India vs England: ಭಾರತ ತಂಡದಲ್ಲಿ ಮೂರು ಬದಲಾವಣೆ; ಆರಂಭದಲ್ಲೇ ಶಾಕ್ ಕೊಟ್ಟ ಇಂಗ್ಲೆಂಡ್‌!

ಭಾರತ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ಆರಂಭಿಸಿದ್ದು ಆರಂಭದಲ್ಲೇ ಆಘಾತ ಅನುಭವಿಸಿದೆ. ಕೊನೆಯ ಪಂದ್ಯದಲ್ಲಿ ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಭಾರತ ಸತತವಾಗಿ 10ನೇ ಬಾರಿ ಟಾಸ್ ಸೋತು ದಾಖಲೆ ಬರೆಯಿತು.

india made three changes in 3rd odi against england

ಟಾಸ್ ಬಳಿಕ ಮಾತನಾಡಿದ ಇಂಗ್ಲೆಂಡ್ ನಾಯಲ ಜೋಸ್ ಬಟ್ಲರ್, ನಾವು ಮೊದಲು ಬೌಲಿಂಗ್ ಮಾಡುತ್ತೇವೆ. ಪಿಚ್ ಆರಂಭದಲ್ಲಿ ವೇಗಿಗಳಿಗೆ ನೆರವು ನೀಡುವ ಸಾಧ್ಯತೆ ಇದ್ದು ಬಳಿಕ ಸ್ಪಿನ್‌ಗೆ ಸಹಾಯ ಮಾಡಲಿದೆ ಎಂದು ನಿರೀಕ್ಷೆ ಮಾಡಿದ್ದೇವೆ. ಮೊದಲ ಎರಡು ಪಂದ್ಯಗಳಲ್ಲಿ ನಾವು ಮೊದಲು ಬ್ಯಾಟಿಂಗ್ ಮಾಡಿದ್ದೇವೆ. ಚಾಂಪಿಯನ್ಸ್ ಟ್ರೋಫಿ ಇರುವ ಕಾರಣ ಈಗ ಮೊದಲು ಬೌಲಿಂಗ್ ಮಾಡಲಿದ್ದು, ಚೇಸಿಂಗ್ ಮಾಡಿ ಗೆಲ್ಲುವ ವಿಶ್ವಾಸವಿದೆ. ಜೇಮಿ ಓವರ್ಟನ್‌ ಬದಲಾಗಿ ಟಾಮ್ ಬಾಂಟನ್ ಆಡಲಿದ್ದಾರೆ ಎಂದು ಹೇಳಿದರು.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮಾತನಾಡಿ, ನಾವು ಮೊದಲು ಬ್ಯಾಟ್ ಮಾಡಬೇಕು ಎಂದು ಬಯಸಿದ್ದೆವು. ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವುದು ಮುಖ್ಯವಾಗುತ್ತದೆ. ಕೊನೆಯ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇವೆ. ಹೊಸ ಆಟಗಾರರು ವಿಶ್ವಾಸದಿಂದ ಆಡುತ್ತಿರುವುದು ಸಂತೋಷದ ಸಂಗತಿಯಾಗಿದೆ. ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿದ್ದು, ವರುಣ್ ಚಕ್ರವರ್ತಿ ಕೆಮ್ಮಿನಿಂದ ಬಳಲುತ್ತಿದ್ದಾರೆ. ಈ ಮೂವರು ತಂಡದಿಂದ ಹೊರಗುಳಿಯಲಿದ್ದು ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್ ಮತ್ತು ಅರ್ಷದೀಪ್ ಸಿಂಗ್ ಆಡಲಿದ್ದಾರೆ ಎಂದು ಹೇಳಿದರು.

ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಗಿದ್ದು, ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ನಾಯಕ ರೋಹಿತ್ ಶರ್ಮಾ ಅಹಮಾದಾಬ್ ಪಂದ್ಯದಲ್ಲಿ ಕೇವಲ 1 ರನ್ ಗಳಿಸಿ ಔಟಾಗಿದ್ದಾರೆ.

ಉಭಯ ತಂಡಗಳ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ಇಂಗ್ಲೆಂಡ್: ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್, ಲಿಯಾಮ್ ಲಿವಿಂಗ್‌ಸ್ಟೋನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+