Ind vs NZ: ಭಾರತದ ಪರ ಯಾರೂ ಮಾಡದ ಸಾಧನೆ ಮಾಡಿದ ರೋಹಿತ್ ಶರ್ಮಾ!
20 ವರ್ಷಗಳ ಭಾರತೀಯ ಅಭಿಮಾನಿಗಳ ಕಾಯುವಿಕೆ ಕೊನೆಗೂ ಕೊನೆಗೊಂಡಿದೆ, ಐಸಿಸಿ ಪಂದ್ಯಾವಳಿಯಲ್ಲಿ ಭಾರತ ತಂಡ 20 ವರ್ಷಗಳ ಬಳಿಕ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ. ಧರ್ಮಶಾಲಾದ ಹೆಚ್‌ಪಿಸಿಯ ಅಂಗಳದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿತು, ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಅನೇಕ ದಾಖಲೆಗಳು ಬಂದವು, ರೋಹಿತ್ ಶರ್ಮಾ ಎರಡು ದಾಖಲೆಗಳನ್ನು ಬರೆದರು. 20 ವರ್ಷಗಳ ಬಳಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಐಸಿಸಿ ಪಂದ್ಯಾವಳಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ್ದು ಮತ್ತು ಸಿಕ್ಸರ್ ಬಾರಿಸುವ ವಿಚಾರದಲ್ಲಿ ದಾಖಲೆ ಬರೆದಿದ್ದು.

ಹೌದು, ಭಾರತದ ಪರ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಸದ್ಯ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 2013ರಲ್ಲಿ 50 ಸಿಕ್ಸರ್ ಸಿಡಿಸುವ ಮೂಲಕ ಒಂದು ವರ್ಷದಲ್ಲಿ 50 ಸಿಕ್ಸರ್ ಬಾರಿಸಿದ ವಿಶ್ವದ ಮೂರನೇ ಆಟಗಾರ ಮತ್ತು ಭಾರತದ ಮೊದಲ ಆಟಗಾರ ಎನ್ನುವ ಸಾಧನೆ ಮಾಡಿದ್ದಾರೆ.
ಎಬಿಡಿ ದಾಖಲೆ ಮುರಿಯುವ ಅವಕಾಶ!
ದಕ್ಷಿಣ ಆಫ್ರಿಕಾದ ಬ್ಯಾಟರ್ ಮಿಸ್ಟರ್ 360 ಡಿಗ್ರಿ ಎಂದೇ ಜನಪ್ರಿಯರಾದ ಎಬಿ ಡಿ ವಿಲಿಯರ್ಸ್ 2015ರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 58 ಸಿಕ್ಸರ್ ಸಿಡಿಸಿದ್ದು ಈವರೆಗಿನ ದಾಖಲೆಯಾಗಿದೆ. ನಂತರ ದಿಗ್ಗಜ ಕ್ರಿಸ್ ಗೇಲ್ 2019ರಲ್ಲಿ ಏಕದಿನ ಮಾದರಿಯಲ್ಲಿ 56 ಸಿಕ್ಸರ್ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ, ರೋಹಿತ್ ಶರ್ಮಾ 2013ರಲ್ಲಿ ಇದವರೆಗೆ 53 ಸಿಕ್ಸರ್ ಸಿಡಿಸಿದ್ದು, ಎಬಿ ಡಿ ವಿಲಿಯರ್ಸ್ ದಾಖಲೆ ಮುರಿಯುವ ಚಿನ್ನದ ಅವಕಾಶ ಹೊಂದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 274 ರನ್‌ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡಕ್ಕೆ ರೋಹಿತ್ ಶರ್ಮಾ ಅತ್ಯುತ್ತಮ ಆರಂಭ ಒದಗಿಸಿದರು. 40 ಎಸೆತಗಳಲ್ಲಿ 4 ಬೌಂಡರಿ 4 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ 46 ರನ್ ಗಳಿಸಿ ಔಟಾದರು.
ನಂತರ ವಿರಾಟ್ ಕೊಹ್ಲಿ ಅವರ ಅಮೋಘ 95 ರನ್ ನೆರವಿನಿಂದ ಭಾರತ ಈ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡುವ ಮೂಲಕ 20 ವರ್ಷಗಳ ಗೆಲುವಿನ ಬರವನ್ನು ಕೊನೆಗಾಣಿಸಿತು. ಶ್ರೇಯಸ್ ಅಯ್ಯರ್ 33 ರನ್, ಕೆಎಲ್ ರಾಹುಲ್ 27 ರನ್, ರವೀಂದ್ರ ಜಡೇಜಾ ಅಜೇಯ 39 ರನ್ ಗಳಿಸುವ ಮೂಲಕ ಭಾರತದ ಗೆಲುವಿಗೆ ಕಾಣಿಕೆ ನೀಡಿದರು.
ಇದಕ್ಕೂ ಮುನ್ನದ ಭಾರತದ ವೇಗಿ ಮೊಹಮ್ಮದ್ ಶಮಿ, 10 ಓವರ್ ಗಳಲ್ಲಿ 54 ರನ್ ನೀಡಿ 5 ವಿಕೆಟ್ ಪಡೆಯುವ ಮೂಲಕ ನ್ಯೂಜಿಲೆಂಡ್ ಬೃಹತ್ ಮೊತ್ತ ಗಳಿಸುವುದಕ್ಕೆ ಕಡಿವಾಣ ಹಾಕಿದರು. ಕುಲದೀಪ್ ಯಾದವ್ 2 ವಿಕೆಟ್ ಪಡೆದರೆ, ಬುಮ್ರಾ ಮತ್ತು ಸಿರಾಜ್ ತಲಾ 1 ವಿಕೆಟ್ ಪಡೆದರು. ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಕ್ಕಾಗಿ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದುಕೊಂಡರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications