IND Vs ENG ODI: ಅಫ್ಘಾನ್ ವಿರುದ್ಧ ಶತಕ ಬಾರಿಸಿದರೂ ಯಶಸ್ವಿ ಜೈಸ್ವಾಲ್‌ಗೆ ಟೀಮ್ ಇಂಡಿಯಾಲ್ಲಿ ಸಿಗದ ಸ್ಥಾನ, ಕಾರಣ ಏನು?

IND Vs ENG: ಮುಂಬರುವ ಇಂಗ್ಲೆಂಡ್ ಪ್ರವಾಸದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. ಆದರೆ ಶನಿವಾರವಷ್ಟೇ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಜೇಯ 110 ರನ್ ಕಲೆಹಾಕಿದ್ದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರನ್ನು ತಂಡದಿಂದ ಕೈಬಿಟ್ಟಿರುವುದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಐಪಿಎಲ್ 2026ರ ಫೈನಲ್ ಪಂದ್ಯದ ವೇಳೆ ಗಾಯಕ್ಕೆ ಒಳಗಾಗಿದ್ದ ವಿರಾಟ್ ಕೊಹ್ಲಿ ಅವರು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡು ಕೇವಲ 6 ಪಂದ್ಯಗಳಲ್ಲಿ 2 ಶತಕ ದಾಖಲಿಸಿದ್ದರು. ಆದರೆ ಇಂಗ್ಲೆಂಡ್ ಸರಣಿಗೆ ವಿರಾಟ್ ಕೊಹ್ಲಿ ಅವರ ಪುನರಾಗಮನದಿಂದಾಗಿ ಜೈಸ್ವಾಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಯಿತು. ಬಿಸಿಸಿಐ ಪ್ರಕಾರ, ಇನ್ನೂ ಕೊಹ್ಲಿ ಅವರ ಆಯ್ಕೆಯು ಸಂಪೂರ್ಣವಾಗಿ ಫಿಟ್ನೆಸ್ ಕ್ಲಿಯರೆನ್ಸ್ ಮೇಲೆ ಅವಲಂಬಿತವಾಗಿದೆ.

India ODI Squad vs England 2026 Jaiswal Dropped Gill Named Captain Know Complete details

ಬುಮ್ರಾ ಎಂಟ್ರಿ, ಸಿರಾಜ್‌ಗೆ ಔಟ್

ಅಫ್ಘಾನಿಸ್ತಾನ ಸರಣಿ ಹಾಗೂ ಇಂಗ್ಲೆಂಡ್-ಐರ್ಲೆಂಡ್ ಟಿ20 ಸರಣಿಗಳಿಂದ ವಿಶ್ರಾಂತಿ ಪಡೆದಿದ್ದ ಸ್ಟಾರ್ ವೇಗಿ ಜಸ್‌ಪ್ರಿತ್ ಬುಮ್ರಾ ಏಕದಿನ ತಂಡಕ್ಕೆ ಮರಳಿದ್ದಾರೆ. 2023ರ ಏಕದಿನ ವಿಶ್ವಕಪ್ ಫೈನಲ್ ಬಳಿಕ ಬುಮ್ರಾ ಆಡಲಿರುವ ಮೊದಲ ಏಕದಿನ ಸರಣಿ ಇದಾಗಿದೆ. ಬುಮ್ರಾ ಅವರ ಆಗಮನದಿಂದಾಗಿ ಪ್ರಿನ್ಸ್ ಯಾದವ್ ತಂಡದಿಂದ ಹೊರಬಿದ್ದಿದ್ದಾರೆ. ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಅವರನ್ನು ಈ ಪ್ರವಾಸದ ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ. ಆದರೆ ಹರ್ಷಿತ್ ರಾಣಾ ತಂಡಕ್ಕೆ ಮರಳಿದ್ದು, ಭರವಸೆಯ ಬೌಲರ್ ಗುರ್ನೂರ್ ಬ್ರಾರ್ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಗಿಲ್‌ ನಾಯಕ, ಅಯ್ಯರ್‌ಗೆ ಉಪನಾಯಕನ ಪಟ್ಟ

ಮುಂಬರುವ ಜುಲೈ 14ರಿಂದ ಆರಂಭವಾಗಲಿರುವ ಈ ಏಕದಿನ ಸರಣಿಯಲ್ಲಿ ಶುಭ್ಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ. ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. ಹಿರಿಯ ಆಟಗಾರ ರೋಹಿತ್ ಶರ್ಮಾ ತಂಡದಲ್ಲಿದ್ದು, ಗಿಲ್ ಅವರೊಂದಿಗೆ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ವಿಕೆಟ್ ಕೀಪರ್‌ಗಳಾಗಿ ಕೆ.ಎಲ್. ರಾಹುಲ್ ಮತ್ತು ಇಶಾನ್ ಕಿಶನ್ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ಆಲ್ ರೌಂಡರ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಮರಳಿದ್ದಾರೆ. ಗಾಯದ ಕಾರಣ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಇಬ್ಬರೂ ಅಲಭ್ಯರಾಗಿದ್ದಾರೆ.

ಭಾರತ ಏಕದಿನ ಸರಣಿಯ ವೇಳಾಪಟ್ಟಿ

* 1ನೇ ಏಕದಿನ ಪಂದ್ಯ: ಜುಲೈ 14 - ಎಡ್ಜ್‌ಬಾಸ್ಟನ್

* 2ನೇ ಏಕದಿನ ಪಂದ್ಯ: ಜುಲೈ 16 - ಸೋಫಿಯಾ ಗಾರ್ಡನ್ಸ್ (ಕಾರ್ಡಿಫ್)

* 3ನೇ ಏಕದಿನ ಪಂದ್ಯ: ಜುಲೈ 19 - ಲಾರ್ಡ್ಸ್

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.

ಐರ್ಲೆಂಡ್ ಟಿ20 ಸರಣಿಯಿಂದ ವರುಣ್ ಚಕ್ರವರ್ತಿ ಔಟ್

ಬಿಸಿಸಿಐ ಮತ್ತೊಂದು ಪ್ರಮುಖ ಅಪ್ಡೇಟ್ ನೀಡಿದ್ದು, ಐಪಿಎಲ್ 2026ರ ವೇಳೆ ಪಾದದ ಗಾಯಕ್ಕೆ ಒಳಗಾಗಿದ್ದ ಸ್ಪಿನ್ನರ್ ವರುಣ್ ಚಕ್ರವರ್ತಿ ಇನ್ನೂ ಚೇತರಿಸಿಕೊಳ್ಳದ ಕಾರಣ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಪ್ರಿನ್ಸ್ ಯಾದವ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ

ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+