India vs Australia: ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ಚಾಂಪಿಯನ್‌ಗಳು

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ವಿಶ್ವ ಚಾಂಪಿಯನ್ಸ್ ಆಫ್ ಲೆಜೆಂಡ್ಸ್ 2024ರ ಪಂದ್ಯಾವಳಿಯಲ್ಲಿ ಭಾರತಕ್ಕೆ ಮತ್ತೊಂದು ಸೋಲಿನ ಆಘಾತ ಎದುರಾಗಿದೆ. ಸೋಮವಾರ ನಡೆದ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 23 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

ನಾರ್ಥಾಂಪ್ಟನ್‌ನ ಕೌಂಟಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಚಾಂಪಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಚಾಂಪಿಯನ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 199 ರನ್‌ಗಳನ್ನು ಕಲೆಹಾಕಿತು.

India Lost against Australia by 28 runs in world championship of legends 2024 match

ಶಾನ್ ಮಾರ್ಷ್ 27 ಎಸೆತಗಳಲ್ಲಿ 41 ರನ್ ಗಳಿಸಿದರೆ, ಡೇನಿಯಲ್ ಕ್ರಿಸ್ಟಿಯನ್ 33 ಎಸೆತಗಳಲ್ಲಿ 69 ರನ್ ಚಚ್ಚಿದರು. ಬೆನ್ ಕಟಿಂಗ್ 13 ಎಸೆತಗಳಲ್ಲಿ ಅಜೇಯ 24 ರನ್ ಗಳಿಸಿದರು. ಡೇನಿಯಲ್ ಕ್ರಿಸ್ಟಿಯನ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ಚಾಂಪಿಯನ್ಸ್‌ ಭಾರತಕ್ಕೆ 200 ರನ್‌ಗಳ ಬೃಹತ್ ಗುರಿ ನೀಡಿತು.

ಚೇಸಿಂಗ್‌ನಲ್ಲಿ ಎಡವಿದ ಭಾರತ

ಈ ಬೃಹತ್ ಗುರಿಯನ್ನು ಬೆನ್ನತ್ತಿದ ಭಾರತ ಚಾಂಪಿಯನ್ಸ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು. ಇರ್ಫಾನ್ ಪಠಾಣ್ 9 ರನ್ ಗಳಿಸಿ ಔಟಾದರೆ, ರಾಬಿನ್ ಉತ್ತಪ್ಪ 12 ರನ್ ಗಳಿಸಿ ಔಟಾದರು. ಸುರೇಶ್ ರೈನಾ 12 ರನ್, ನಾಯಕ ಯುವರಾಜ್ ಸಿಂಗ್ 19 ರನ್‌ಗಳಿಸಿ ಔಟಾದರು.

ಯೂಸುಫ್ ಪಠಾಣ್ ಹೋರಾಟ

ಆಲ್‌ರೌಂಡರ್ ಯೂಸುಫ್ ಪಠಾಣ್ 48 ಎಸೆತಗಳಲ್ಲಿ 11 ಬೌಂಡರಿ 1 ಸಿಕ್ಸರ್ ಸಹಿತ 78 ರನ್ ಗಳಿಸಿದರೂ ತಂಡವನ್ನು ಸೋಲಿನಿಂದ ಪಾರುಮಾಡಲು ಆಗಲಿಲ್ಲ. ಪವನ್ ನೇಗಿ 11 ರನ್ ಗಳಿಸಿದರೆ ಅಂಬಾಟಿ ರಾಯುಡು 17 ಎಸೆತಗಳಲ್ಲಿ ಅಜೇತ 28 ರನ್ ಗಳಿಸಿದರು.

20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿದ ಭಾರತ ಚಾಂಪಿಯನ್ಸ್ 23 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಸೆಮಿಫೈನಲ್‌ ತಲುಪಲು ಇದೆ ಅವಕಾಶ

ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿ ನಿವೃತ್ತಿ ಹೊಂದಿರುವ ಆಟಗಾರರ ತಂಡ ಈ ಪಂದ್ಯಾವಳಿಯಲ್ಲಿ ಭಾಗವಹಿಸಿದೆ. ಭಾರತ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಆಡುತ್ತಿವೆ.

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ಸದ್ಯ ಮೊದಲ ಎರಡು ಸ್ಥಾನಗಳಲ್ಲಿದ್ದು, ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿವೆ. ಭಾರತ ಮತ್ತು ಇಂಗ್ಲೆಂಡ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದು, ಮುಂದಿನ ಪಂದ್ಯ ಗೆದ್ದರೆ ಸೆಮಿಫೈನಲ್ ತಲುಪುವ ಅವಕಾಶ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+