Ind vs NZ: ಶಮಿ 50, ಕೊಹ್ಲಿ 50, ರೋಹಿತ್ 50: ವಾಂಖೆಡೆಯಲ್ಲಿ ವಿಶಿಷ್ಠ ದಾಖಲೆ ಬರೆದ ಟೀಂ ಇಂಡಿಯಾ

ಏಕದಿನ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳ ಗೆಲುವು ಸಾಧಿಸುವ ಮೂಲಕ ಫೈನಲ್‌ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 397 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ನಾಯಕ ರೋಹಿತ್ ಶರ್ಮಾ ಆರಂಭದಲ್ಲೇ ಅಬ್ಬರಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು.

ind-vs-nz-shami-50-kohli-50-rohit-50

29 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ 47 ರನ್ ಸಿಡಿಸುವ ಮೂಲಕ ಭಾರತ ಬೃಹತ್ ಮೊತ್ತ ಗಳಿಸಲು ಅಡಿಪಾಯ ಹಾಕಿದರು. ಶುಭಮನ್ ಗಿಲ್ ಸ್ನಾಯು ಸೆಳೆತಕ್ಕೆ ಒಳಗಾಗಿ ಮೈದಾನದಿಂದ ಹೊರ ನಡೆದರು, ಕೊನೆಯ ಓವರ್ ನಲ್ಲಿ ಬಂದು ಬ್ಯಾಟಿಂಗ್ ಮಾಡಿದರು. ಅವರು 66 ಎಸೆತಗಳಲ್ಲಿ ಅಜೇಯ 80 ರನ್ ಗಳಿಸಿದರು.

ವಿರಾಟ್ ಕೊಹ್ಲಿ 113 ಎಸೆತಗಳಲ್ಲಿ 117 ರನ್ ಗಳಿಸಿ ಮಿಂಚಿದರೆ, ಶ್ರೇಯಸ್ ಅಯ್ಯರ್ 70 ಎಸೆತಗಳಲ್ಲಿ 4 ಬೌಂಡರಿ 8 ಸಿಕ್ಸರ್ ಸಹಿತ 105 ರನ್ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಕೆಎಲ್ ರಾಹುಲ್ 20 ಎಸೆತಗಳಲ್ಲಿ 39 ರನ್ ಗಳಿಸಿದರು.

ರೋಹಿತ್ ಶರ್ಮಾ 50 ಸಿಕ್ಸರ್

ಈ ವಿಶ್ವಕಪ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ವಿಶ್ವಕಪ್‌ನಲ್ಲಿ 50 ಸಿಕ್ಸರ್ ಸಿಡಿಸುವ ಮೂಲ ಹೊಸ ದಾಖಲೆ ಬರೆದರು. ಕ್ರಿಸ್ ಗೇಲ್ ಅವರ ದಾಖಲೆ ಮುರಿದ ರೋಹಿತ್ 51 ಸಿಕ್ಸರ್ ಬಾರಿಸಿದ್ದಾರೆ, ಈ ಮೂಲಕ ವಿಶ್ವಕಪ್‌ನಲ್ಲಿ 50 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ 50ನೇ ಶತಕ

ರೋಹಿತ್ ಅಬ್ಬರದ ಬಳಿಕ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ ಎಂದಿನಂತೆ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಎದುರಲ್ಲೇ ಅವರ ದಾಖಲೆ ಮುರಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ಗಳಿಸಿದ ಸಾಧನೆ ಮಾಡಿದರು. ಏಕದಿನ ಮಾದರಿಯಲ್ಲಿ 50 ಶತಕ ಗಳಿಸಿದ ಏಕೈಕ ಕ್ರಿಕೆಟಿಗ ಎನ್ನುವ ಸಾಧನೆ ವಿರಾಟ್ ಕೊಹ್ಲ ಅವರದ್ದಾಗಿದೆ.

ಮೊಹಮ್ಮದ್ ಶಮಿ 50 ವಿಕೆಟ್

ಕೊಹ್ಲಿ, ರೋಹಿತ್ ಅಬ್ಬರದ ಬಳಿಕ ಮೈದಾನದಲ್ಲಿ ಮಿಂಚು ಹರಿಸಿದ್ದು ಮಾತ್ರ ಮೊಹಮ್ಮದ್ ಶಮಿ, ಒಂದು ಹಂತದಲ್ಲಿ ನ್ಯೂಜಿಲೆಂಡ್ ಮೇಲುಗೈ ಸಾಧಿಸುತ್ತದೆ ಎನ್ನುವಾಗಲೇ ಒಂದೇ ಓವರ್ ನಲ್ಲಿ ಎರಡು ವಿಕೆಟ್ ಪಡೆದ ಶಮಿ ಭಾರತದ ಗೆಲುವು ಸುಲಭವಾಗಿಸಿದರು.

ಏಕದಿನ ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್ ಪಡೆದ ದಾಖಲೆ ಈಗ ಶಮಿ ಪಾಲಾಗಿದೆ. 17 ಇನ್ನಿಂಗ್ಸ್‌ಗಳಲ್ಲಿ 50 ವಿಕೆಟ್ ಪಡೆಯುವ ಮೂಲಕ ಸ್ಟಾರ್ಕ್ ಅವರ ದಾಖಲೆ ಮುರಿದರು. ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ ಪಡೆದ ಶಮಿ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+