India vs Austarlia: ತೀರಿತು 2023ರ ಸೋಲಿನ ಸೇಡು! ಆಸ್ಟ್ರೇಲಿಯಾ ಸೋಲಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ, ಆಸ್ಟ್ರೇಲಿಯಾವನ್ನು ಚಾಂಪಿಯನ್ಸ್ ಟ್ರೋಫಿಯಿಂದ ಹೊರಕಳಿಸಿದ್ದು, ಫೈನಲ್‌ಗೆ ಭರ್ಜರಿ ಪ್ರವೇಶ ಪಡೆದುಕೊಂಡಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 49.3 ಓವರ್ ಗಳಲ್ಲಿ 264 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ನಾಯಕ ಸ್ಟೀವ್ ಸ್ಮಿತ್ 73 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾಗೆ ನೆರವಾದರು. ಟ್ರಾವಿಸ್ ಹೆಡ್ 33 ಎಸೆತಗಳಲ್ಲಿ 39 ರನ್ ಗಳಿಸಿ ಅಪಾಯಕಾರಿಯಾಗಿದ್ದಾ ವರುಣ್ ಚಕ್ರವರ್ತಿ ಅವರನ್ನು ಔಟ್ ಮಾಡಿ ಭಾರತದ ಆತಂಕ ದೂರ ಮಾಡಿದರು.

india defeated australia enters champions trophy final

ಅಲೆಕ್ಸ್ ಕೇರಿ 57 ಎಸೆತಗಳಲ್ಲಿ 61 ರನ್ ಗಳಿಸಿ ಆಸ್ಟ್ರೇಲಿಯಾ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು. ಮಾರ್ನಸ್ ಲ್ಯಾಬುಶಾನೆ 29 ರನ್, ಡ್ವಾರಿಶಿಯಸ್ 19 ರನ್ ಗಳಿಸಿದರು. ಮೊಹಮ್ಮದ್ ಶಮಿ 3 ವಿಕೆಟ್ ಪಡೆದು ಮಿಂಚಿದರೆ, ವರುಣ್ ಚಕ್ರವರ್ತಿ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಪಡೆದರು.

ವಿರಾಟ್ ಕೊಹ್ಲಿ ಜವಾಬ್ದಾರಿಯುತ ಆಟ

265 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಶುಭಮನ್ ಗಿಲ್ 8 ರನ್ ಗಳಿಸಿ ಔಟಾದರು. ರೋಹಿತ್ ಶರ್ಮಾ 29 ಎಸೆತಗಳಲ್ಲಿ 28 ರನ್ ಗಳಿಸಿದರು. 43 ರನ್ ಗಳಿಸುವಷ್ಟರಲ್ಲಿ ಭಾರತ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು. ಮೂರನೇ ವಿಕೆಟ್‌ಗೆ ಈ ಜೋಡಿ 91 ರನ್‌ಗಳ ಜೊತೆಯಾಟ ಆಡಿದರು. ಶ್ರೇಯಸ್ ಅಯ್ಯರ್ 62 ಎಸೆತಗಳಲ್ಲಿ 45 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಗಳಿಸಿ ಔಟಾದರು. ಶತಕ ಗಳಿಸುವ ಅವಕಾಶವಿದ್ದರೂ ಝಂಪಾ ಬೌಲಿಂಗ್‌ನಲ್ಲಿ ಬೌಂಡರಿ ಗಳಿಸಲು ಹೋಗಿ ಕ್ಯಾಚ್ ನೀಡಿ ಔಟಾಗಿದ್ದು ನಿರಾಸೆ ಮೂಡಿಸಿತು.

india defeated australia enters champions trophy final

ಅಕ್ಷರ್ ಪಟೇಲ್ 30 ಎಸೆತಗಳಲ್ಲಿ 27 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 24 ಎಸೆತಗಳಲ್ಲಿ ಮೂರು ಭರ್ಜರಿ ಸಿಕ್ಸರ್ ಸಹಿತ 28 ರನ್ ಗಳಿಸಿದರು. ಕೆಎಲ್ ರಾಹುಲ್ 34 ಎಸೆತಗಳಲ್ಲಿ ಅಜೇಯ 42 ರನ್ ಗಳಿಸಿದರು. ರವೀಂದ್ರ ಜಡೇಜಾ 2 ರನ್ ಗಳಿಸಿದರು.

ಮಾರ್ಚ್ 9ರಂದು ದುಬೈನಲ್ಲೇ ಫೈನಲ್ ಪಂದ್ಯ ನಡೆಯಲಿದ್ದು, ಮಾರ್ಚ್ 5, ಬುಧವಾರ ನಡೆಯಲಿರುವ ಮತ್ತೊಂದು ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು ಈ ಪಂದ್ಯದಲ್ಲಿ ಗೆಲ್ಲುವ ತಂಡದ ಜೊತೆ ಭಾರತ ಫೈನಲ್‌ನಲ್ಲಿ ಆಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+