Ind vs Eng: ಇಂಗ್ಲೆಂಡ್ ವಿರುದ್ಧ 38 ರನ್‌ಗಳಿಂದ ಗೆದ್ದ ಅಭಿಷೇಕ್ ಶರ್ಮಾ!

ಮುಂಬೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 150 ರನ್‌ಗಳ ಬೃಹತ್ ಗೆಲುವು ಸಾಧಿಸಿದ್ದು 4-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿದೆ. ಅಭಿಷೇಕ್ ಶರ್ಮಾ ಒಬ್ಬರೇ 135 ರನ್ ಗಳಿಸಿದ್ದು ಇಂಗ್ಲೆಂಡ್‌ 97 ರನ್‌ಗಳಿಗೆ ಆಲೌಟ್ ಆಗಿದ್ದು, ಅಭಿಷೇಕ್ ಶರ್ಮಾರೇ ಇಂಗ್ಲೆಂಡ್ ವಿರುದ್ಧ 38 ರನ್‌ಗಳಿಂದ ಗೆದ್ದಿದ್ದಾರೆ ಎಂದು ಅಭಿಮಾನಿಗಳು ಹಾಡಿ ಹೊಗಳಿದ್ದಾರೆ.

ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 247 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಅಭಿಷೇಕ್ ಶರ್ಮಾ 54 ಎಸೆತಗಳಲ್ಲಿ 7 ಬೌಂಡರಿ 13 ಸಿಕ್ಸರ್ ಸಹಿತ 135 ರನ್ ಗಳಿಸಿ ಮಿಂಚಿದರು.

India defeat england by 150 runs to clinch t20 series 4-1

ಶಿವಂ ದುಬೆ 30 ರನ್ ಗಳಿಸಿದರೆ, ತಿಲಕ್ ವರ್ಮಾ 24 ರನ್ ಗಳಿಸಿದರು. ಸಂಜು ಸ್ಯಾಮ್ಸನ್ 16 ರನ್ ಮತ್ತು ಅಕ್ಷರ್ ಪಟೇಲ್ 15 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ಮೊತ್ತ ದಾಟಲಿಲ್ಲ. ಆದರೂ ಭಾರತ ಬೃಹತ್ ಮೊತ್ತ ಕಲೆಹಾಕಲು ಅಭಿಷೇಕ್ ಶರ್ಮಾ ನೆರವಾದರು.

ಬ್ರೈಡನ್ ಕಾರ್ಸ್ 3 ವಿಕೆಟ್ ಪಡೆದರೆ, ಮಾರ್ಕ್ ವುಡ್ 2 ವಿಕೆಟ್ ಪಡೆದರು. ಇವರಿಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲಾ ಬೌಲರ್ ಗಳು ದುಬಾರಿಯಾದರು.

97 ರನ್‌ಗಳಿಗೆ ಆಲೌಟ್

248 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ಯಾವ ಹಂತದಲ್ಲೂ ಹೋರಾಟ ಕೊಡಲೇ ಇಲ್ಲ. ಫಿಲ್ ಸಾಲ್ಟ್ ಮಾತ್ರ 23 ಎಸೆತಗಳಲ್ಲಿ 7 ಬೌಂಡರಿ 3 ಸಿಕ್ಸರ್ ಸಹಿತ 55 ರನ್ ಗಳಿಸಿದರೆ, ಜೇಕಬ್ ಬೆಥೆಲ್ 10 ರನ್ ಗಳಿಸಿದರು. ಇವರಿಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲಾ ಬ್ಯಾಟರ್ ಗಳು ಒಂದಂಕಿಗೆ ಆಲೌಟ್ ಆದರು.

ಮೊಹಮ್ಮದ್ ಶಮಿ 3 ವಿಕೆಟ್ ಪಡೆಯುವ ಮೂಲಕ ಚಾಂಪಿಯನ್ಸ್ ಟ್ರೋಫಿಗೆ ನಾನು ರೆಡಿ ಎನ್ನುವ ಸಂದೇಶ ಕೊಟ್ಟಿದ್ದಾರೆ. ಶತಕ ಸಿಡಿಸಿ ಮಿಂಚಿದ್ದ ಅಭಿಷೇಕ್ ಶರ್ಮಾ ಬೌಲಿಂಗ್‌ನಲ್ಲೂ ಜಾದೂ ಮಾಡಿದರು. 1 ಓವರ್ ನಲ್ಲಿ ಕೇವಲ 3 ರನ್ ಬಿಟ್ಟುಕೊಟ್ಟು 2 ವಿಕೆಟ್ ಪಡೆದರು. ಶಿವಂ ದುಬೆ ಕೂಡ 2 ಓವರ್ ಗಳಲ್ಲಿ 11 ರನ್ ನೀಡಿ 2 ವಿಕೆಟ್ ಪಡೆದರು. ವರುಣ್ ಚಕ್ರವರ್ತಿ ಕೂಡ 2 ವಿಕೆಟ್ ಪಡೆದರೆ, ರವಿ ಬಿಷ್ಣೋಯ್ 1 ವಿಕೆಟ್ ಪಡೆದರು. ಟಿ20 ಕ್ರಿಕೆಟ್‌ನಲ್ಲಿ ಇದು ಭಾರತಕ್ಕೆ ಎರಡನೇ ದೊಡ್ಡ ಗೆಲುವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+