Rohit Sharma: ವಿಶ್ವಕಪ್‌ ಇತಿಹಾಸದಲ್ಲಿ ಎರಡು ಹೊಸ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್

ಏಕದಿನ ವಿಶ್ವಕಪ್‌ನ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ಬೃಹತ್ ಮೊತ್ತ ಕಲೆಹಾಕುವ ಮುನ್ಸೂಚನೆ ನೀಡಿದೆ.

ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅದ್ಭುತ ಆರಂಭ ನೀಡಿದರು. ರೋಹಿತ್ ಶರ್ಮಾ ಮೊದಲ ಓವರ್ ನಿಂದಲೇ ಅಬ್ಬರಿಸಿದ ರೋಹಿತ್ ಶರ್ಮಾ, ಬೌಂಡರಿ, ಸಿಕ್ಸರ್ ಸಿಡಿಸುವ ಮೂಲಕ ಕಿವೀಸ್ ಬೌಲಿಂಗ್ ಪಡೆಯ ದಿಕ್ಕೆಡಿಸಿದರು.

 Ind vs NZ: Rohit Sharma Sets New Sixes Record in World Cup Semifinal

29 ಎಸೆತಗಳಲ್ಲಿ 4 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಸಹಿತ 49 ರನ್ ಗಳಿಸಿದರು. ಈ ಬಾರಿ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಪರಿಸ್ಥಿತಿ ಏನೇ ಇದ್ದರು ನಾನು ಆಡೋದೆ ಹಿಂಗೆ ಎನ್ನುವಂತೆ ಬ್ಯಾಟ್ ಬೀಸುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ಕ್ರಿಸ್ ಗೇಲ್ ಅವರ ದಾಖಲೆ ಮುರಿದು ಹೊಸ ದಾಖಲೆ ಬರೆದರು.

ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್

ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆಯನ್ನು ರೋಹಿತ್ ಶರ್ಮಾ ಮಾಡಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ ದಾಖಲೆಯನ್ನು ಮುರಿದಿದ್ದಾರೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ರೋಹಿತ್ ಶರ್ಮಾ ಈಗ 50 ಸಿಕ್ಸರ್ ಸಿಡಿಸಿದ್ದಾರೆ.

ಕ್ರಿಸ್ ಗೇಲ್ 49 ಸಿಕ್ಸರ್ ಸಿಡಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದರು, ಈಗ ರೋಹಿತ್ 50 ಸಿಕ್ಸರ್ ಸಿಡಿಸುವ ಮೂಲಕ ಮೊದಲ ಸ್ಥಾನಕ್ಕೆ ಬಂದಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ 43 ಸಿಕ್ಸ್ ಸಿಡಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ. 37 ಸಿಕ್ಸರ್ ಸಿಡಿಸಿರುವ ಎಬಿ ಡಿವಿಲಿಯರ್ಸ್ ಮತ್ತು ಡೇವಿಡ್ ವಾರ್ನರ್ ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿದ್ದಾರೆ.

ಒಂದೇ ಆವೃತ್ತಿಯಲ್ಲಿ ಹೆಚ್ಚು ಸಿಕ್ಸರ್

ರೋಹಿತ್ ಶರ್ಮಾ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದರು. 2015ರ ಆವೃತ್ತಿಯಲ್ಲಿ ಕ್ರಿಸ್ ಗೇಲ್ 26 ಸಿಕ್ಸ್ ಸಿಡಿಸಿದ್ದು ಈವರೆಗಿನ ದಾಖಲೆಯಾಗಿತ್ತು, ರೋಹಿತ್ ಶರ್ಮಾ 27 ಸಿಕ್ಸರ್ ಸಿಡಿಸುವ ಮೂಲಕ ಆ ದಾಖಲೆಯನ್ನು ಮುರಿದರು.

ರೋಹಿತ್ ಶರ್ಮಾ ಕೇವಲ 27 ವಿಶ್ವಕಪ್ ಪಂದ್ಯಗಳಲ್ಲಿ 1,500 ರನ್ ಗಡಿಯನ್ನು ಮುಟ್ಟಿದರು. ಸಚಿನ್ ತೆಂಡೂಲ್ಕರ್ (2,278), ರಿಕಿ ಪಾಂಟಿಂಗ್ (1,743), ಕುಮಾರ ಸಂಗಕ್ಕಾರ (1,532), ಮತ್ತು ವಿರಾಟ್ ಕೊಹ್ಲಿ (1,610*) ಈ ದಾಖಲೆಯನ್ನು ಸಾಧಿಸಿದ ಇತರ ಆಟಗಾರರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+