India vs Zimbabwe: ಭಾರತಕ್ಕೆ ಭರ್ಜರಿ ಗೆಲುವು; ಸರಣಿ ಗೆದ್ದ ಗಿಲ್ ಪಡೆ
ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಸೋತ ಭಾರತ ಬಳಿಕ ಸತತ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ 4-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿದೆ. ಹರಾರೆಯಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು. ಸಂಜು ಸ್ಯಾಮ್ಸನ್ 58 ರನ್ ಗಳಿಸಿದರೆ, ಶಿವಂ ದುಬೆ 12 ಎಸೆತಗಳಲ್ಲಿ 26 ರನ್ ಗಳಿಸಿದರು.

ಈ ಮೊತ್ತವನ್ನು ಬೆನ್ನತ್ತಿದ ಜಿಂಬಾಬ್ವೆ ಭಾರತದ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ 18.3 ಓವರ್ ಗಳಲ್ಲಿ 125 ರನ್‌ಗಳಿಗೆ ಆಲೌಟ್ ಆಯಿತು. ಮುಖೇಶ್ ಕುಮಾರ್ 4 ವಿಕೆಟ್ ಪಡೆದರೆ, ಶಿವಂ ದುಬೆ 2 ವಿಕೆಟ್ ಪಡೆದರು. ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್ ಮತ್ತು ತುಷಾರ್ ದೇಶಪಾಂಡೆ ತಲಾ ಒಂದು ವಿಕೆಟ್ ಪಡೆದುಕೊಂಡರು.
ದಾಖಲೆ ಬರೆದ ಜೈಸ್ವಾಲ್
ಇನ್ನು ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶ್ವದಾಖಲೆ ಬರೆಯುವ ಮೂಲಕ ಗಮನ ಸೆಳೆದರು. ಒಂದೇ ಎಸೆತದಲ್ಲಿ 13 ರನ್ ಗಳಿಸಿ ಮೊದಲ ಎಸೆತದಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆದರು.
ಜಿಂಬಾಬ್ವೆ ನಾಯಕ ಸಿಕಂದರ್ ರಝಾ ಅವರ ಮೊದಲ ಓವರ್ ನ ಮೊದಲ ಎಸೆತದಲ್ಲೇ ಜೈಸ್ವಾಲ್ ಸಿಕ್ಸರ್ ಬಾರಿಸಿದರು, ಆದರೆ ಇದು ನೋಬಾಲ್ ಆಗಿತ್ತು, ಮೊದಲನೇ ಅಧಿಕೃತ ಎಸೆತಕ್ಕೂ ಮುನ್ನವೇ ಭಾರತದ ಸ್ಕೋರ್ 7 ರನ್ ಆಗಿತ್ತು, ಎರಡನೇ ಎಸೆತವನ್ನು ಸಿಕ್ಸರ್ ಬಾರಿಸಿದ ಜೈಸ್ವಾಲ್, ಒಂದೇ ಎಸೆತದಲ್ಲಿ 13 ರನ್ ಗಳಿಸಿದ ಸಾಧನೆ ಮಾಡಿದರು.












Click it and Unblock the Notifications