Ind vs Ire T20: ಐರ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಸರಣಿ ಗೆದ್ದ ಬುಮ್ರಾ ಪಡೆ

ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 33 ರನ್‌ಗಳ ಅಮೋಘ ಗೆಲುವು ಸಾಧಿಸಿದ್ದು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 185 ರನ್ ಕಲೆಹಾಕಿತು, ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಐರ್ಲೆಂಡ್, 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 152 ರನ್ ಗಳಿಸುವ ಮೂಲಕ 33 ರನ್‌ಗಳಿಂದ ಸೋಲನುಭವಿಸಿತು.

India Clinches Series

ಡಬ್ಲಿನ್‌ನ ವಿಲೇಜ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಐರ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಉತ್ತಮ ರನ್ ಕಲೆಹಾಕಿತು. ರುತುರಾಜ್ ಗಾಯಕ್ವಾಡ್ 43 ಎಸೆತಗಳಲ್ಲಿ 6 ಬೌಂಡರಿ 1 ಸಿಕ್ಸರ್ ಸಹಿತ 58 ರನ್ ಗಳಿಸಿದರು. ಯಶಸ್ವಿ ಜೈಸ್ವಾಲ್ 18, ತಿಲಕ್ ವರ್ಮಾ 1 ರನ್ ಗಳಿಸಿದರು.

ಸಂಜು ಸ್ಯಾಮ್ಸನ್ 26 ಎಸೆತಗಳಲ್ಲಿ 5 ಬೌಂಡರಿ 1 ಭರ್ಜರಿ ಸಿಕ್ಸರ್ ಸಹಿತ 40 ರನ್ ಗಳಿಸಿದರು. ರಿಂಕು ಸಿಂಗ್ 21 ಎಸೆತಗಳಲ್ಲಿ 2 ಬೌಂಡರಿ ಮತ್ತಯ ಮೂರು ಸಿಕ್ಸರ್ ಸಹಿತ 38 ರನ್ ಗಳಿಸಿದರು. ಶಿವಮ್ ದುಬೆ 16 ಎಸೆತಗಳಲ್ಲಿ 22 ರನ್ ಗಳಿಸಿದರು.

ಪ್ರಸಿದ್, ಬುಮ್ರಾ ಮಾರಕ ಬೌಲಿಂಗ್

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಐರ್ಲೆಂಡ್‌ಗೆ ಕನ್ನಡಿಗ ಪ್ರಸಿದ್ಧ ಕೃಷ್ಣ ಆರಂಭದಲ್ಲೇ ಆಘಾತ ನೀಡಿದರು. ಮೂರನೇ ಓವರ್ ನಲ್ಲಿ ದಾಳಿಗೆ ಇಳಿದ ಅವರು ತಮ್ಮ ಮೊದಲನೇ ಓವರ್ ನಲ್ಲೇ ಎರಡು ವಿಕೆಟ್ ಪಡೆದರು. ಪೌಲ್ ಸ್ಟರ್ಲಿಂಗ್ ಮತ್ತು ಲೋರ್ಕನ್ ಟಕರ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಆಂಡ್ರೂ ಬಲ್ಬರೈನ್ ಮಾತ್ರ 51 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಸಹಿತ 72 ರನ್ ಗಳಿಸಿ ಏಕಾಂಗಿಯಾಗಿ ಹೋರಾಟ ನೀಡಿದರು. ಹ್ಯಾರಿ ಟೆಕ್ಟರ್ 7, ಕ್ಯಾಂಫರ್ 18, ಡೋಕ್ರೆಲ್ 13, ಮಾರ್ಕ್ ಅಡೈರ್ 23 ರನ್ ಗಳಿಸಿದರು.

ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡೆದರು, ಪ್ರಸಿದ್ ಕೃಷ್ಣ ಮತ್ತು ರವಿ ಬಿಷ್ಣೋಯ್ ಕೂಡ ತಲಾ 2 ವಿಕೆಟ್ ಪಡೆದು ಮಿಂಚಿದರು. ಅರ್ಷದೀಪ್ ಸಿಂಗ್ ಒಂದು ವಿಕೆಟ್ ಪಡೆದುಕೊಂಡರು. ಅಂತಿಮ ಓವರ್ ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ರಿಂಕು ಸಿಂಗ್ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದುಕೊಂಡರು.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-0 ಅಂತರದಲ್ಲಿ ಗೆಲುವು ಸಾಧಿಸಿದ್ದು ಸರಣಿ ವಶಪಡಿಸಿಕೊಂಡಿದೆ. ಸರಣಿಯ ಕೊನೆಯ ಪಂದ್ಯ ಆಗಸ್ಟ್ 23ರಂದು ಡಬ್ಲಿನ್‌ನಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+