India vs Bangladesh: ಯುವ ಟೀಂ ಇಂಡಿಯಾ ಅಬ್ಬರಕ್ಕೆ ತತ್ತರಿಸಿದ ಬಾಂಗ್ಲಾದೇಶ

2 ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಭಾರತ, ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅಜೇಯ ಓಟವನ್ನು ಮುಂದುವರೆಸಿದೆ. ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿದ್ದು, 3 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲ ಓವರ್ ನಲ್ಲೇ ಅರ್ಷದೀಪ್ ಸಿಂಗ್ ಬಾಂಗ್ಲಾದೇಶಕ್ಕೆ ಆಘಾತ ಕೊಟ್ಟರು. ಲಿಟ್ಟನ್ ದಾಸ್ 4 ರನ್ ಗಳಿಸಿದ್ದಾಗ, ಅರ್ಷದೀಪ್ ಸಿಂಗ್ ಬೌಲಿಂಗ್‌ನಲ್ಲಿ ಔಟಾದರು. ಭಾರತದ ವೇಗಿಗಳು ಮತ್ತು ಸ್ಪಿನ್ ದಾಳಿಗೆ ನಲುಗಿದ ಬಾಂಗ್ಲಾದೇಶ 19.5 ಓವರ್ ಗಳಲ್ಲಿ 127 ರನ್‌ಗಳಿಗೆ ಆಲೌಟ್ ಆಯಿತು.

India Defeats Bangladesh by 7 Wickets in First T20 Match

ನಾಯಕ ಶಾಂಟೋ 27 ರನ್ ಗಳಿಸಿದರೆ, ಮೆಹದಿ ಹಸನ್ ಮಿರಾಜ್ 35 ರನ್ ಗಳಿಸಿದರು. ಉಳಿದ ಯಾವ ಆಟಗಾರರಿಂದ ಕೂಡ ಉತ್ತಮ ಪ್ರದರ್ಶನ ಬರಲಿಲ್ಲ. ಭಾರತದ ಪರವಾಗಿ ಅರ್ಷದೀಪ್ ಸಿಂಗ್ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ತಲಾ 3 ವಿಕೆಟ್ ಪಡೆಯುವ ಮೂಲಕ ಬಾಂಗ್ಲಾದೇಶವನ್ನು ಕಟ್ಟಿಹಾಕಿದರು.

ಐಪಿಎಲ್‌ನಲ್ಲಿ ತಮ್ಮ ವೇಗದ ಮೂಲಕವೇ ಸಾಕಷ್ಟು ಸುದ್ದಿ ಮಾಡಿದ್ದ ಮಯಾಂಕ್ ಯಾದವ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು, ತಮ್ಮ ಮೊದಲ ಪಂದ್ಯದಲ್ಲೇ ವೇಗದಿಂದ ಬಾಂಗ್ಲಾದೇಶ ಆಟಗಾರರನ್ನು ಕಾಡಿದರು. 4 ಓವರ್ ಗಳಲ್ಲಿ 21 ರನ್ ನೀಡಿದ ಅವರು ಒಂದು ವಿಕೆಟ್ ಪಡೆದು ಗಮನ ಸೆಳೆದರು. ನಿತೀಶ್ ರೆಡ್ಡಿ, ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಪಡೆದರು.

ಸುಲಭವಾಗಿ ಗೆದ್ದ ಭಾರತ

128 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ಸ್ಫೋಟಕ ಆರಂಭ ಪಡೆಯಿತು. ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದರು. ಅಭಿಷೇಕ್ ಶರ್ಮಾ 7 ಎಸೆತಗಳಲ್ಲಿ 17 ರನ್ ಗಳಿಸಿದ್ದಾಗ ರನೌಟ್‌ ಆದರು. ಸಂಜು ಸ್ಯಾಮ್ಸನ್ 19 ಎಸೆತಗಳಲ್ಲಿ 26 ರನ್ ಗಳಿಸಿದರು.

ನಾಯಕ ಸೂರ್ಯಕುಮಾರ್ ಯಾದವ್ 14 ಎಸೆತಗಳಲ್ಲಿ 29 ರನ್ ಗಳಿಸಿ ಮಿಂಚಿದರೆ, ನಿತೀಶ್ ರೆಡ್ಡಿ 15 ಎಸೆತಗಳಲ್ಲಿ ಅಜೇಯ 16 ರನ್ ಗಳಿಸಿದರು. ಅಬ್ಬರಿಸಿದ ಹಾರ್ದಿಕ್ ಪಾಂಡ್ಯ 16 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್ ಸಹಿತ ಅಜೇಯ 39 ರನ್ ಗಳಿಸಿದರು.

11.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿದ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವಿನ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟಿ20 ಸರಣಿಯ ಎರಡನೇ ಪಂದ್ಯ ಅಕ್ಟೋಬರ್ 9 ರಂದು, ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+