Ind vs SA: ಸ್ಮೃತಿ ಮಂಧಾನ ಭರ್ಜರಿ ಶತಕ; ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ಭಾರತ
ಬೆಂಗಳೂರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 143 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆಶಾ ಶೋಭಾನಾ ಮತ್ತು ಸ್ಮೃತಿ ಮಂಧಾನ ಭಾರತದ ಗೆಲುವಿನಲ್ಲಿ ಮಹತ್ವದ ಕೊಡುಗೆ ನೀಡಿದರು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಭಾರತ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಆಲ್‌ರೌಂಡ್ ಪ್ರದರ್ಶನ ನೀಡಿತು.

ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 50 ಓವರ್ ಗಳಲ್ಲಿ ಭಾರತ 8 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತು.
ಸ್ಮೃತಿ ಮಂಧಾನ ಭರ್ಜರಿ ಶತಕ
ಶೆಫಾಲಿ ವರ್ಮಾ 7 ರನ್ ಗಳಿಸಿ ಔಟಾದರೆ, ದಯಾಳ್ ಹೇಮಲತಾ 12 ರನ್ ಗಳಿಸಿ ಔಟಾದರು. ನಾಯಕಿ ಹರ್ಮನ್‌ಪ್ರೀತ್ ಕೌರ್ 10 ರನ್, ಜೆಮಿಮಾ ರೋಡ್ರಿಗಸ್ 17 ರನ್, ರಿಚಾ ಘೋಷ್ 3 ರನ್ ಗಳಿಸಿದರು. ಒಂದು ಕಡೆ ವಿಕೆಟ್ ಬೀಳುತ್ತಿದ್ದರು ಸ್ಮೃತಿ ಮಂಧಾನ ಮತ್ತೊಂದು ಕಡೆ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದರು.
127 ಎಸೆತಗಳಲ್ಲಿ 117 ರನ್ ಗಳಿಸುವ ಮೂಲಕ ಅಮೋಘ ಶತಕ ಸಿಡಿಸಿದರು. ದೀಪ್ತಿ ಶರ್ಮಾ 37 ರನ್, ಪೂಜಾ ವಸ್ತ್ರಾಕರ್ 31 ರನ್ ಗಳಿಸುವ ಮೂಲಕ ಮಂಧಾನಗೆ ಜೊತೆಯಾದರು.
ಆಶಾ ಶೋಭನಾ ಮಾರಕ ಬೌಲಿಂಗ್
ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ಮೊದಲ ಓವರ್ ನಲ್ಲೇ ವಿಕೆಟ್ ಕಳೆದುಕೊಂಡಿತು. ಬಳಿಕ ದಕ್ಷಿಣ ಆಫ್ರಿಕಾ ಚೇತರಿಸಿಕೊಳ್ಳಲೇ ಇಲ್ಲ.
ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲೇ ಆಶಾ ಶೋಭನಾ ಮಾರಕ ಬೌಲಿಂಗ್ ಮಾಡಿದರು. 8.4 ಓವರ್ ಗಳಲ್ಲಿ ಕೇವಲ 21 ರನ್ ನೀಡಿ 4 ವಿಕೆಟ್ ಪಡೆದುಕೊಂಡರು.
ದೀಪ್ತಿ ಶರ್ಮಾ 2 ವಿಕೆಟ್ ಪಡೆದರೆ, ರೇಣುಕಾಸಿಂಗ್, ಪೂಜಾ ವಸ್ತ್ರಾಕರ್ ಮತ್ತು ರಾಧಾ ಯಾದವ್ ತಲಾ ಒಂದು ವಿಕೆಟ್ ಪಡೆದರು.
ಭಾರತದ ಈ ಆಲ್‌ರೌಂಡ್ ಪ್ರದರ್ಶನದ ಮೂಲಕ ಏಕದಿನ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿದೆ. ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ ಮೂರು ಏಕದಿನ ಪಂದ್ಯ, ಒಂದು ಟೆಸ್ಟ್ ಮತ್ತು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಮೂರು ಏಕದಿನ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಟೆಸ್ಟ್ ಮತ್ತು ಟಿ20 ಪಂದ್ಯಗಳು ಚೆನ್ನೈನಲ್ಲಿ ನಡೆಯಲಿದೆ.












Click it and Unblock the Notifications