India vs Bangladesh: ಬಾಂಗ್ಲಾದೇಶದ ವಿರುದ್ಧ ಭರ್ಜರಿ ಗೆಲುವು; ಫೈನಲ್‌ಗೆ ಲಗ್ಗೆಯಿಟ್ಟ ಭಾರತ

ಮಹಿಳಾ ಏಷ್ಯಾಕಪ್ 2024ರ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಫೈನಲ್‌ಗೆ ಲಗ್ಗೆಯಿಟ್ಟಿದೆ. ಸ್ಮೃತಿ ಮಂಧಾನ ಅಜೇಯ ಅರ್ಧಶತಕ ಮತ್ತು ಶಫಾಲಿ ವರ್ಮಾ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಭಾರತ 10 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತು.

ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತದ ಮಾರಕ ಬೌಲಿಂಗ್ ದಾಳಿ ಎದುರು ರನ್ ಗಳಿಸಲು ಪರದಾಡಿದ ಬಾಂಗ್ಲಾದೇಶದ ಬ್ಯಾಟರ್ ಗಳು 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 80 ರನ್ ಮಾತ್ರ ಗಳಿಸಿದರು.

India Enters Women s Asia Cup Final with Victory Over Bangladesh

ಬಾಂಗ್ಲಾದೇಶ ನಾಯಕಿ ನಿಗರ್ ಸುಲ್ತಾನ 51 ಎಸೆತಗಳಲ್ಲಿ 31 ರನ್ ಗಳಿಸಿದರೆ, ಶೋರ್ನಾ ಅಕ್ತರ್ 18 ಎಸೆತಗಳಲ್ಲಿ 19 ರನ್ ಗಳಿಸಿದರು. ಇವರಿಬ್ಬರನ್ನು ಹೊರತುಪಡಿಸಿದರೆ ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ಮೊತ್ತವನ್ನು ಗಳಿಸಲು ಸಾಧ್ಯವಾಗಲಿಲ್ಲ.

ರೇಣುಕಾ ಸಿಂಗ್ 4 ಓವರ್ ಗಳಲ್ಲಿ ಕೇವಲ 10 ರನ್ ಬಿಟ್ಟುಕೊಟ್ಟು ಪ್ರಮುಖ 3 ವಿಕೆಟ್ ಪಡೆದುಕೊಂಡರು. ರಾಧಾ ಯಾದವ್ ಕೂಡ 3 ಓವರ್ ಗಳಲ್ಲಿ 14 ರನ್ ನೀಡಿ 3 ವಿಕೆಟ್ ಪಡೆದರು. ದೀಪ್ತಿ ಶರ್ಮಾ ಮತ್ತು ಪೂಜಾ ವಸ್ತ್ರಾಕರ್ ತಲಾ ಒಂದು ವಿಕೆಟ್ ಪಡೆದರು.

ಸುಲಭ ಗೆಲುವು

ಈ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ಯಾವುದೇ ವಿಕೆಟ್ ಕಳೆದುಕೊಳ್ಳದೆ ಗುರಿ ಬೆನ್ನಟ್ಟುವ ಮೂಲಕ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಸ್ಮೃತಿ ಮಂಧಾನ 39 ಎಸೆತಗಳಲ್ಲಿ 9 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 55 ರನ್ ಗಳಿಸಿದರೆ, ಶಫಾಲಿ ವರ್ಮಾ 28 ಎಸೆತಗಳಲ್ಲಿ ತಾಳ್ಮೆಯ 26 ರನ್ ಗಳಿಸಿದರು.

ಇವರಿಬ್ಬರ ಅಮೋಘ ಬ್ಯಾಟಿಂಗ್ ನೆರವಿನಿಂದ 11 ಓವರ್ ಗಳಲ್ಲಿ 83 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಪಡೆದು ಫೈನಲ್‌ಗೆ ಲಗ್ಗೆಯಿಟ್ಟಿದೆ. ಫೈನಲ್‌ನಲ್ಲಿ ಶ್ರೀಲಂಕಾ ಅಥವಾ ಪಾಕಿಸ್ತಾನವನ್ನು ಎದುರಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+