Ind vs Pak Toss: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ; ಪ್ಲೇಯಿಂಗ್ ಇಲೆವೆನ್ ಹೇಗಿದೆ?

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮಳೆಯಿಂದಾಗಿ ಟಾಸ್ ಅರ್ಧಗಂಟೆ ತಡವಾಗಿದ್ದು, ಪಂದ್ಯ ಕೂಡ ಅರ್ಧ ಗಂಟೆ ತಡವಾಗಿ ಆರಂಭವಾಗಲಿದೆ. ಮಳೆಯಿಂದ ಆರಂಭದಲ್ಲಿ ಪಿಚ್ ಬೌಲರ್ ಗಳಿಗೆ ನೆರವು ನೀಡುವ ಕಾರಣ ಬೌಲಿಂಗ್ ಆಯ್ಕೆ ಮಾಡಿಕೊಂಡಿರುವುದಾಗಿ ಪಾಕಿಸ್ತಾನ ನಾಯಕ ಬಾಬರ್ ಆಜಂ ಹೇಳಿದರು.

Ind vs Pak Pakistan win the toss opted bowl first against india

ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಆಜಂ ಖಾನ್ ಬದಲಾಗಿ ಇಮಾದ್ ವಾಸಿಂ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಐರ್ಲೆಂಡ್ ವಿರುದ್ಧ ಆಡಿದ್ದ ಭಾರತ ತಂಡವೇ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಸೂಪರ್ 8 ಹಂತಕ್ಕೆ ಪ್ರವೇಶ ಪಡೆಯಲು ಇದು ಎರಡೂ ತಂಡಗಳಿಗೆ ಮಹತ್ವದ ಪಂದ್ಯವಾಗಿದೆ. ಯುಎಸ್‌ಎ ವಿರುದ್ಧ ಸೋತ ಬಳಿಕ ಪಾಕಿಸ್ತಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆದ್ದರೆ ಮಾತ್ರ ಸೂಪರ್ 8 ಹಂತಕ್ಕೆ ಪ್ರವೇಶಿಸುವ ಆಸೆ ಇರುತ್ತದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದಿರುವ ಭಾರತ ಪಾಕಿಸ್ತಾನವನ್ನು ಮಣಿಸಿ ಸೂಪರ್ 8 ಹಾದಿಯನ್ನು ಸುಲಭಗೊಳಿಸುವ ವಿಶ್ವಾಸದಲ್ಲಿದೆ.

ಪ್ಲೇಯಿಂಗ್ ಇಲೆವೆನ್

ಭಾರತ : ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಉಸ್ಮಾನ್ ಖಾನ್, ಫಖರ್ ಜಮಾನ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಅಮೀರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+