India vs Pakistan: ಸೆಮಿಫೈನಲ್‌ಗೆ ಭಾರತ; ಚಾಂಪಿಯನ್ಸ್‌ ಟ್ರೋಫಿಯಿಂದ ಪಾಕಿಸ್ತಾನ ಬಹುತೇಕ ಹೊರಗೆ

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ಸೆಮಿಫೈನಲ್‌ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದ್ದು, ಪಾಕಿಸ್ತಾನವನ್ನು ಪಂದ್ಯಾವಳಿಯಿಂದಲೇ ಹೊರದಬ್ಬಿದೆ. ಪವಾಡ ನಡೆದರೆ ಮಾತ್ರ ಪಾಕಿಸ್ತಾನ ಸೆಮಿಫೈನಲ್‌ಗೆ ಅರ್ಹತೆ ಪಡೆಯಬಹುದು.

ವಿರಾಟ್ ಕೊಹ್ಲಿ ಅವರ ಅಮೋಘ ಶತಕದ ನೆರವಿನಿಂದ ಭಾರತ 242 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಿತು. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ ಆಗಿದ್ದ ಪಾಕಿಸ್ತಾನವನ್ನು ಭಾರತ ಲೀಗ್ ಹಂತದಲ್ಲೇ ಹೊರದಬ್ಬುವ ಮೂಲಕ ಹಳೆ ಬಾಕಿಯನ್ನು ತೀರಿಸಿದೆ.

india defeated pakistan by 6 wickets champions trophy confirms semifinal virat kohli

ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತದ ಶಿಸ್ತಿನ ಬೌಲಿಂಗ್ ದಾಳಿ ಎದುರು ರನ್ ಗಳಿಸಲು ಪರದಾಡಿದ ಪಾಕಿಸ್ತಾನ 49.4 ಓವರ್ ಗಳಲ್ಲಿ 241 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಸೌದ್ ಶಕೀಲ್ 62 ರನ್, ಮೊಹಮ್ಮದ್ ರಿಜ್ವಾನ್ 46 ರನ್, ಖುಷ್ದಿಲ್ 38 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರಿಂದ ಉತ್ತಮ ಪ್ರದರ್ಶನ ಬರಲೇ ಇಲ್ಲ.

ಕುಲದೀಪ್ ಯಾದವ್ 3 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 2 ವಿಕೆಟ್ ಪಡೆದರು. ಹರ್ಷಿತ್ ರಾಣಾ, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು.

ಕೊಹ್ಲಿ, ಅಯ್ಯರ್ ಅಬ್ಬರ

242 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ಅವರ ಉತ್ತಮ ಬ್ಯಾಟಿಂಗ್ ಮತ್ತು ವಿರಾಟ್ ಕೊಹ್ಲಿ ಅವರ ಅಮೋಘ ಶತಕದ ನೆರವಿನಿಂದ ಭರ್ಜರಿ ಗೆಲುವು ಸಾಧಿಸಿತು. ಭಾರತ ತಂಡಕ್ಕೆ ರೋಹಿತ್ ಶರ್ಮಾ ಸ್ಫೋಟಕ ಆರಂಭ ಒದಗಿಸಿದರು. 15 ಎಸೆಗಳಲ್ಲೇ 20 ರನ್ ಗಳಿಸಿ ಅಪಾಯಕಾರಿಯಾಗಿದ್ದಾಗ ಶಾಹಿನ್ ಅಫ್ರಿದಿ ಬೌಲ್ಡ್ ಮಾಡಿದರು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ಶುಭಮನ್ ಗಿಲ್, ವಿರಾಟ್ ಕೊಹ್ಲಿ ಜೊತೆ ಎಚ್ಚರಿಕೆಯಿಂದ ಇನ್ನಿಂಗ್ಸ್ ಆಡಿದರು. ಈ ಜೋಡಿ ಎರಡನೇ ವಿಕೆಟ್‌ಗೆ 69 ರನ್ ಕಲೆಹಾಕುವ ಮೂಲಕ ಗೆಲುವಿನ ಭರವಸೆ ಮೂಡಿಸಿದರು. 46 ರನ್ ಗಳಿಸಿದ್ದ ಗಿಲ್ ಔಟಾದ ಬಳಿಕ, ಶ್ರೇಯಸ್ ಅಯ್ಯರ್ ಮತ್ತು ಕೊಹ್ಲಿ ಭಾರತವನ್ನು ಗೆಲುವಿನ ಸನಿಹ ಕರೆತಂದರು.

ಕೊಹ್ಲಿ ಮತ್ತು ಅಯ್ಯರ್ 3ನೇ ವಿಕೆಟ್‌ಗೆ 114 ರನ್ ಕಲೆಹಾಕುವ ಮೂಲಕ ಭಾರತದ ಗೆಲುವು ಬಹುತೇಕ ಖಚಿತವಾಗಿತ್ತು. ಶ್ರೇಯಸ್ ಅಯ್ಯರ್ 56 ರನ್ ಗಳಿಸಿ ಔಟಾದ ಬಳಿಕ ಕ್ರೀಸ್‌ಗೆ ಬಂದ ಹಾರ್ದಿಕ್ ಪಾಂಡ್ಯ 8 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ ಅಜೇಯ 3 ರನ್ ಗಳಿಸಿದರು.

ವಿರಾಟ್ ಕೊಹ್ಲಿ ತಮ್ಮ 51ನೇ ಅಂತಾರಾಷ್ಟ್ರೀಯ ಏಕದಿನ ಶತಕವನ್ನು ಕೊನೆಯ ಎಸೆತದಲ್ಲಿ ಪೂರೈಸುವ ಜೊತೆಗೆ ಭಾರತಕ್ಕೆ ಗೆಲುವು ತಂದುಕೊಟ್ಟರು. ಪಾಕಿಸ್ತಾನದ ವಿರುದ್ಧ ಇದು ಕೊಹ್ಲಿಯ ನಾಲ್ಕನೇ ಶತಕವಾಗಿದ್ದು, ಪಾಕಿಸ್ತಾನಕ್ಕೆ ಮತ್ತೊಮ್ಮೆ ದುಃಸ್ವಪ್ನವಾಗಿ ಕಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+