಿದರೂ ಭಾರತದ ಸೋಲು ತಪ್ಪಿಸಲು ಆಗಲಿಲ್ಲ, 221 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಟೂರ್ನಿಯಿಂದ ಹೊರಬಿದ್ದಿತ್ತು, ನೋವಿನ ನಡುವೆ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.

ಭಾರತ - ನ್ಯೂಜಿಲೆಂಡ್ ಹೆಡ್‌ ಟು ಹೆಡ್

ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ನ್ಯೂಜಿಲೆಂಡ್ 14 ಬಾರಿ ಮುಖಾಮುಖಿಯಾಗಿದ್ದು, 4 ಪಂದ್ಯಗಳಲ್ಲಿ ಮಾತ್ರ ಭಾರತ ಗೆಲುವು ಸಾಧಿಸಿದ್ದರೆ ನ್ಯೂಜಿಲೆಂಡ್ 9 ಬಾರಿ ಗೆಲುವು ಸಾಧಿಸಿದ್ದು, 1 ಪಂದ್ಯ ಫಲಿತಾಂಶ ಇಲ್ಲದೆ ಕೊನೆಯಾಗಿದೆ.

2003ರ ಬಳಿಕ ಭಾರತ ಐಸಿಸಿ ಪಂದ್ಯಾವಳಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ದಿರಲೇ ಇಲ್ಲ, ಅದಾದ ಬಳಿಕ ಈ ಬಾರಿ ವಿಶ್ವಕಪ್‌ನಲ್ಲಿ ಧರ್ಮಶಾಲಾದಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ, ತವರಿನ ಪರಿಸ್ಥಿಯ ಲಾಭ ಪಡೆದು ಮುಂಬೈನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸುತ್ತಾ ಎನ್ನುವ ಆತಂಕ ಅಭಿಮಾನಿಗಳನ್ನು ಕಾಡುತ್ತಿದೆ.

ಹೇಗಿರಲಿದೆ ವಾಂಖೆಡೆ ಪಿಚ್?

ಮುಂಬೈನ ವಾಂಖೆಡೆ ಪಿಚ್ ಬ್ಯಾಟಿಂಗ್ ಸ್ನೇಹಿ ಆಗಿರಲಿದೆ. ಲೀಗ್ ಹಂತದಲ್ಲಿ ಇಲ್ಲಿ 5 ಪಂದ್ಯಗಳು ನಡೆದಿದ್ದು ಬೃಹತ್ ರನ್‌ ಹೊಳೆ ಹರಿದಿದೆ. ದಕ್ಷಿಣ ಆಫ್ರಿಕಾ ಬಾರಿ 399 ಮತ್ತು 382 ರನ್‌ಗಳನ್ನು ಗಳಿಸಿತ್ತು, ಭಾರತ ಶ್ರೀಲಂಕಾ ವಿರುದ್ಧ 357 ರನ್ ಕಲೆಹಾಕಿದ್ದಲ್ಲದೆ ಶ್ರೀಲಂಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿತ್ತು. ಆಸ್ಟ್ರೇಲಿಯಾ ಅಫ್ಘಾನಿಸ್ತಾನವನ್ನು ಸೋಲಿಸಿದಾಗ ಮ್ಯಾಕ್ಸ್‌ವೆಲ್ ದ್ವಿಶತಕ ಗಳಿಸಿದ್ದರು. 4 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿದ್ದರೆ ಒಂದು ಪಂದ್ಯದಲ್ಲಿ ಮಾತ್ರ ಚೇಸಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ.

ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳು ಮುಖಾಮುಖಿಯಾಗುತ್ತಿದ್ದು ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (WK), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+