India vs Bangladesh: ಬಾಂಗ್ಲಾ ಮಣಿಸಿದ ಭಾರತ; ಸೆಮಿಫೈನಲ್‌ ಸ್ಥಾನ ಬಹುತೇಕ ಖಚಿತ

ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ 50 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಭಾರತದ ಸೆಮಿಫೈನಲ್ ಸ್ಥಾನ ಬಹುತೇಕ ಖಚಿತವಾಗಿದೆ. ಭಾರತ ಸೂಪರ್ 8 ಹಂತದ ತನ್ನ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

India beats Bangladesh by 50 runs virtually seals T20 World Cup semifinal spot

ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದರು.

ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಿಗಿಸಿದರು. 3.4 ಓವರ್ ಗಳಲ್ಲಿ 39 ರನ್ ಗಳಿಸಿದ್ದಾಗ ಭಾರತ ರೋಹಿತ್ ಶರ್ಮಾ (23 ರನ್) ಅವರ ವಿಕೆಟ್ ಕಳೆದುಕೊಂಡಿತು. ವಿರಾಟ್ ಕೊಹ್ಲಿ 28 ಎಸೆತಗಳಲ್ಲಿ 37 ರನ್ ಗಳಿಸಿ ಔಟಾದರು.

ರಿಷಬ್ ಪಂತ್ ಕೂಡ 24 ಎಸೆತಗಳಲ್ಲಿ 36 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 2 ಎಸೆತಗಳಲ್ಲಿ 6 ರನ್ ಗಳಿಸಿದರು. ಶಿವಂ ದುಬೆ 24 ಎಸೆತಗಳಲ್ಲಿ 34 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 27 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ಮಿಂಚಿದರು.

ಭಾರತದ ಬೌಲಿಂಗ್ ದಾಳಿಗೆ ಬೆಚ್ಚಿದ ಬಾಂಗ್ಲಾ

197 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ ಯಾವ ಹಂತದಲ್ಲೂ ಪೈಪೋಟಿ ಕೊಡಲೇ ಇಲ್ಲ. ಲಿಟ್ಟನ್ ದಾಸ್ 13 ರನ್, ತಂಜಿದ್ ಹಸನ್ 29 ರನ್, ನಜ್ಮುಲ್ ಶಾಂಟೋ 40 ರನ್ ಗಳಿಸಿದರು. ಟೋವಿದ್ ಹೃದೋಯ್ 4 ರನ್, ಝಾಕೆರ್ ಅಲಿ 1 ರನ್, ಮಹಮ್ಮುದಲ್ಲಾ 13 ರನ್, ಶಕೀಬ್ ಅಲ್ ಹಸನ್ 11 ರನ್ ಗಳಿಸಿ ನಿರಾಸೆ ಮೂಡಿಸಿದರು.

ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದರು. ಕುಲದೀಪ್ ಯಾದವ್ ಇಂದು ಮೋಡಿ ಮಾಡಿದರು. 4 ಓವರ್ ಗಳಲ್ಲಿ ಕೇವಲ 19 ರನ್ ಕೊಟ್ಟ ಅವರು ಪ್ರಮುಖ ಮೂರು ವಿಕೆಟ್ ಪಡೆದು ಮಿಂಚಿದರು. ಹಾರ್ದಿಕ್ ಪಾಂಡ್ಯ ಒಂದು ವಿಕೆಟ್ ಪಡೆದರು.

ಅಂತಿಮವಾಗಿ ಬಾಂಗ್ಲಾದೇಶ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಗಳಿಸುವ ಮೂಲಕ 50 ರನ್‌ಗಳಿಂದ ಸೋಲೊಪ್ಪಿಕೊಂಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+