ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ವನಿತೆಯರಿಗೆ ಭರ್ಜರಿ ಜಯ
ಭಾರತ ಮಹಿಳಾ ಕ್ರಿಕೆಟ್ ತಂಡ ಚೆನ್ನೈ ನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ, ಮೂರೇ ದಿನದಲ್ಲಿ ಗೆದ್ದು ಬೀಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ವನಿತೆಯರು ಅಬ್ಬರಿಸಿದರು.
ಎಂ.ಚಿದಂಬರಂ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ವನಿತೆಯರು 6 ವಿಕೆಟ್‌ಗೆ 603 ರನ್ ಸೇರಿಸಿ ಡಿಕ್ಲೇರ್ ಮಾಡಿಕೊಂಡರು. ಇದಕ್ಕುತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ 266 ರನ್‌ಗಳಿಗೆ ಆಲೌಟ್ ಆಯಿತು. ಫಾಲೋ ಆನ್ ಪಡೆದು ಬ್ಯಾಟ್ ಮಾಡಿದ ಪ್ರವಾಸಿ ತಂಡ, ಸೋಮವಾರ 2 ವಿಕೆಟ್ ನಷ್ಟಕ್ಕೆ 232 ರನ್ ಕಲೆ ಹಾಕಿತ್ತು.

ಆದರೆ ಟೀಮ್ ಇಂಡಿಯಾ ವನಿತೆಯರ ಬಿಗುವಿನ ದಾಳಿಯ ನೆರವಿನಿಂದ ದಕ್ಷಿಣ ಆಫ್ರಿಕಾ 373 ರನ್‌ಗಳಿಗೆ ಸರ್ವ ಪತನ ಕಂಡಿತು. 93 ರನ್ ಸಿಡಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಕೊಂಡಿದ್ದ ನಾಯಕಿ ಲಾರಾ ವೊಲ್ವಾರ್ಡ್ಟ್ ಅಮೋಘ ಇನ್ನಿಂಗ್ಸ್ ಪ್ರದರ್ಶನ ನೀಡಿದರು. ಇವರ ಸಮಯೋಚಿತ ಆಟದ ನೆರವಿನಿಂದಲೇ ದಕ್ಷಿಣ ಆಫ್ರಿಕಾ ಅಲ್ಪ ಮುನ್ನಡೆ ಸಾಧಿಸಲು ನೆರವಾಯಿತು.
ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ನಾಡಿನ್ ಡಿ ಕ್ಲರ್ಕ್ ಸೊಗಸಾದ ಇನ್ನಿಂಗ್ಸ್ ಆಡಿದರು. ಯುವ ಆಟಗಾರ್ತಿಯನ್ನು ಕಟ್ಟಿ ಹಾಕಲು ಭಾರತೀಯ ಬೌಲರ್ಸ್ ವಿಫಲರಾದರು. ಇವರು 185 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ನೆರವಿನಿಂದ 61 ರನ್ ಸಿಡಿಸಿ ತಂಡಕ್ಕೆ ನೆರವಾದರು.
ಭಾರತದ ಪರ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್, ಸ್ನೇಹಾ ರಾಣಾ, ದೀಪ್ತಿ ಶರ್ಮಾ ತಲಾ ಎರಡು ವಿಕೆಟ್ ಕಬಳಿಸಿದರು. ಸಾಧಾರಣ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ವಿಕೆಟ್ ನಷ್ಟವಿಲ್ಲದೆ ಗುರಿ ಮುಟ್ಟಿ ಸಂಭ್ರಮಿಸಿತು.












Click it and Unblock the Notifications