India vs New Zealand: 263 ರನ್‌ಗಳಿಗೆ ಆಲೌಟ್; 28 ರನ್‌ಗಳ ಮುನ್ನಡೆ ಪಡೆದ ಭಾರತ

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 263 ರನ್‌ಗಳಿಗೆ ಆಲೌಟ್ ಆಗಿದ್ದು, 23 ರನ್‌ಗಳ ಅಲ್ಪ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 235 ರನ್‌ಗಳಿಗೆ ಆಲೌಟ್ ಆಗಿತ್ತು, ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 263 ರನ್ ಗಳಿಸಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಈ ಸರಣಿಯಲ್ಲಿ ಭಾರತ ಇದೇ ಮೊದಲ ಬಾರಿಗೆ ಇನ್ನಿಂಗ್ಸ್ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾಗಿದೆ. ನ್ಯೂಜಿಲೆಂಡ್ ತಂಡವನ್ನು 235 ರನ್‌ಗಳಿಗೆ ಆಲೌಟ್ ಮಾಡಿದ ಬಳಿಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭವನ್ನೇ ಪಡೆದಿತ್ತು, ರೋಹಿತ್ ಶರ್ಮಾ 18 ರನ್‌ಗಳಿಗೆ ಔಟ್ ಆದರೂ, ಜೈಸ್ವಾಲ್ ಮತ್ತು ಶುಭಮನ್ ಗಿಲ್ ಉತ್ತಮವಾಗಿ ಆಡುತ್ತಿದ್ದರು. ಆದರೆ ಮೊದಲ ದಿನದಾಟ ಮುಗಿಯುವ ಕೆಲವೇ ಕ್ಷಣಗಳ ಮೊದಲು ಭಾರತ 3 ವಿಕೆಟ್ ಕಳೆದುಕೊಂಡು ಹಿನ್ನಡೆ ಅನುಭವಿಸಿತು.

India All Out for 263 Takes 23-Run Lead in 1st Innings of 3rd Test Against New Zealand

ಮೊದಲ ದಿನದಾಟದ ಅಂತ್ಯಕ್ಕೆ 85 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿದ್ದ ಭಾರತ ಎರಡನೇ ದಿನ ಉತ್ತಮ ಆರಂಭ ಪಡೆಯಿತು. ರಿಷಬ್ ಪಂತ್ ಮತ್ತು ಶುಭಮನ್ ಗಿಲ್‌ 96 ರನ್‌ಗಳ ಉತ್ತಮ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಆಸರೆಯಾದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+