U19 World Cup: ಬಾಂಗ್ಲಾದೇಶದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತದ ಯುವಪಡೆ

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಶುಭಾರಂಭ ಮಾಡಿದೆ.

ಶನಿವಾರ ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ 84 ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 96 ಎಸೆತಗಳಲ್ಲಿ 76 ರನ್ ಗಳಿಸಿದ ಆರಂಭಿಕ ಆಟಗಾರ ಆದರ್ಶ್ ಸಿಂಗ್ ಆಟದ ನೆರವಿನಿಂದ ಸವಾಲಿನ ಮೊತ್ತ ಕಲೆಹಾಕಿತು.

India Secures Convincing 84-Run Victory Over Bangladesh in U19 World Cup

50 ಓವರ್ ಗಳಲ್ಲಿ ಭಾರತ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಆದರ್ಶ್ ಸಿಂಗ್ 76, ನಾಯಕ ಉದಯ್ ಶರಣ್ 64 ರನ್ ಗಳಿಸುವ ಮೂಲಕ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. ಉಳಿದಂತೆ ಪ್ರಿಯಾಂಶು ಮೋಲಿಯಾ 23, ಅರವೆಲ್ಲಿ ಅವಿನಾಶ್ 23, ಸಚಿನ್ ದಾಸ್ 26 ರನ್ ಗಳಿಸಿದರು. ಬಾಂಗ್ಲಾದೇಶದ ಪರವಾಗಿ ಮಾರುಫ್ ಮೃಧ 5 ವಿಕೆಟ್ ಪಡೆಯುವ ಮೂಲಕ ಭಾರತದ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕಿದರು.

ಸೌಮಿ ಪಾಂಡೆ ಮಾರಕ ಬೌಲಿಂಗ್

ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ ಭಾರತದ ಬಿಗಿ ಬೌಲಿಂಗ್ ದಾಳಿಯೆದುರು ರನ್ ಗಳಿಸಲು ಪರದಾಡಿತು. ಮೊಹಮ್ಮದ್ ಶಿಹಾದ್ ಜೇಮ್ಸ್ 54 ರನ್, ಅರಿಫುಲ್ ಇಸ್ಲಾಮ್ 41 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ಕ್ರೀಸ್‌ನಲ್ಲಿ ಹೆಚ್ಚುಹೊತ್ತು ನಿಲ್ಲಲಿಲ್ಲ.

ಅಂತಿಮವಾಗಿ ಬಾಂಗ್ಲಾದೇಶ 45.5 ಓವರ್ ಗಳಲ್ಲಿ 167 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಸೌಮಿ ಪಾಂಡೆ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದರೆ, ಮುಶೀರ್ ಖಾನ್ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಭಾರತ ಮುಂದಿನ ಪಂದ್ಯದಲ್ಲಿ ಗುರುವಾರ ಐರ್ಲೆಂಡ್‌ ತಂಡವನ್ನು ಎದುರಿಸಲಿದೆ.

ಭಾರತವು ಬಾಂಗ್ಲಾದೇಶ, ಐರ್ಲೆಂಡ್ ಮತ್ತು ಯುನೈಟೆಡ್ ಸ್ಟೇಟ್ಸ್ ಜೊತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಮೂರು ಇತರ ಗುಂಪುಗಳಿವೆ ಮತ್ತು ಇದರ ನಂತರ ಸೂಪರ್ ಸಿಕ್ಸ್ ಹಂತವು ನಡೆಯಲಿದ್ದು, ಇದರಲ್ಲಿ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಅದರ ನಂತರ ಫೆಬ್ರವರಿ 6 ಮತ್ತು 8 ರಂದು ಸೆಮಿಫೈನಲ್ ಮತ್ತು ಫೆಬ್ರವರಿ 11 ರಂದು ಫೈನಲ್ ಪಂದ್ಯ ನಡೆಯಲಿದೆ.

ಭಾರತದ ಗುಂಪು ಹಂತದ ಪಂದ್ಯಗಳು ಬ್ಲೋಮ್‌ಫಾಂಟೈನ್‌ನಲ್ಲಿ ನಡೆಯಲಿವೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದ ನಂತರ, ಭಾರತವು ಜನವರಿ 25 ರಂದು ಐರ್ಲೆಂಡ್ ತಂಡವನ್ನು ಎದುರಿಸುತ್ತದೆ. ಯುನೈಟೆಡ್ ಸ್ಟೇಟ್ಸ್ ವಿರುದ್ಧ ಭಾರತದ ಕೊನೆಯ ಗುಂಪು ಪಂದ್ಯವು ಜನವರಿ 28 ರಂದು ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+