2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ವೇಳಾ ಪಟ್ಟಿ ಪ್ರಕಟ: ಜೂನ್ 14ರಂದು ಭಾರತ, ಪಾಕ್ ಫೈಟ್
ಐಸಿಸಿ ಬುಧವಾರ ಮುಂದಿನ ವರ್ಷ (2026)ರಲ್ಲಿ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ನ ವೇಳಾಪಟ್ಟಿಯನ್ನು ಬಹಿರಂಗಗೊಳಿಸಿದೆ. ಇಷ್ಟೇ ಅಲ್ಲದೆ ಯಾವ ದೇಶ ಯಾವ ಗುಂಪಿನಲ್ಲಿ ಸ್ಥಾನ ಪಡೆದಿದೆ ಎಂಬುದನ್ನು ಸಹ ಐಸಿಸಿ ಘೋಷಿಸಿದೆ. ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಎರಡೂ ತಂಡಗಳ ನಡುವಿನ ಬಿಗ್ ಫೈಟ್ ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ಕಾತುರದಿಂದ ಕಾಯುತ್ತಿದ್ದಾರೆ. ಈ ಟಿ20 ವಿಶ್ವಕಪ್‌ನ್ನು ಇಂಗ್ಲೆಂಡ್ ತಂಡ ಆಯೋಜಿಸಲಿದೆ.
10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪ್ರತಿಷ್ಠಿತ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ಒಟ್ಟು 12 ತಂಡಗಳು ಕಾದಾಟ ನಡೆಸಲಿವೆ. ಈ 12 ತಂಡಗಳನ್ನು 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಈ ಟೂರ್ನಿ ಜೂನ್ 12 ರಂದು ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸಲಿವೆ.

ಐಸಿಸಿ ವಿಂಗಡಿಸಿರುವ 2 ಗುಂಪುಗಳಲ್ಲಿ ಮೊದಲ ಗುಂಪಿನಲ್ಲಿ ಆಸ್ಟ್ರೇಲಿಯಾ ಹೊರತುಪಡಿಸಿ, ದಕ್ಷಿಣ ಆಫ್ರಿಕಾ, ಭಾರತ ಮತ್ತು ಪಾಕಿಸ್ತಾನ ತಂಡಗಳು ಸೇರಿವೆ. ಇನ್ನು ಈ ಗುಂಪಿಗೆ ಎರಡು ತಂಡಗಳು ಸೇರ್ಪಡೆ ಗೊಳ್ಳಬೇಕಿದೆ. ಇನ್ನು ಯಾವ ತಂಡಗಳು ಈ ಗುಂಪಿನಲ್ಲಿ ಸ್ಥಾನ ಪಡೆಯಲಿವೆ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡಲಾಗುತ್ತದೆ.
12 ತಂಡ, 2 ಗುಂಪು
ಇನ್ನೊಂದು ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ಸೇರಿದಂತೆ ನ್ಯೂಜಿಲೆಂಡ್, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ತಂಡ ಸ್ಥಾನ ಪಡೆದಿವೆ. ಅರ್ಹತಾ ಪಂದ್ಯಗಳು ಮುಗಿದ ಬಳಿಕ ಈ ಗುಂಪಿಗೂ ಎರಡು ತಂಡಗಳು ಸೇರ್ಪಡೆ ಆಗುತ್ತವೆ. ಎಲ್ಲ ತಂಡಗಳು ಗುಂಪು ಹಂತದಲ್ಲಿ ಎಲ್ಲ ತಂಡಗಳ ವಿರುದ್ಧ ಕಾದಾಟ ನಡೆಸಲಿವೆ. ಎರಡು ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆದ ತಂಡ ಸೆಮಿಫೈನಲ್‌ಗೆ ಪ್ರವೇಶ ಪಡೆಯಲಿವೆ. ಸೆಮಿಫೈನಲ್ ಪಂದ್ಯಗಳು ಜೂನ್ 30 ಹಾಗೂ ಜುಲೈ 2 ರಂದು ನಡೆಯಲಿವೆ. ಪ್ರಶಸ್ತಿ ಸುತ್ತಿನ ಕಾದಾಟ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಜುಲೈ 5 ರಂದು ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೆಜ್ ಫೈಟ್ ಜೂನ್ 14 ರಂದು ನಡೆಯಲಿದೆ. ಈ ಎರಡೂ ತಂಡಗಳು ಬರೀ ಐಸಿಸಿ ಟೂರ್ನಿಯಲ್ಲಿ ಮಾತ್ರ ಕಾದಾಟ ನಡೆಸಲಿವೆ. ಉಳಿದಂತೆ ಉಭಯ ದೇಶಗಳ ನಡುವಿನ ಉದ್ವಿಗ್ನತೆಯಿಂದಾಗಿ ದ್ವಿಪಕ್ಷೀಯ ಸರಣಿಗಳು ನಡೆಯುತ್ತಿಲ್ಲ.
ಭಾರತ ಆಡಲಿರುವ ಪಂದ್ಯಗಳ ವೇಳಾಪಟ್ಟಿ
ಜೂನ್ 14, ಭಾರತ v ಪಾಕಿಸ್ತಾನ, ಎಡ್ಜ್‌ಬಾಸ್ಟನ್
ಜೂನ್ 17, ಭಾರತ v ಕ್ವಾಲಿಫೈಯರ್, ಹೆಡಿಂಗ್ಲಿ
ಜೂನ್ 25, ಭಾರತ v ಕ್ವಾಲಿಫೈಯರ್, ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ
ಜೂನ್ 28, ಆಸ್ಟ್ರೇಲಿಯಾ v ಭಾರತ, ಲಾರ್ಡ್ಸ್ ಕ್ರಿಕೆಟ್ ಮೈದಾನ
ಜೂನ್ 30, ಟಿಬಿಸಿ v ಟಿಬಿಸಿ (ಸೆಮಿಫೈನಲ್ 1), ದಿ ಓವಲ್
ಜುಲೈ 2, ಟಿಬಿಸಿ v ಟಿಬಿಸಿ (ಸೆಮಿಫೈನಲ್ 2), ದಿ ಓವಲ್
ಜುಲೈ 5, ಟಿಬಿಸಿ v ಟಿಬಿಸಿ (ಫೈನಲ್), ಲಾರ್ಡ್ಸ್ ಕ್ರಿಕೆಟ್ ಮೈದಾನ
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications