Ind vs SA ODI: ಸಾಯಿ ಸುದರ್ಶನ್, ಶ್ರೇಯಸ್ ಅಯ್ಯರ್ ಅರ್ಧಶತಕ: ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಗೆಲುವು
ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನಾಡಿದ ಸಾಯಿ ಸುದರ್ಶನ್ ಅರ್ಧಶತಕ ಗಳಿಸಿ ಮಿಂಚಿದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಭಾರತದ ಶಿಸ್ತಿನ ಬೌಲಿಂಗ್ ದಾಳಿಗೆ ಪರದಾಡಿತು. 27.3 ಓವರ್ ಗಳಲ್ಲಿ 116 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಭಾರತಕ್ಕೆ ಸುಲಭ ಗುರಿ ನೀಡಿತು. ಅರ್ಷದೀಪ್ ಸಿಂಗ್ ಮತ್ತು ಆವೇಶ್ ಖಾನ್ ಭರ್ಜರಿ ಬೌಲಿಂಗ್ ಮಾಡಿದರು. ಅರ್ಷದೀಪ್ ಸಿಂಗ್ 10 ಓವರ್ ಗಳಲ್ಲಿ ಕೇವಲ 37 ರನ್ ನೀಡಿ 5 ವಿಕೆಟ್ ಪಡೆದರು. ಆವೇಶ್ ಖಾನ್ ಕೂಡ 4 ವಿಕೆಟ್ ಪಡೆದರು, ಕುಲದೀಪ್ ಯಾದವ್ 1 ವಿಕೆಟ್ ಪಡೆದುಕೊಂಡರು.

ದಕ್ಷಿಣ ಆಫ್ರಿಕಾ ಕೂಡ ಟೋನಿ ದೆ ಝೋರ್ಜಿ 28 ರನ್ ಗಳಿಸಿದರು. ನಾಯಕ ಐಡೆನ್ ಮಾರ್ಕ್ರಾಮ್ 12 ರನ್ ಗಳಿಸಿದರು. ಹೆನ್ರಿಕ್ ಕ್ಲಾಸೆನ್ ಕೇವಲ 6 ರನ್ ಗಳಿಸಿದರೆ, ಡೇವಿಡ್ ಮಿಲ್ಲರ್ 2 ರನ್ ಗಳಿಸಿ ಔಟಾದರೆ, ನಾಯಕ ಮಾರ್ಕ್ರಾಮ್ 12 ರನ್ ಗಳಿಸಿ ಔಟಾದರು. ವಿಯಾನ್ ಮುಲ್ಡರ್ ಯಾವುದೇ ರನ್ ಗಳಿಸದೆ ವಿಕೆಟ್ ಒಪ್ಪಿಸಿದರು. ಆಂಡಿಲೆ ಫೆಲುಕ್ವಾಯೊ 33 ರನ್ ಗಳಿಸಿ ದಕ್ಷಿಣ ಆಫ್ರಿಕಾ 116 ರನ್ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ನಾಂದ್ರೆ ಬರ್ಗರ್ (7), ಕೇಶವ್ ಮಹರಾಜ್ (4), ತಬ್ರೈಜ್ ಶಂಸಿ ಔಟಾಗದೆ 11 ರನ್ ಗಳಿಸಿದರು.
ಸಾಯಿ ಸುದರ್ಶನ್, ಅಯ್ಯರ್ ಭರ್ಜರಿ ಆಟ
ಈ ಸುಲಭ ಸವಾಲನ್ನು ಬೆನ್ನತ್ತಿದ ಭಾರತ ಆರಂಭದಲ್ಲೇ ರುತುರಾಜ್ ಗಾಯಕ್ವಾಡ್ (5) ವಿಕೆಟ್ ಕಳೆದುಕೊಂಡಿತು. ಆದರೆ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಸಾಯಿ ಸುರ್ದಶನ್ 43 ಎಸೆತಗಳಲ್ಲಿ 9 ಬೌಂಡರಿ ಸಹಿತ ಅಜೇಯ 55 ರನ್ ಗಳಿಸಿ ಭಾರತದ ಗೆಲುವನ್ನು ಸುಲಭವಾಗಿಸಿದರು. ಶ್ರೇಯಸ್ ಅಯ್ಯರ್ ಕೂಡ 45 ಎಸೆತಗಳಲ್ಲಿ 6 ಬೌಂಡರಿ 1 ಸಿಕ್ಸರ್ ಸಹಿತ 52 ರನ್ ಗಳಿಸಿ ಔಟಾದರು. ತಿಲಕ್ ವರ್ಮಾ ಅಜೇಯ 1 ರನ್ ಗಳಿಸಿದರು.
ಭಾರತ 16.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 117 ರನ್ ಗಳಿಸುವ ಮೂಲಕ 8 ವಿಕೆಟ್‌ಗಳ ಗೆಲುವು ಸಾಧಿಸಿತು ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಸರಣಿಯ ಎರಡನೇ ಪಂದ್ಯ ಡಿಸೆಂಬರ್ 19ರಂದು ಗೆಕೆಬೆರ್‍ಹಾದ ಸೆಂಟ್ ಜಾರ್ಜ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿದೆ.












Click it and Unblock the Notifications